Homeಮುಖಪುಟಚಿಕ್ಕಬಳ್ಳಾಪುರ: ಮತಾಂತರ ನಿಷೇಧ ಮಸೂದೆ ಬೆನ್ನಲ್ಲೆ ದುಷ್ಕರ್ಮಿಗಳಿಂದ ಚರ್ಚ್ ಧ್ವಂಸ

ಚಿಕ್ಕಬಳ್ಳಾಪುರ: ಮತಾಂತರ ನಿಷೇಧ ಮಸೂದೆ ಬೆನ್ನಲ್ಲೆ ದುಷ್ಕರ್ಮಿಗಳಿಂದ ಚರ್ಚ್ ಧ್ವಂಸ

- Advertisement -
- Advertisement -

ರಾಜ್ಯದಲ್ಲಿ ಮತಾಂತರ ನಿಷೇಧ ಮಸೂದೆಯ ಬಗ್ಗೆ ಚರ್ಚೆಯಾಗುತ್ತಿದೆ. ವಿಧಾನಸಭೆಯಲ್ಲಿ ಮಸೂದೆ ಮಂಡನೆಯಾಗಿದ್ದು ಇಂದು (ಡಿ.23) ಭಾರೀ ಗದ್ದಲ ಸೃಷ್ಟಿಸಿದೆ. ಇದೇ ಸಂದರ್ಭದಲ್ಲಿ 160 ವರ್ಷಗಳಷ್ಟು ಹಳೆಯದಾದ ಚರ್ಚ್‌ವೊಂದನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಸೂಸೈಪಾಳ್ಯದಲ್ಲಿರುವ ಸೇಂಟ್ ಜೋಸೆಫ್ ಚರ್ಚ್‌ನಲ್ಲಿದ್ದ ಸೇಂಟ್ ಆಂಥೋನಿಯ ಪ್ರತಿಮೆಯನ್ನು ವಿರೂಪಗೊಳಿಸಲಾಗಿದೆ. ಪೊಲೀಸರು ಹೆಚ್ಚಿನ ತನಿಖೆಗಾಗಿ ಪ್ರತಿಮೆಯನ್ನು ತೆಗೆದುಕೊಂಡು ಹೋಗಿದ್ದಾರೆ. ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಿಸಲಾಗಿದೆ.

ಗುರುವಾರ ಬೆಳಿಗ್ಗೆ 5.30 ರ ಸುಮಾರಿಗೆ ಚರ್ಚ್‌ ಮೇಲೆ ಕಿಡಿಗೇಡಿಗಳು ದಾಳಿ ಮಾಡಿ, ಪ್ರತಿಮೆಗೆ ಹಾನಿಗೊಳಿಸಿದ್ದಾರೆ ಎಂದು ಚರ್ಚ್‌ನ ಪಾದ್ರಿ ಫಾದರ್ ಜೋಸೆಫ್ ಆಂಥೋನಿ ಡೇನಿಯಲ್ ತಿಳಿಸಿದ್ದಾರೆ.

ಬೆಳಗಿನ ಜಾವ 5.40ರ ವೇಳೆಗೆ ಪಾದ್ರಿಯೊಬ್ಬರು ಪ್ರತಿಮೆಗೆ ಹಾನಿಯಾಗಿರುವುದನ್ನು ಗಮನಿಸಿದ್ದಾರೆ. ಅವರು ಫಾದರ್ ಜೋಸೆಫ್‌ ಅವರಿಗೆ ಮಾಹಿತಿ ನೀಡಿದ್ದು, ಜೋಸೆಫ್‌ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ರೀತಿಯ ವಿಧ್ವಂಸಕ ಕೃತ್ಯ ಹಿಂದೆಂದೂ ನಡೆದಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ, ಕರ್ನಾಟಕದ ವಿವಿಧ ಭಾಗಗಳಲ್ಲಿ ಕ್ರಿಶ್ಚಿಯನ್ ಪ್ರಾರ್ಥನಾ ಸಭೆಗಳಿಗೆ ಅಡಚಣೆಗಳನ್ನು ಉಂಟುಮಾಡುತ್ತಿರುವ ಕೃತ್ಯಗಳು ವರದಿಯಾಗಿವೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ರಾಜ್ಯ ವಿಧಾನಸಭೆಯ ಅಧಿವೇಶನದಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ರಕ್ಷಣೆ ಮಸೂದೆ 2021 ಎಂಬ ಹೊಸ ಮತಾಂತರ ನಿಷೇಧ ಮಸೂದೆಯನ್ನು ಮಂಡಿಸಲಾಗಿದೆ. ಈ ಬಗ್ಗೆ ಅಧಿವೇಶನದಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಈ ಮಸೂದೆಯು ಬಲವಂತದ ಮತಾಂತರವನ್ನು ತಡೆಯುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಹೇಳುತ್ತಿದೆ. ಆದರೆ ಇದು ರಾಜ್ಯದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡಿದೆ, ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಪ್ರತಿಪಕ್ಷಗಳು, ಪ್ರಗತಿಪರ ಸಂಘಟನೆಗಳು ದೂರಿವೆ.


ಇದನ್ನೂ ಓದಿ: ಮತಾಂಧ ಸರ್ವಾಧಿಕಾರದತ್ತ ಕರ್ನಾಟಕ: ವಿಧಾನಸಭೆಯ ಮುಂದೆ ‘ಧಾರ್ಮಿಕ ಬಂದೀಖಾನೆಯ ವಿಧೇಯಕ’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...