Homeಕರ್ನಾಟಕದೇವಾಲಯ ನಿರ್ಮಾಣ ವಿವಾದದ ಬಳಿಕ ಬೆಂಗಳೂರು ವಿವಿಯಲ್ಲಿ ದಿಢೀರನೆ ಗಣಪತಿ ಪ್ರತಿಷ್ಟಾಪನೆ; ಆರೋಪ

ದೇವಾಲಯ ನಿರ್ಮಾಣ ವಿವಾದದ ಬಳಿಕ ಬೆಂಗಳೂರು ವಿವಿಯಲ್ಲಿ ದಿಢೀರನೆ ಗಣಪತಿ ಪ್ರತಿಷ್ಟಾಪನೆ; ಆರೋಪ

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ದೇವಸ್ಥಾನವನ್ನು ನಿಲ್ಲಿಸಬೇಕು, ವಿದ್ಯಾರ್ಥಿಗಳು ಮತ್ತು ಅದ್ಯಾಪಕರುಗಳನ್ನು ‘ಕಿಡಿಗೇಡಿಗಳು’ ಎಂದು ಕರೆದ ಬಿಬಿಎಂಪಿ ಆಯುಕ್ತರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗುರುವಾರ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಅಧ್ಯಾಪಕರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಆದರೆ ಇಷ್ಟೆಲ್ಲದರ ನಡುವೆ ದಿಢೀರನೇ ಗಣಪತಿ ಪ್ರತಿಷ್ಟಾಪನೆ ಮಾಡಿರುವ ಆರೋಪ ಬಂದಿದೆ. ಈ ಕುರಿತು ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿದ್ದಾರೆ.

“ಇಂದು ಬೆಳಿಗ್ಗೆ ಬೆಂಗಳೂರು ವಿಶ್ವವಿದ್ಯಾನಿಯದ ಪರೀಕ್ಷಾ ಭವನದಲ್ಲಿ ಗಣೇಶನನ್ನು ಕೂರಿಸಲಾಗಿದೆ. ವಿದ್ಯಾರ್ಥಿಗಳನ್ನು ಉದ್ದೇಶ ಪೂರ್ವಕವಾಗಿ ಗಲಭೆಯ ಕಡೆಗೆ ಪ್ರಚೋದಿಸುವ ಹುನ್ನಾರ ಇದಾಗಿದೆ” ಎಂದು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮನೋಜ್ ಆಝಾದ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಗಣಪತಿ ಹಬ್ಬ ಬಂದು ಬಹಳ ದಿನಗಳ ನಂತರ ಇಲ್ಲಿ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ದೇವಾಲಯ ಪ್ರತಿಷ್ಠಾಪನೆ ವಿರುದ್ಧ ವಿದ್ಯಾರ್ಥಿಗಳು ಹೋರಾಡುತ್ತಿರುವ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ. ಜೊತೆಗೆ ಕೆಲವರು ಕ್ಯಾಂಪಸ್ ಒಳಗೆ ಬಂದು ಭಗವದ್ಗೀತೆಯನ್ನು ಹಂಚುತ್ತಿದ್ದಾರೆ” ಎಂದು ದೂರಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಅಕ್ರಮವಾಗಿ ನಿರ್ಮಿಸುತ್ತಿರುವ ದೇವಸ್ಥಾನ ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಅಲ್ಲಿನ ಪ್ರಾಧ್ಯಾಪಕರುಗಳು ಬುಧವಾರ ಪ್ರತಿಭಟನೆ ನಡೆಸಿದ್ದರು. ಈ ನಡುವೆ, ಪ್ರತಿಭಟನೆ ನಡೆಸಿದ ಅಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳನ್ನು ಬಿಬಿಎಂಪಿ ಆಯುಕ್ತರು ‘ಕಿಡಿಗೇಡಿಗಳು’ ಎಂದು ಕರೆದಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು. ಹೀಗಾಗಿ ಅಕ್ರಮ ದೇವಸ್ಥಾನ ನಿರ್ಮಾಣವನ್ನು ನಿಲ್ಲಿಸಬೇಕು ಮತ್ತು ವಿದ್ಯಾರ್ಥಿಗಳು ಮತ್ತು ಅದ್ಯಾಪಕರುಗಳನ್ನು ಕಿಡಿಗೇಡಿಗಳು ಎಂದು ಕರೆದ ಬಿಬಿಎಂಪಿ ಆಯುಕ್ತರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದ್ದರು.

ಘಟನೆ ಏನು? 

ರಸ್ತೆಯೊಂದರ ವಿಸ್ತರಣೆ ನಡೆಯುತ್ತಿರುವುದರಿಂದ ಅಲ್ಲಿದ್ದ ಗಣೇಶ ದೇವಸ್ಥಾನ ತೆರವು ಮಾಡಲಾಗುತ್ತಿದೆ. ಈ ಹಿನ್ನಲೆಯಲ್ಲಿ ಅಲ್ಲಿದ್ದ ದೇವಸ್ಥಾನವನ್ನು ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಬೇಡಿಕೆ ಇಟ್ಟಿದ್ದರು. ಅವರಿಗೆ ಬಿಬಿಎಂಪಿ ಕೂಡಾ ಅನುಮತಿ ನೀಡಿತ್ತು ಎಂದು ತಿಳಿದು ಬಂದಿದೆ. ಹೀಗಾಗಿ ಅಲ್ಲಿರುವ ದೇವಸ್ಥಾನವನ್ನು ವಿಶ್ವವಿದ್ಯಾಲಯದ ಆಡಳಿತ ಕಚೇರಿ ಇರುವ ಬಳಿಯಲ್ಲಿ ಉಪ ಕುಲಪತಿಯ ಅನುಮತಿಯಿಲ್ಲದೆ ಅಕ್ರಮವಾಗಿ ನಿರ್ಮಾಣ ಮಾಡಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳು ಅದರ ನಿರ್ಮಾಣಕ್ಕೆ ವಿರೋಧ ಮಾಡಿದ್ದಾರೆ.

ಇದನ್ನೂ ಓದಿರಿ: ಪ್ರವಾಹ: ಅಭಿವೃದ್ಧಿಯ ಭ್ರಷ್ಟಾಚಾರ ಮತ್ತು ಅಸಂಬದ್ಧತೆಗಳಿಂದ ಬೆಂಗಳೂರನ್ನು ಕಾಪಾಡಿ!

‘‘2000-ಯುಜಿಸಿ ಕಾಯ್ದೆ ಪ್ರಕಾರ, ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಸಂಸ್ಥೆ ಮತ್ತು ಕಟ್ಟಡಗಳಿಗೆ ಅವಕಾಶವಿಲ್ಲ. ಈ ನಿಯಮ ಇದ್ದರು ಕೂಡಾ ಅತಿಕ್ರಮಣ ಮಾಡಿ ದೇವಸ್ಥಾನವನ್ನು ಕಟ್ಟುತ್ತಿದ್ದಾರೆ. ಎರಡು ತಿಂಗಳ ಹಿಂದೆಯೆ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿದ್ದೆವು. ಆ ವೇಳೆ ಉಪ ಕುಲಪತಿ ಅದರ ಕಾಮಗಾರಿಯನ್ನು ನಿಲ್ಲಿಸಿದ್ದರು. ಆದರೆ ಇಂದು ಏಕಾಏಕಿ ತೀರ್ಮಾನಗಳನ್ನು ತೆಗೆದುಕೊಂಡು, ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ರಕ್ಷಣೆಯೊಂದಿಗೆ ಕಟ್ಟಡವನ್ನು ಕಟ್ಟುತ್ತಿದ್ದಾರೆ” ಎಂದು ವಿದ್ಯಾರ್ಥಿಗಳು ದೂರಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡವನ್ನು ಜಗತ್ತಿನ ಮುಂದೆ ಬಿಚ್ಚಿಟ್ಟ ಪ್ಯಾಲೆಸ್ತೀನ್‌ ಪತ್ರಕರ್ತರಿಗೆ ‘2024ರ ಯುನೆಸ್ಕೋ...

0
ಗಾಝಾದಲ್ಲಿ ಇಸ್ರೇಲ್‌ ನಡೆಸಿದ ಹತ್ಯಾಕಾಂಡದ ಬಗ್ಗೆ ವರದಿ ಮಾಡಿದ ಪ್ಯಾಲೆಸ್ತೀನ್ ಪತ್ರಕರ್ತರನ್ನು 2024ರ ಯುನೆಸ್ಕೋ/ಗಿಲ್ಲೆರ್ಮೊ ಕ್ಯಾನೊ ವರ್ಲ್ಡ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಂತರಾಷ್ಟ್ರೀಯ ಮಾಧ್ಯಮ ವೃತ್ತಿಪರ ತೀರ್ಪುಗಾರರ ಶಿಫಾರಸಿನ ಮೇರೆಗೆ ವಿಜೇತರನ್ನು...