Homeಮುಖಪುಟಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

ಹಲ್ದ್ವಾನಿ ಹಿಂಸಾಚಾರದ ಬಳಿಕ ಪೊಲೀಸ್‌ ದೌರ್ಜನ್ಯ: ಸ್ಥಳೀಯರ ಆರೋಪ

- Advertisement -
- Advertisement -

ಬಿಜೆಪಿ ಆಡಳಿತದ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಮಸೀದಿ ಮತ್ತು ಮದರಸಾವನ್ನು ಕೆಡವಿದ ಎರಡು ದಿನಗಳ ನಂತರ ಆ ಪ್ರದೇಶದ ಮುಸ್ಲಿಂ ನಿವಾಸಿಗಳು ಪೊಲೀಸ್ ದೌರ್ಜನ್ಯವು ತಮ್ಮನ್ನು ಭಯಭೀತಗೊಳಿಸಿದೆ ಎಂದು ಹೇಳುತ್ತಿದ್ದು, ಕೆಲವರು ಭಯದಿಂದ ಆ ಪ್ರದೇಶವನ್ನು ತೊರೆದಿದ್ದಾರೆ.

ಫೆಬ್ರವರಿ 8ರಂದು ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿದ ನಂತರ ಸ್ಥಳೀಯ ಜನರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿತ್ತು. ಈ ವೇಳೆ ಪೊಲೀಸ್ ಅಧಿಕಾರಿಗಳು ತಮ್ಮ ಮನೆಗಳಿಗೆ ನುಗ್ಗಿದರು, ಮಹಿಳೆಯರು ಸೇರಿದಂತೆ ಕುಟುಂಬದ ಸದಸ್ಯರ ಮೇಲೆ ಹಲ್ಲೆ ನಡೆಸಿದ್ದಾರೆ, ಮನೆಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ ಮತ್ತು ಮನೆಯಲ್ಲಿದ್ದ ಪುರುಷರನ್ನು ಬಂಧಿಸಿದ್ದಾರೆ ಎಂದು ಬಂಬೂಲ್ಪುರದ ನಿವಾಸಿಗಳು ಆರೋಪಿಸಿದ್ದಾರೆ.

ಸ್ಥಳೀಯ ಶಾಲೆಯೊಂದರಲ್ಲಿ ಅಡುಗೆ ಕೆಲಸ ಮಾಡುವ 38 ವರ್ಷದ ಶಮಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪೊಲೀಸ್ ಅಧಿಕಾರಿಗಳು ಶನಿವಾರ ಸಂಜೆ 4 ಗಂಟೆ ಸುಮಾರಿಗೆ ನಮ್ಮ ಮನೆಗೆ ನುಗ್ಗಿದರು. ಅವರು ನಮ್ಮ ಮನೆಯಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಪತಿಯ ಮೇಲೆ ಹಲ್ಲೆ ಮಾಡಿದ್ದಾರೆ, ನಮ್ಮನ್ನು ತಳ್ಳಿದ್ದಾರೆ. ಬಳಿಕ ಪತಿಯನ್ನು ಪೊಲೀಸರು ಕರೆದುಕೊಂಡು ಹೋಗಿದ್ದು, ಅವರು ಈಗ ಎಲ್ಲಿದ್ದಾರೆ ಎಂಬ ಬಗ್ಗೆ ನಮಗೆ ಯಾವುದೇ ಸುಳಿವು ಇಲ್ಲ ಎಂದು ಹೇಳಿದ್ದಾರೆ. ಶಮಾ ಅವರ ಪತಿ, ನಯೀಮ್(45) ಹಲ್ದ್ವಾನಿಯಲ್ಲಿ  ಮರಳನ್ನು ಸಾಗಿಸುವ ದೈನಂದಿನ ಕೂಲಿ ಕಾರ್ಮಿಕರಾಗಿದ್ದರು. ನಮಗೆ ಸಣ್ಣ ಸಣ್ಣ ಮಕ್ಕಳಿದ್ದಾರೆ, ನಮ್ಮನ್ನು ಬಿಟ್ಟುಬಿಡಿ ಎಂದು ನಾವು ಮನವಿ ಮಾಡಿದೆವು, ಈ ವೇಳೆ ಪೊಲೀಸರು ನಮಗೂ ಮಕ್ಕಳಿದ್ದಾರೆ ನಮ್ಮ ಮೇಲೆ ಏಕೆ ಕಲ್ಲು ಎಸೆದಿದ್ದೀರಿ ಎಂದು ಪ್ರಶ್ನಿಸಿದ್ದಾರೆ ಎಂದು ಹೇಳಿದ್ದಾರೆ.

ಘಟನೆ ಬಗ್ಗೆ 22 ವರ್ಷದ ಮೆಹ್ರೀನ್ ಮಾತನಾಡಿದ್ದು, ನನ್ನ ಪತಿ ಆರಿಫ್(25) ಅವರನ್ನು ಶನಿವಾರ ಸಂಜೆ 5 ಗಂಟೆಯ ಸುಮಾರಿಗೆ ನಾಲ್ಕು ಪೊಲೀಸ್ ಅಧಿಕಾರಿಗಳು ಕರೆದೊಯ್ದರು. ಏಳು ತಿಂಗಳ ಹಿಂದೆಯಷ್ಠೇ ನಮ್ಮ ವಿವಾಹವಾಗಿತ್ತು. ಅವರಿಲ್ಲದೆ ನನಗೆ ಬದುಕಲು ಸಾಧ್ಯವಿಲ್ಲ, ನಾನು ನನ್ನ ಪತಿಯನ್ನು ಭೇಟಿಯಾಗಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಉತ್ತರಾಖಂಡ್ ಪೊಲೀಸ್ ಮಹಾನಿರ್ದೇಶಕ ಅಭಿನವ್ ಕುಮಾರ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸಾಕ್ಷ್ಯಾಧಾರಗಳಿಲ್ಲದೆ ಯಾರ ವಿರುದ್ಧವೂ ಕ್ರಮ ಕೈಗೊಳ್ಳುವ ಉದ್ದೇಶ ನಮಗಿಲ್ಲ. ಫೆಬ್ರವರಿ 7ರ ಘಟನೆಗಳು ಮತ್ತು ಅವುಗಳ ನಂತರದ ಬೆಳವಣಿಗೆ ಬಗ್ಗೆ ಈಗ ಸುಳ್ಳು ಹೇಳಲಾಗುತ್ತಿದೆ. ನಾವು ಕಾನೂನಿಗೆ ಅನುಸಾರವಾಗಿ ಯಾವುದೇ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸಲು ಉದ್ದೇಶಿಸಿದ್ದೇವೆ ಎಂದು ಹೇಳಿದ್ದಾರೆ.

ಫೆಬ್ರವರಿ 8ರಂದು ಪಟ್ಟಣದ ಮುನ್ಸಿಪಲ್ ಕಾರ್ಪೊರೇಶನ್ ಬಂಭೂಲ್ಪುರದಲ್ಲಿರುವ ಮಸೀದಿ ಮತ್ತು ಮದರಸಾವನ್ನು ಸರ್ಕಾರಿ ಭೂಮಿಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದೆ ಎಂದು ಆರೋಪಿಸಿ ಪುರಸಭೆಯು ನೆಲಸಮಗೊಳಿಸಿತ್ತು. ಮಸೀದಿ ಕುರಿತ ಪ್ರಕರಣ ಉತ್ತರಾಖಂಡ ಹೈಕೋರ್ಟ್‌ನಲ್ಲಿ ಬಾಕಿ ಇರುವಾಗಲೇ ದಿಢೀರ್‌ ಎಂಬಂತೆ ಈ ಬೆಳವಣಿಗೆ ನಡೆದಿತ್ತು.

ಈ ವೇಳೆ ನಡೆದ ಹಿಂಸಾಚಾರದಲ್ಲಿ 6 ಮಂದಿ ನಾಗರಿಕರು ಸಾವನ್ನಪ್ಪಿದ್ದರು. ನೂರಾರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪೊಲೀಸರ ಪ್ರಕಾರ, ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದೆ, ಕಾರುಗಳಿಗೆ ಬೆಂಕಿ ಹಚ್ಚಿದೆ ಮತ್ತು ಬಂಭೂಲ್ಪುರ ಪೊಲೀಸ್ ಠಾಣೆಯನ್ನು ಗುಂಪು ಸುತ್ತುವರಿದಿದೆ. ಸ್ಥಳೀಯ ಆಡಳಿತವು ಫೆಬ್ರವರಿ 8ರ ಸಂಜೆ ಕರ್ಫ್ಯೂ, ಇಂಟರ್ನೆಟ್ ಸ್ಥಗಿತಗೊಳಿಸುವಿಕೆ ಮತ್ತು ಕಂಡಲ್ಲಿ ಗುಂಡು ಆದೇಶವನ್ನು ನೀಡಿತ್ತು. ಅಂದಿನಿಂದ ಬಂಭೂಲ್‌ಪುರದ ಹಿಂದೂ ಬಹುಸಂಖ್ಯಾತ ಪ್ರದೇಶದ ಬಳಿ ಪೊಲೀಸ್ ಬ್ಯಾರಿಕೇಡ್‌ಗಳು ಹಾಕಲಾಗಿದೆ ಮತ್ತು ಪತ್ರಕರ್ತರು ಮುಸ್ಲಿಮರು ವಾಸಿಸುವ ಪ್ರದೇಶಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ.

ಫೆಬ್ರವರಿ 10ರಂದು ವರದಿಗಾರರು ಆ ಪ್ರದೇಶಕ್ಕೆ ಭೇಟಿ ನೀಡಿದಾಗ, ಎಲ್ಲಾ ಅಂಗಡಿಗಳನ್ನು ಮುಚ್ಚಲಾಗಿತ್ತು ಮತ್ತು ಅನೇಕ ಮನೆಗಳ ಬಾಗಿಲುಗಳಿಗೆ ಬೀಗಗಳನ್ನು ನೇತು ಹಾಕಲಾಗಿತ್ತು. ಹತ್ತಾರು ಕಾರುಗಳು ಮತ್ತು ಬೈಕ್‌ಗಳು ಧ್ವಂಸಗೊಂಡಿದ್ದವು. ವಾಹನಗಳ ಕಿಟಕಿಗಳು ಮತ್ತು ಹೆಡ್‌ಲೈಟ್‌ಗಳನ್ನು ಪೊಲೀಸ್ ಅಧಿಕಾರಿಗಳು ಒಡೆದಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಪರ್ವೀನ್(30) ಈ ಬಗ್ಗೆ ಮಾತನಾಡಿದ್ದು, ತನ್ನ ಪತಿ ಮುಕೀಮ್ ದಿನಗೂಲಿ ನೌಕರನಾಗಿದ್ದು, ಫೆ.10ರಂದು ಸಂಜೆ ಪೊಲೀಸ್ ಅಧಿಕಾರಿಗಳು ಕರೆದೊಯ್ದರು. ಶಾಹಿದ್ (35) ತರಕಾರಿ ಮಾರಾಟಗಾರನಾಗಿದ್ದು, ಆತನನ್ನು ಸಹ ಪೊಲೀಸರು ಬಂಧಿಸಿದ್ದಾರೆ ಎಂದು ಅವರ ತಾಯಿ ಅನಿಸಾ ಹೇಳಿದ್ದಾರೆ. ಹಾರ್ಡ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡುವ ತನ್ನ ಪತಿ ಆರಿಫ್‌ನನ್ನು ಬಂಧಿಸಿದ ನಾಲ್ವರು ಪೊಲೀಸ್ ಅಧಿಕಾರಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೆಹ್ರೀನ್ ಎಂಬವರು ಆರೋಪಿಸಿದರು. ಅವಳ ಒಂದು ಕೈ ಮತ್ತು ತೊಡೆಯ ಮೇಲೆ ಹಲ್ಲೆ ನಡೆಸಲಾಗಿದೆ. ಎರಡೂ ಈಗ ಊದಿಕೊಂಡಿವೆ ಎಂದು ಅವರು ಹೇಳಿದ್ದಾರೆ.

55 ವರ್ಷದ ಶಾಹೀನ್ ತನ್ನ ಮನೆಯ ಪ್ರವೇಶದ್ವಾರದಲ್ಲಿ ಅಳುತ್ತಾ, ಜೀವನೋಪಾಯಕ್ಕಾಗಿ ಮಂಚಗಳನ್ನು ತಯಾರಿಸುವ ಕೆಲಸ ಮಾಡುತ್ತಿದ್ದ ಮಗ ಶಾರುಖ್(32)ನನ್ನು ಫೆಬ್ರವರಿ 10ರಂದು ಮಧ್ಯಾಹ್ನ 3ಗಂಟೆಗೆ ಬಂಧಿಸಲಾಗಿದೆ. ಮನೆಯೊಳಗಿದ್ದ ಟಿವಿಯನ್ನು ಧ್ವಂಸಗೊಳಿಸಿ ನಮ್ಮ ಮೇಲೆ ಹಲ್ಲೆ ನಡೆಸಿ ಮಗನನ್ನು ಎಳೆದೊಯ್ದಿದ್ದಾರೆ ಎಂದು ಹೇಳಿದ್ದಾರೆ. ಪೋಲೀಸರ ದೌರ್ಜನ್ಯದಿಂದ  ಹಲ್ದ್ವಾನಿಯಿಂದ ಮುಸ್ಲಿಮರು ವಲಸೆ ಹೋಗುವಂತಾಗಿದೆ. ನೂರಾರು ಜನರು, ಕೈಯಲ್ಲಿ ಸಾಮಾನುಗಳನ್ನು ಹಿಡಿದುಕೊಂಡು ಉತ್ತರಾಖಂಡದ ಇತರ ನಗರಗಳಿಗೆ ಮತ್ತು ಉತ್ತರಪ್ರದೇಶದ ನೆರೆಯ ಪಟ್ಟಣಗಳು ಮತ್ತು ನಗರಗಳಿಗೆ ಬಸ್ಸುಗಳನ್ನು ಹತ್ತಿದ್ದಾರೆ.

ಘಟನೆ ಬಗ್ಗೆ ಸ್ಥಳೀಯ ನಿವಾಸಿ ಪರ್ವೀನ್ ಹೇಳಿಕೆ…..

ಫೆಬ್ರವರಿ 8ರಂದು ಮಧ್ಯಾಹ್ನ 3.30ರ ಸುಮಾರಿಗೆ ನಾನು (ಪರ್ವೀನ್) ತನ್ನ ಟೆರೇಸ್‌ನಲ್ಲಿ ಬಟ್ಟೆಗಳನ್ನು ನೇತು ಹಾಕುತ್ತಿದ್ದಾಗ ಬುಲ್ಡೋಜರ್‌ಗಳು ಬಂದವು, ಡಜನ್‌ಗಟ್ಟಲೆ ಪೊಲೀಸ್ ಅಧಿಕಾರಿಗಳು ಇದ್ದರು. ಇದು ಅನಿರೀಕ್ಷಿತವಾಗಿತ್ತು ಎಂದು ಅವರು ಹೇಳಿದ್ದಾರೆ. ಸ್ಥಳೀಯ ಅಧಿಕಾರಿಗಳು ಕೆಡವಿದ ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಜಕಾರಿಯಾ ಮದರಸಾದಿಂದ ಪರ್ವೀನ್ ಅವರ ಮನೆ ಕೇವಲ 50 ಮೀಟರ್ ದೂರದಲ್ಲಿತ್ತು.

ತೆರವು ಕಾರ್ಯಾಚರಣೆ ತಡೆಯಲು ಜನರು ತಮ್ಮ ಮನೆಗಳಿಂದ ಹೊರಬಂದರು. ಸ್ಥಳೀಯ ಕೌನ್ಸಿಲರ್ ನೇತೃತ್ವದಲ್ಲಿ ಹಿರಿಯರು ಮುಂಭಾಗದಲ್ಲಿದ್ದರು. ಕಟ್ಟಡಗಳನ್ನು ಕೆಡವದಂತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲು ಪ್ರಯತ್ನಿಸಿದರು. ಧ್ವಂಸ ಮಾಡುವುದನ್ನು ತಡೆಯಲು ಮಹಿಳೆಯರು ಮದರಸಾದ ಪಕ್ಕದ ತೆರೆದ ಪ್ರದೇಶದಲ್ಲಿ ಕುಳಿತುಕೊಂಡರು. ಈ ವೇಳೆ ಪೊಲೀಸರು ಮಹಿಳೆಯರನ್ನು ಲಾಠಿಗಳಿಂದ ಹೊಡೆಯಲು ಪ್ರಾರಂಭಿಸಿದರು. ಇದು ಹಿಂಸೆಗೆ ಪ್ರೇರೇಪಿಸಿದ್ದು, ಆ ಮೇಲೆ ಕಲ್ಲು ತೂರಲು ಪ್ರಾರಂಭವಾಯಿತು ಎಂದು ಹೇಳಿದ್ದಾರೆ.

ನೈನಿತಾಲ್‌ನ ಹಿರಿಯ ಪೊಲೀಸ್ ಅಧೀಕ್ಷಕ ಪ್ರಹ್ಲಾದ್ ನಾರಾಯಣ ಮೀನಾ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಹಿಂಸಾಚಾರಕ್ಕೆ ಸಂಬಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ, ಇವರಲ್ಲಿ ಪೊಲೀಸ್ ಠಾಣೆಯ ಮೇಲೆ ದಾಳಿ, ಪೊಲೀಸ್ ಠಾಣೆಯ ಹೊರಗೆ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗಳು ಸೇರಿದ್ದಾರೆ ಎಂದು ಹೇಳಿದ್ದಾರೆ.

ಡಿಜಿಪಿ ಅಭಿನವ್ ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಪೊಲೀಸರು ತಮ್ಮ ಅಧಿಕೃತ ಕರ್ತವ್ಯಗಳ ನಿರ್ವಹಣೆಯಲ್ಲಿ ತಮ್ಮ ಆತ್ಮರಕ್ಷಣೆ ಹಕ್ಕನ್ನು ಕಾನೂನುಬದ್ಧವಾಗಿ ಚಲಾಯಿಸಿದ್ದಾರೆ. ಇದಕ್ಕೆ ನಮ್ಮಲ್ಲಿ ಸಾಕಷ್ಟು ಪುರಾವೆಗಳಿವೆ. ಇದನ್ನು ಮ್ಯಾಜಿಸ್ಟ್ರೇಟ್ ವಿಚಾರಣೆ ಮತ್ತು ಕ್ರಿಮಿನಲ್ ತನಿಖೆಯಲ್ಲಿ ಪ್ರಸ್ತುತಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಹಲ್ದ್ವಾನಿ ಹಿಂಸಾಚಾರ: ಮಾಹಿತಿ ಬಿಚ್ಚಿಟ್ಟ ಮೃತರ ಸಂಬಂಧಿಕರು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...