Homeಮುಖಪುಟ‘ತಂದೆ ವಿರುದ್ಧ ಬಿಜೆಪಿ ನಾಯಕನ ಹೇಳಿಕೆ’ | ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಾದ ದಿಲ್ಲಿ ಸಿಎಂ ಅತಿಶಿ

‘ತಂದೆ ವಿರುದ್ಧ ಬಿಜೆಪಿ ನಾಯಕನ ಹೇಳಿಕೆ’ | ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಾದ ದಿಲ್ಲಿ ಸಿಎಂ ಅತಿಶಿ

- Advertisement -
- Advertisement -

ಬಿಜೆಪಿ ನಾಯಕ ರಮೇಶ್ ಬಿಧುರಿ ಅವರು ತಮ್ಮ ತಂದೆಯ ಬಗ್ಗೆ ಹೇಳಿದ್ದ ಆಕ್ಷೇಪಾರ್ಹ ಹೇಳಿಕೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ದೆಹಲಿ ಮುಖ್ಯಮಂತ್ರಿ ಅತಿಶಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಭಾವುಕರಾಗಿದ್ದಾರೆ. ಕ್ಯಾಮೆರಾ ಮುಂದೆಯೆ ಕಣ್ಣೀರು ಹಾಕಿದ ಅವರು, ಸಂಕಟದಿಂದ ಮಾತನಾಡಿದರು. ಬಿಧುರಿ ತಮ್ಮ ವಯಸ್ಸಾದ ತಂದೆಯನ್ನು ಮತ ಗಳಿಸಲು ಬಳಸಿಕೊಂಡು ಅಧೋಗತಿಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ. ತಂದೆ ವಿರುದ್ಧ ಬಿಜೆಪಿ

”ವಯಸ್ಸಾದ, ನಡೆಯಲು ಸಹ ಆಸರೆ ಬೇಕಿರುವ ನನ್ನ ತಂದೆಯನ್ನು ರಾಜಕೀಯ ಲಾಭಕ್ಕಾಗಿ ಅವರು ಬಳಸಿಕೊಳ್ಳುತ್ತಿದ್ದಾರೆ” ಎಂದು ಅತಿಶಿ ಕಣ್ಣೀರಿಟ್ಟಿದ್ದಾರೆ. ಬಿಜೆಪಿ ನಾಯಕ ಬಿಧುರಿಯ ಟೀಕೆಗಳ ಬಗ್ಗೆ ಅವರು ತಮ್ಮ ದುಃಖವನ್ನು ವ್ಯಕ್ತಪಡಿಸಿ, ಇಂತಹ ತಂತ್ರಗಳು ತೀವ್ರ ನೋವುಂಟುಮಾಡುತ್ತವೆ ಮತ್ತು ಇದು ಅನುಚಿತವಾಗಿವೆ ಎಂದು ಒತ್ತಿ ಹೇಳಿದ್ದಾರೆ. ತಂದೆ ವಿರುದ್ಧ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪಕ್ಷದ ಕೆಲಸ ಮತ್ತು ಜನಸೇವೆಯ ಮೂಲಕ ಮತಗಳನ್ನು ಗೆಲ್ಲುವತ್ತ ಗಮನ ಹರಿಸಬೇಕು ಎಂದು ಹೇಳಿದ ಸಿಎಂ ಅತಿಶಿ, ರಾಜಕೀಯ ಪ್ರಚಾರದಲ್ಲಿ ವೈಯಕ್ತಿಕ ದಾಳಿ ಅಥವಾ ಕುಟುಂಬ ಸದಸ್ಯರನ್ನು ಬಳಸಿ ಶೋಷಣೆ ಮಾಡುವುದು ಸರಿಯಲ್ಲ, “ನೀವು ನಿಮ್ಮ ಕೆಲಸದ ವಿಚಾರದಲ್ಲಿ ಮತಗಳನ್ನು ಕೇಳಿ” ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

 

ರ‍್ಯಾಲಿಯೊಂದರಲ್ಲಿ ಮಾತನಾಡಿದ್ದ ರಮೇಶ್ ಬಿಧುರಿ, ಎಎಪಿ ನಾಯಕರಾದ ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿ ವಿರುದ್ಧ ವಾಗ್ದಾಳಿ ನಡೆಸುತ್ತಾ, “ಭ್ರಷ್ಟ ಕಾಂಗ್ರೆಸ್ ಜೊತೆ ಹೋಗುವುದಿಲ್ಲ ಎಂದು ಕೇಜ್ರಿವಾಲ್ ತಮ್ಮ ಮಕ್ಕಳ ಮೇಲೆ ಆಣೆ ಪ್ರಮಾಣ ಮಾಡಿದರು; ಮರ್ಲೆನಾ ತನ್ನ ತಂದೆಯನ್ನೆ ಬದಲಾಯಿಸಿದರು. ಮೊದಲು ಅವಳು ಮರ್ಲೆನಾ ಆಗಿದ್ದರು, ಈಗ ಅವಳು ಸಿಂಗ್ ಆಗಿದ್ದಾರೆ. ಇದು ಅವರ ಚಾರಿತ್ರ್ಯ” ಎಂದು ಹೇಳಿದ್ದಾರೆ

“ಅವರು ನಾಚಿಕೆಯ ಎಲ್ಲ ಮಿತಿಗಳನ್ನು ದಾಟಿದ್ದು, ಮಹಿಳಾ ಮುಖ್ಯಮಂತ್ರಿಯನ್ನು ಅವಮಾನ ಮಾಡಿರುವುದನ್ನು ದೆಹಲಿಯ ಜನರು ಸಹಿಸುವುದಿಲ್ಲ. ಇದರ ವಿರುದ್ಧ ದೆಹಲಿಯ ಎಲ್ಲಾ ಮಹಿಳೆಯರು ಪ್ರತೀಕಾರ ತೀರಿಸಿಕೊಳ್ಳುತ್ತಾರೆ” ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಹೇಳಿದ್ದಾರೆ.

ಅಷ್ಟೆ ಅಲ್ಲದೆ, ಬಿಧುರಿ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಕೂಡಾ ಅಶ್ಲೀಲ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳು ಬಿಜೆಪಿಯ “ಮಹಿಳಾ ವಿರೋಧಿ” ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಾಂಗ್ರೆಸ್ ಮತ್ತು ಎಎಪಿ ಆರೋಪಿಸಿದೆ.

“ಲಾಲು ಪ್ರಸಾದ್ ಯಾದವ್ ಅವರು ಬಿಹಾರದ ರಸ್ತೆಗಳನ್ನು ಹೇಮಾಮಾಲಿನಿಯ ಕೆನ್ನೆಯಂತೆ ಮಾಡುವುದಾಗಿ ಹೇಳಿದ್ದರು. ಆದರೆ ಅವರು ಸುಳ್ಳು ಹೇಳಿದ್ದು, ಅವರಿಗೆ ಅದನ್ನು ಮಾಡಲು ಸಾಧ್ಯವಾಗಿಲ್ಲ. ಆದರೆ ಓಖ್ಲಾ ಮತ್ತು ಸಂಗಮ್ ವಿಹಾರ್‌ನಲ್ಲಿ ನಾವು ನಿರ್ಮಿಸಿದ ರಸ್ತೆಗಳಂತೆ, ಕಲ್ಕಾಜಿಯ ಎಲ್ಲಾ ರಸ್ತೆಗಳನ್ನು ಪ್ರಿಯಾಂಕ ಗಾಂಧಿ ಅವರ ಕೆನ್ನೆಗಳಂತೆ ಮಾಡುತ್ತೇವೆ ಎಂದು ನಿಮಗೆ ಭರವಸೆ ನೀಡುತ್ತೇನೆ” ಎಂದು ಬಿಧುರಿ ಹೇಳಿರುವ ವಿಡಿಯೋದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಅವರು, “ಪ್ರಿಯಾಂಕಾ ಗಾಂಧಿ ಬಗ್ಗೆ ರಮೇಶ್ ಬಿಧುರಿ ಅವರ ಹೇಳಿಕೆ ಅತ್ಯಂತ ನಾಚಿಕೆಗೇಡಿನ ಸಂಗತಿ. ಅಷ್ಟೆ ಅಲ್ಲದೆ, ಅವರ ಹೇಳಿಕೆ ಅವರ ಕೊಳಕು ಮಹಿಳಾ ವಿರೋಧಿ ಚಿಂತನೆಯನ್ನು ಬಿಂಬಿಸುತ್ತದೆ. ಅದಾಗ್ಯೂ, ಸದನದಲ್ಲಿ ತನ್ನ ಸಹ ಸಂಸದರ ವಿರುದ್ಧ ಅಸಭ್ಯ ಭಾಷೆ ಬಳಸಿ ಯಾವುದೇ ಶಿಕ್ಷೆಗೆ ಗುರಿಯಾಗದ ವ್ಯಕ್ತಿಯಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?” ಎಂದು ಹೇಳಿದ್ದಾರೆ.

“ಬಿಧುರಿ ಮಾತ್ರವಲ್ಲ, ಬಿಜೆಪಿಯ ಉನ್ನತ ನಾಯಕತ್ವ ಇದಕ್ಕಾಗಿ ಕೈ ಜೋಡಿಸಿ ಕ್ಷಮೆಯಾಚಿಸಬೇಕು” ಎಂದು ಶ್ರೀನಾಟೆ ಹೇಳಿದ್ದು, ಇದು ಕೇವಲ ಪ್ರಿಯಾಂಕಾ ಗಾಂಧಿಗೆ ಮಾತ್ರವಲ್ಲ ಎಲ್ಲಾ ಮಹಿಳೆಯರಿಗೆ ಮಾಡಿದ ಅವಮಾನವಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂಓದಿ:  ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ

ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...