Homeಕರ್ನಾಟಕಜಾತಿ ಗಣತಿ ವರದಿ ಒಪ್ಪದಂತೆ ಲಿಂಗಾಯತರ ಮನವಿ: ಹೊಸ ಸಮೀಕ್ಷೆಗೆ ಪಟ್ಟು

ಜಾತಿ ಗಣತಿ ವರದಿ ಒಪ್ಪದಂತೆ ಲಿಂಗಾಯತರ ಮನವಿ: ಹೊಸ ಸಮೀಕ್ಷೆಗೆ ಪಟ್ಟು

- Advertisement -
- Advertisement -

ಒಕ್ಕಲಿಗರ ಬಳಿಕ ಲಿಂಗಾಯತ ಸಮುದಾಯದ ನಾಯಕರೂ 2015ರ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ(ಜಾತಿ) ಗಣತಿ ವರದಿಯನ್ನು ವಿರೋಧಿಸಿದ್ದಾರೆ. ಜಾತಿ ಗಣತಿ ಅವೈಜ್ಞಾನಿಕವಾಗಿದ್ದು, ಅದನ್ನು ಸ್ವೀಕರಿಸದಂತೆ ಆಗ್ರಹಿಸಿದ್ದಾರೆ.

ಶುಕ್ರವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ನಾಯಕರು ಜಾತಿ ಗಣತಿ ವರದಿ ಅಂಗೀಕರಿಸದಂತೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಪತ್ರಕ್ಕೆ ಸಿದ್ದರಾಮಯ್ಯ ಸರ್ಕಾರದ ಸಚಿವರಾದ ಎಂ.ಬಿ ಪಾಟೀಲ್, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ್ ಸೇರಿದಂತೆ, ವಿವಿಧ ಪಕ್ಷಗಳ ಸುಮಾರು 30ಕ್ಕೂ ಹೆಚ್ಚು ಶಾಸಕರು ಸಹಿ ಹಾಕಿದ್ದಾರೆ ಎನ್ನಲಾಗಿದೆ.

ಬಿಜೆಪಿ ಶಾಶಕರಾದ ಬಿವೈ ವಿಜಯೇಂದ್ರ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಲಕ್ಷಣ ಸವದಿ , ವಿಜಯಾನಂದ ಕಾಶಪ್ಪನವರ್, ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಕೂಡ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ಹಿರಿಯ ಕಾಂಗ್ರೆಸ್ ಶಾಸಕ ಮತ್ತು ವೀರಶೈವ-ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. 2015 ಜಾತಿ ಗಣತಿ ವರದಿ ಅವೈಜ್ಞಾನಿಕ, ಅವಧಿ ಮೀರಿದ್ದು ಮತ್ತು ಕ್ಷೇತ್ರ ಕಾರ್ಯದ ಕೊರತೆಯಿಂದ ಕೂಡಿದೆ ಎಂದು ಶಾಮನೂರು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಒಕ್ಕಲಿಗ ಸಮುದಾಯದಿಂದ ವಿರೋಧ

ತಿಂಗಳ ಹಿಂದೆ ಇದೇ ರೀತಿಯ ಮನವಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಒಕ್ಕಲಿಗ ಸಮುದಾಯದ ನಾಯಕರು ಸಹಿ ಹಾಕಿದ್ದರು. 2016 ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿದೆ ಮತ್ತು ವಿಶ್ವಸಾರ್ಹತೆಯ ಕೊರೆತೆಯಿದೆ ಎಂದು ಆರೋಪಿಸಿದ್ದರು.

ವರದಿಗಳ ಪ್ರಕಾರ, ಲಿಂಗಾಯತ ಸಮುದಾಯ ಸಿಎಂಗೆ ಕೊಟ್ಟಿರುವ ಮನವಿಯು ಜಾತಿ ಗಣತಿಯನ್ನು ವಿರೋಧಿಸಿಲ್ಲ. ಆದರೆ, 2015ರ ಜಾತಿ ಗಣತಿ ಅವೈಜ್ಞಾನಿಕವಾಗಿದೆ. ಅದು ಜನರ ಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ. ವರದಿಯು ರಾಜ್ಯದಲ್ಲಿ ಇರುವ ಲಿಂಗಾಯತ ಸಮುದಾಯದ ಜನ ಸಂಖ್ಯೆಯನ್ನು ಸರಿಯಾಗಿ ತೋರಿಸಿಲ್ಲ. ಜಾತಿ ಗಣತಿ ಲಿಂಗಾಯತ ಸಮುದಾಯದ ಉಪ ಜಾತಿಗಳ ನಡುವೆ ಬಿರುಕು ಮೂಡಿಸಿದೆ ಎಂದು ಹೇಳಿದೆ.

ಲಿಂಗಾಯತ ಸಮುದಾಯದ ಉಪ ಜಾತಿಗಳ ಬಗ್ಗೆ ಕ್ರಾಸ್ ವೆರಿಕಫಿಕೇಶನ್ ಮಾಡಿಲ್ಲ. ಜನರು ಹೇಳಿದ ಜಾತಿಯನ್ನು ಒಪ್ಪಿಕೊಂಡಿದೆ. ಈ ವರದಿ ಒಪ್ಪಿಕೊಳ್ಳುವುದರಿಂದ ಅರ್ಹ ಬಡವರು, ಹಿಂದುಳಿದವರು ಮತ್ತು ಮಧ್ಯಮ ವರ್ಗದ ವೀರಶೈವ ಲಿಂಗಾಯತರು ಅವರ ಮೀಸಲಾತಿ ಮತ್ತು ಇತರ ಪ್ರಯೋಜನಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ.

2015ರಲ್ಲಿ ಹೆಚ್.ಕಾಂತರಾಜು ಅವರು ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದಾಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾತಿ ಗಣತಿಗೆ ಚಾಲನೆ ನೀಡಿತ್ತು. ಈ ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ. ಪ್ರಸ್ತುತ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವೇ ಇರುವುದರಿಂದ ವರದಿಯನ್ನು ಸ್ವೀಕರಿಸಲು ಸರ್ಕಾರ ಮುಂದಾಗಿದೆ.

ಜಾತಿ ಗಣತಿ ವರದಿ ವೈಜ್ಞಾನಿಕವಾಗಿದೆ: ಹೆಚ್. ಕಾಂತರಾಜು ಸ್ಪಷ್ಟನೆ

ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವೈಜ್ಞಾನಿಕವಾಗಿದೆ. ಅದನ್ನುಅವೈಜ್ಞಾನಿಕ ಎನ್ನುವುದು ಸರಿಯಲ್ಲ ಎಂದು 25 ನವೆಂಬರ್ 2023ರಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಹೆಚ್.ಕಾಂತರಾಜು ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು.

ವರದಿಯನ್ನು ನೋಡದೆ ಹೇಳಿಕೆ ನೀಡುವುದು ಸರಿಯಲ್ಲ. ವರದಿ ಬಿಡುಗಡೆಗೂ ಮೊದಲೇ ನಿರ್ಣಯ ಮಾಡುವುದು ಆಗಬಾರದು ಎಂದಿದ್ದರು.

ಓದಿ: ಜಾತಿ ಗಣತಿ ವರದಿ ವೈಜ್ಞಾನಿಕವಾಗಿದೆ: ಹೆಚ್. ಕಾಂತರಾಜು ಸ್ಪಷ್ಟನೆ

ಜಾತಿ ಗಣತಿ ವರದಿಯ ಮೂಲ ಪ್ರತಿ ನಾಪತ್ತೆ!

ಹೆಚ್.ಕಾಂತರಾಜು ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಯ ದತ್ತಾಂಶ ಆಧರಿಸಿ ಸಿದ್ದಪಡಿಸಿದ್ದ ವರದಿಯ ಮೂಲ ಪ್ರತಿ (ಹಸ್ತಪ್ರತಿ) ಆಯೋಗದ ಕಚೇರಿಯಿಂದ ನಾಪತ್ತೆಯಾಗಿದೆ ಎಂಬ ವಿಚಾರ 23 ನವೆಂಬರ್ 2023 ರಂದು ಮುನ್ನಲೆಗೆ ಬಂದಿತ್ತು.

ಈ ವಿಚಾರವಾಗಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹಿಂದುಳಿದ ವರ್ಗಗಳ ಆಯೋಗದ ಹಾಲಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರಿಗೆ ಪತ್ರ ಬರೆದು, “2015 ರಲ್ಲಿ ಕರ್ನಾಟಕ ಸರ್ಕಾರ 180 ಕೋಟಿ ಖರ್ಚು ಮಾಡಿ ಮಾಡಿದ ಸಮೀಕ್ಷೆಯ ಮೂಲ ಪ್ರತಿಯೇ ಕಳೆದುಹೋಗಿರುವುದು ಹಾಗು ಲಭ್ಯವಿರುವ ವರದಿಯಲ್ಲಿ ಸದಸ್ಯ ಕಾರ್ಯದರ್ಶಿಯ ಸಹಿ ಇಲ್ಲದೆ ಇರುವುದು ಆಯೋಗದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ” ಎಂದಿದದ್ದರು.

ಹಿಂದುಳಿದ ವರ್ಗಗಳ ಆಯೋಗದ ಹಿಂದಿನ ಅಧ್ಯಕ್ಷರ ಆಪ್ತ ಕಾರ್ಯದರ್ಶಿಯವರಿಗೆ ನೋಟಿಸ್ ನೀಡಿ ನಂತರ ರಾಜಕೀಯ ಒತ್ತಡಕ್ಕೆ ಮಣಿದು ತನಿಖೆಯನ್ನೇ ಅರ್ಧಕ್ಕೆ ಕೈಬಿಟ್ಟಿರುವುದು ಆಶ್ಚರ್ಯದ ಸಂಗತಿ. ಈ ಕೂಡಲೇ ವರದಿ ನೈಜತೆಯ ಬಗ್ಗೆ ತನಿಖೆ ಮಾಡಬೇಕು ಹಾಗು ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದರು.

ಓದಿ:ಜಾತಿ ಗಣತಿ ವರದಿಯ ಮೂಲ ಪ್ರತಿ ನಾಪತ್ತೆ!

ಎಲ್ಲ ಬಲಿಷ್ಠರು ‘ಜಾತಿ ಗಣತಿ’ ವಿರುದ್ಧ ಒಗ್ಗಟ್ಟಾಗಿದ್ದಾರೆ; ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಜಾತಿ ಗಣತಿ ವರದಿ ಬಿಡುಗಡೆಗೆ ವಿರೋಧಿಸುತ್ತಿದ್ದಾರೆ; ನೀವು (ಬಿಜೆಪಿ) ವಿರೋಧಿಸುತ್ತಿದ್ದೀರಿ. ಬಲಿಷ್ಠ ಜಾತಿ ಜನರೆಲ್ಲಾ ಈ ವಿಚಾರದಲ್ಲಿ ಒಗ್ಗಟ್ಟಾಗಿದ್ದಾರೆ’ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಿಸೆಂಬರ್ 12ರಂದು ರಾಜ್ಯಸಭೆಯಲ್ಲಿ ಹೇಳಿದ್ದರು.

ಓದಿ: ಎಲ್ಲ ಬಲಿಷ್ಠರು ‘ಜಾತಿ ಗಣತಿ’ ವಿರುದ್ಧ ಒಗ್ಗಟ್ಟಾಗಿದ್ದಾರೆ; ಡಿಕೆಶಿ ನಿಲುವು ವಿರೋಧಿಸಿದ ಖರ್ಗೆ

ಜಾತಿ ಗಣತಿಗೆ ನನ್ನ ವಿರೋಧವಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿರಬೇಕು: ಡಿ.ಕೆ. ಶಿವಕುಮಾರ್

ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ್ದ ಡಿ.ಕೆ ಶಿವಕುಮಾರ್, ನಾನು ಜಾತಿ ಗಣತಿಗೆ ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಜಾತಿ ಗಣತಿ ಸಮೀಕ್ಷೆಯು ವೈಜ್ಞಾನಿಕ ಹಾಗೂ ವ್ಯವಸ್ಥಿತವಾಗಿ ನಡೆಯಬೇಕು ಎಂಬುದಷ್ಟೇ ನಮ್ಮ ಅಭಿಮತ ಎಂದು ಹೇಳಿದ್ದರು.

ಓದಿ: ಜಾತಿ ಗಣತಿಗೆ ನನ್ನ ವಿರೋಧವಿಲ್ಲ, ಸಮೀಕ್ಷೆ ವೈಜ್ಞಾನಿಕವಾಗಿರಬೇಕು: ಡಿ.ಕೆ. ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...