Homeಕರ್ನಾಟಕಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರು

ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್‌: ವದಂತಿ ಅಲ್ಲಗೆಳೆದ ತಜ್ಞರು

ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರು ಇಂತಹ ಆಧಾರರಹಿತ ವರದಿಗಳನ್ನು ಓದುವ ಮೂಲಕ ಭಯಪಡಬಾರದು. -ಟಿಎಸಿ

- Advertisement -
- Advertisement -

ಕೊರೊನಾ ಸೃಷ್ಟಿಸಿದ್ದ ತಲ್ಲಣದಿಂದ ಜನರು ಈಗಷ್ಟೆ ಸುಧಾರಿಸಿಕೊಳ್ಳುತ್ತಿದ್ದರೂ, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುವುದನ್ನು ನೋಡಿದಾಗ ಭಯವಾಗುವುದು ಇದ್ದೇ ಇದೆ. ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಕಡಿಮೆಯಾಗಿದ್ದ ಸೋಂಕಿತರು ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಪ್ರಮುಖ ನಗರಗಳು ಲಾಕ್‌ಡೌನ್‌ ಘೋಷಿಸಿವೆ.

ಇದೇ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕೋವಿಡ್‌-19 ವೈರಸ್‌ನಿಂದ ರೂಪಾಂತರಗೊಂಡಿರುವ ಡೆಲ್ಟಾ ಪ್ಲಸ್‌ನಿಂದ ಸೋಂಕಿಗೆ ಒಳಗಾಗಿರುವ ಎರಡು ಪ್ರಕರಣಗಳು ಪತ್ತೆಯಾದ ಕಾರಣ ಕರ್ನಾಟಕದಲ್ಲಿ ಅನೇಕರು ಭಯಭೀತರಾಗಿದ್ದು, ಮತ್ತೊಮ್ಮೆ ಲಾಕ್‌ಡೌನ್‌ ಆಗಬಹುದು ಎಂಬ ವದಂತಿ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲೆ, ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಮತ್ತೊಂದು ಲಾಕ್‌ಡೌನ್‌ ಆಗಬಹುದು ಎಂಬ ವದಂತಿಗಳನ್ನು ತಳ್ಳಿ ಹಾಕಿದೆ.

ಟಿಎಸಿಯ ಅಧ್ಯಕ್ಷರಾದ ಡಾ.ಎಂ.ಕೆ. ಸುದರ್ಶನ್‌ ಈ ವದಂತಿಯನ್ನು ತಳ್ಳಿಹಾಕಿದ್ದು, ’ಡೆಲ್ಟಾ ಪ್ಲಸ್‌ (ಎವೈ 4.2) ರೂಪಾಂತರ ಸೋಂಕಿತರ ಪ್ರಕರಣಗಳ ಆವಿಷ್ಕಾರದಿಂದಾಗಿ ಕರ್ನಾಟಕದಲ್ಲಿ ಮತ್ತೊಂದು ಲಾಕ್‌ಡೌನ್‌ ಮಾಡಬೇಕು ಎಂಬುವ ಟಿಎಸಿ ವರದಿಗಳು ಆಧಾರರಹಿತ ಮತ್ತು ಅವಾಸ್ತವಿಕವಾಗಿವೆ. ಕಳೆದ ಬಾರಿ ರಾಜ್ಯದಲ್ಲಿ ಪ್ರತಿದಿನ ಸುಮಾರು 50 ಸಾವಿರ ಕೋವಿಡ್‌ ಪ್ರಕರಣಗಳ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಶಿಫಾರಸ್ಸು ಮಾಡಲಾಗಿತ್ತು ಎಂಬುದನ್ನು ಜ್ಞಾಪಿಸಿಕೊಳ್ಳಬಹುದು. ಕಳೆದ ಎರಡು ದಿನಗಳಿಂದ ಸೋಂಕಿತರ ಸಂಖ್ಯೆಯು 350ಕ್ಕಿಂತಲೂ ಕಡಿಮೆಯಾಗಿದೆ’ ಎಂದು ಹೇಳಿರುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಡೆಲ್ಟಾ ಪ್ಲಸ್‌ ರೂಪಾಂತರದ ಎರಡು ಪ್ರಕರಣಗಳು ಬೆಂಗಳೂರಿನಲ್ಲಿ ದೃಢಪಟ್ಟಿವೆ ಎಂದು ತಿಳಿಸಿದ ಅವರು, ’ಭಾರತದಾದ್ಯಂತ ಜೀನೋಮಿಕ್‌ ಅನುಕ್ರಮದ ಮೂಲಕ 17 ಪ್ರಕರಣಗಳು ದಾಖಲಾಗಿದ್ದು, ಎರಡು ಪ್ರಕರಣಗಳು ಬೆಂಗಳೂರಿನಲ್ಲಿ ದೃಢಪಟ್ಟಿವೆ. ಸೋಂಕಿತರು ಚಿಕಿತ್ಸೆ ಪಡೆದಿದ್ದು, ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಂಚಿಕೊಂಡಿರುವ ದಾಖಲೆಯಲ್ಲಿ ಜುಲೈನಲ್ಲಿ 23 ಮತ್ತು 43 ವರ್ಷ ವಯೋಮಾನದ ಇಬ್ಬರಲ್ಲಿ ಈ ಸೋಂಕನ್ನು ಗುರುತಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

‘ಮಕ್ಕಳನ್ನು ಶಾಲೆಗೆ ಕಳುಹಿಸುವ ಪೋಷಕರು ಇಂತಹ ಆಧಾರರಹಿತ ವರದಿಗಳನ್ನು ಓದುವ ಮೂಲಕ ಭಯಪಡಬಾರದು. ನಾವು (ಟಿಎಸಿ) ರಾಜ್ಯದಲ್ಲಿ ಸಾಂಕ್ರಾಮಿಕ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ’ ಎಂದು ಸುದರ್ಶನ್‌ ತಿಳಿಸಿದರು.

ರಾಜ್ಯ ಆರೋಗ್ಯ ಇಲಾಖೆ ನೀಡಿರುವ ಅಂಕಿಅಂಶಗಳ ಪ್ರಕಾರ ಈವರೆಗೆ, ಕರ್ನಾಟಕದಲ್ಲಿ 29.86 ಲಕ್ಷ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, 29.40 ಲಕ್ಷ ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಬುಧವಾರ (ಅಕ್ಟೋಬರ್ 27) 8,430 ಸಕ್ರಿಯ ಪ್ರಕರಣಗಳಿದ್ದು, ಕಳೆದ ವರ್ಷ ಮಾರ್ಚ್ 10 ರಿಂದ 38,037 ಜನರು ಸೋಂಕಿಗೆ ಬಲಿಯಾಗಿದ್ದಾರೆ.


ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...