Homeಮುಖಪುಟಕರ್ನಾಟಕದ ಜಯಭೇರಿ ಬೆನ್ನಲ್ಲೆ ಮುಂಬರುವ 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟ ಕಾಂಗ್ರೆಸ್

ಕರ್ನಾಟಕದ ಜಯಭೇರಿ ಬೆನ್ನಲ್ಲೆ ಮುಂಬರುವ 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟ ಕಾಂಗ್ರೆಸ್

- Advertisement -
- Advertisement -

ಸತತ ಸೋಲುಗಳ ಅಥವಾ ಆಪರೇಷನ್ ಕಮಲದ ಮೂಲಕ ಹಲವು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದ ಕಾಂಗ್ರೆಸ್ ಪಕ್ಷಕ್ಕೆ ಹಿಮಾಚಲ ಪ್ರದೇಶ ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಗಳ ಗೆಲುವು ಹೊಸ ಹುಮ್ಮಸ್ಸು ನೀಡಿದೆ. ಅದರಲ್ಲಿಯೂ ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ನಂತರ ಮತ್ತು ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ನಂತರ ಕಾರ್ಯಕರ್ತರಲ್ಲಿ ಉತ್ಸಾಹ ಹಿಮ್ಮಡಿಯಾಗಿದ್ದು, ಕಾಂಗ್ರೆಸ್ ಹೊಸ ರೀತಿಯಲ್ಲಿ ಕಾಣಿಸಿಕೊಳ್ಳುತ್ತಿದೆ. ಸದ್ಯ ಕರ್ನಾಟಕದಲ್ಲಿ ಭರ್ಜರಿ ಬಹುಮತ ಸಾಧಿಸಿರುವ ಕಾಂಗ್ರೆಸ್‌ನ ಮುಂದಿನ ಹಾದಿ ಅಷ್ಟು ಸುಲಭವಿಲ್ಲ. 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ 2024ರ ಲೋಕಸಭಾ ಚುನಾವಣೆಯಲ್ಲಿಯೂ ಕಮಾಲ್ ಮಾಡಲು ಯತ್ನಿಸುತ್ತಿದೆ. ಅದರ ಪಕ್ಷಿನೋಟ ಇಲ್ಲಿದೆ.

2023 ನವೆಂಬರ್ – ಡಿಸೆಂಬರ್: ಮಧ್ಯಪ್ರದೇಶ ಚುನಾವಣೆ

2023ರ ನವೆಂಬರ್‌ನಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದೆ. ಕಳೆದ 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆದಿತ್ತು. ಒಟ್ಟು 230 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 114 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಎಸ್‌ಪಿ, ಸಮಾಜವಾದಿ ಪಕ್ಷ ಮತ್ತು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 116 ಸ್ಥಾನಗಳ ಬಹುಮತ ಸಾಧಿಸಿ ಕಮಲ್ ನಾಥ್ ನೇತೃತ್ವದಲ್ಲಿ ಸರ್ಕಾರ ರಚಿಸಿತು. ಆದರೆ ಒಂದೇ ವರ್ಷದಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ಬಣ ಆಪರೇಷನ್ ಕಮಲಕ್ಕೆ ಬಲಿಯಾದ ಪರಿಣಾಮ ಅಧಿಕಾರ ಕಳೆದುಕೊಳ್ಳಬೇಕಾಯಿತು. ಶಾಸಕರನ್ನು ಕೊಳ್ಳುವ ಮೂಲಕ ಮತ್ತೆ ಅಧಿಕಾರಕ್ಕೆ ಬಂದ ಬಿಜೆಪಿಯ ಶಿವರಾಜ್ ಸಿಂಗ್ ಚೌಹಾಣ್ ಸಿಎಂ ಆಗಿದ್ದಾರೆ. ಕರ್ನಾಟಕದಂತೆ ಮಧ್ಯಪ್ರದೇಶದಲ್ಲಿಯೂ ಆಡಳಿತ ವಿರೋಧಿ ಅಲೆ ಇದೆ. ಹಾಗಾಗಿ ಮಧ್ಯಪ್ರದೇಶದಲ್ಲಿಯೂ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲ್ಲುವ ವಿಶ್ವಾಸ ಹೊಂದಿದೆ.

2023 ನವೆಂಬರ್ – ಡಿಸೆಂಬರ್: ಚತ್ತೀಸ್‌ಘಡ ಚುನಾವಣೆ

90 ವಿಧಾನಸಭಾ ಕ್ಷೇತ್ರಗಳ ಚತ್ತೀಸ್‌ಘಡದಲ್ಲಿ ಇದೇ ನವೆಂಬರ್-ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 68 ಸ್ಥಾನಗಳಲ್ಲಿ ಗೆದ್ದು ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ, ಭೂಪೇಶ್ ಭಾಘೇಲ್ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಚತ್ತೀಸ್‌ಘಡ ಸ್ವತಂತ್ರ ರಾಜ್ಯವಾದ ನಂತರ ಬಿಜೆಪಿ ಮೂರು ಬಾರಿ ಸತತವಾಗಿ ಗೆದ್ದುಬಂದಿತ್ತು. ಬಿಜೆಪಿ ಓಟಕ್ಕೆ ಬ್ರೇಕ್ ಹಾಕಿದ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಈ ವರ್ಷವೂ ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ಸರ್ವ ಪ್ರಯತ್ನ ನಡೆಸಲಿದೆ.

2023 ನವೆಂಬರ್ – ಡಿಸೆಂಬರ್: ರಾಜಸ್ಥಾನ ಚುನಾವಣೆ

200 ವಿಧಾನಸಭಾ ಕ್ಷೇತ್ರಗಳಿರುವ ರಾಜಸ್ಥಾನದಲ್ಲಿ ಸದ್ಯ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. 2018ರ ಚುನಾವಣೆಯಲ್ಲಿ ಫೀನಿಕ್ಸ್‌ನಂತೆ ಎದ್ದುಬಂದ ಕಾಂಗ್ರೆಸ್ ಬರೋಬ್ಬರಿ 100 ಸ್ಥಾನಗಳನ್ನು ಗೆಲ್ಲುವ ಮೂಲಕ, ಬಿಎಸ್‌ಪಿ, ಪಕ್ಷೇತರರನ್ನು ಪಕ್ಷಕ್ಕೆ ಸೆಳೆದುಕೊಂಡು ಸರಳ ಬಹುಮತ ಸಾಧಿಸಿದೆ. ಅಶೋಕ್ ಗೆಹ್ಲೋಟ್ ಮುಖ್ಯಮಂತ್ರಿಯಾಗಿದ್ದರೆ, ಸಚಿನ್ ಪೈಲಟ್ ಅವರ ಮಗ್ಗುಲ ಮುಳ್ಳಾಗಿ ಕಾಡುತ್ತಿದ್ದಾರೆ. ತಾನು ಸಿಎಂ ಆಗಬೇಕೆಂದು ಹಠ ಹಿಡಿದಿದ್ದ ಸಚಿನ್ ಪೈಲಟ್ ಬಣ ಕಟ್ಟಿಕೊಂಡು ಬ್ಲಾಕ್‌ ಮೇಲ್ ಮಾಡುತ್ತಲೇ ಇದ್ದಾರೆ. ಸದ್ಯ ತಮ್ಮದೇ ಸರ್ಕಾರದ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿರುವ ಅವರು ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಜನ ಸಂಘರ್ಷ್ ಯಾತ್ರೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಮೇಲೆ ಆಡಳಿತ ವಿರೋಧಿ ಅಲೆ ಕೂಡ ಬೀಸುತ್ತಿದೆ. ಹಾಗಾಗಿ ಈ ಬಾರಿ ರಾಜಸ್ಥಾನ ಉಳಿಸಿಕೊಳ್ಳುವುದು ಕಾಂಗ್ರೆಸ್‌ಗೆ ಕಷ್ಟಕರವಾಗಿದೆ. ಆದರೂ ಪ್ರಯತ್ನ ಮುಂದುವರೆಸಿದೆ.

2023 ನವೆಂಬರ್ – ಡಿಸೆಂಬರ್: ತೆಲಂಗಾಣ ಚುನಾವಣೆ

ಆಂಧ್ರ ಪ್ರದೇಶ ರಾಜ್ಯದಿಂದ 2014ರಿಂದ ಬೇರ್ಪಟ್ಟಿರುವ ತೆಲಂಗಾಣದಲ್ಲಿ 119 ವಿಧಾನಸಭಾ ಕ್ಷೇತ್ರಗಳಿವೆ. ಬಹುಮತಕ್ಕೆ 60 ಸ್ಥಾನಗಳ ಅಗತ್ಯವಿದ್ದು 2014ರಲ್ಲಿ 63 ಸ್ಥಾನ ಗೆದ್ದಿದ್ದ ಕೆ.ಚಂದ್ರಶೇಖರ್‌ ರಾವ್‌ರವರ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷವು 2018ರಲ್ಲಿಯೂ ಸಹ 88 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿದೆ. ರಾಷ್ಟ್ರಮಟ್ಟಕ್ಕೆ ಪಕ್ಷ ವಿಸ್ತರಿಸಿರುವ ಕೆಸಿಆರ್ ಪಕ್ಷದ ಹೆಸರನ್ನು ಟಿಆರ್‌ಎಸ್ ಬದಲಿಗೆ ಬಿಆರ್‌ಎಸ್ ಎಂದು ಬದಲಿಸಿದ್ದಾರೆ. ಈಗ ನವೆಂಬರ್ ಡಿಸೆಂಬರ್‌ನಲ್ಲಿ ರಾಜ್ಯದ ಮೂರನೇ ಚುನಾವಣೆ ನಡೆಯಲಿದೆ. ಅಲ್ಲಿ ಬಿಜೆಪಿ ಪಕ್ಷ ವೇಗವಾಗಿ ಬೆಳಯುತ್ತಿದ್ದು, ಇತ್ತೀಚಿಗೆ ನಾಲ್ಕು ಜನ ಟಿಆರ್‌ಎಸ್ ಶಾಸಕರನ್ನು ಕೊಳ್ಳಲು ಹೋಗಿ ಸಿಕ್ಕಿಬಿದ್ದಿತ್ತು. ಕಾಂಗ್ರೆಸ್ ಪಕ್ಷ ಕೂಡ ಅಲ್ಲಿ ನೆಲೆ ಕಂಡುಕೊಳ್ಳಲು ಯತ್ನಿಸುತ್ತಿದೆ.

2023 ನವೆಂಬರ್ – ಡಿಸೆಂಬರ್: ಮಿಜೋರಾಂ ಚುನಾವಣೆ

ಈ ನಾಲ್ಕು ರಾಜ್ಯಗಳಲ್ಲದೇ 40 ವಿಧಾನಸಭಾ ಕ್ಷೇತ್ರಗಳ ಪುಟ್ಟ ರಾಜ್ಯ ಮಿಜೋರಾಂನಲ್ಲಿಯೂ ನವೆಂಬರ್ – ಡಿಸೆಂಬರ್‌ನಲ್ಲಿ ಚುನಾವಣೆ ನಡೆಯುತ್ತಿದೆ. ಸದ್ಯ ಅಲ್ಲಿ ಮಿಜೋ ನ್ಯಾಷನಲ್ ಫ್ರಂಟ್ ಅಧಿಕಾರದಲ್ಲಿದೆ. ಅದೇ ರೀತಿ ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಕಾಶ್ಮೀರ ಮತ್ತು ಲಡಾಖ್‌ನಲ್ಲಿಯೂ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಇಲ್ಲಿಯೂ ಕಾಂಗ್ರೆಸ್ ಪಕ್ಷ ಪ್ರಭಾವ ಬೀರುವ ಮೂಲಕ 2024ರ ಲೋಕಸಭಾ ಚುನಾವಣೆಗೆ ಸಜ್ಜುಗೊಳ್ಳಲು ಯತ್ನಿಸುತ್ತಿದೆ.

ಇದನ್ನೂ ಓದಿ: ಹಿಂದುತ್ವವಾದಿಗಳ ಒತ್ತಡ: ಮುಸ್ಲಿಂ ಯುವಕನೊಂದಿಗಿನ ಮಗಳ ಮದುವೆ ರದ್ದುಗೊಳಿಸಿದ ಬಿಜೆಪಿ ಮುಖಂಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...