ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ “ಬುಲ್ಡೋಜರ್” ಮುಂದಿನ ದಿನಗಳಲ್ಲಿ ಬರಲಿದೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಬುಧವಾರ ಎಚ್ಚರಿಕೆ ನೀಡಿದೆ. ಇದೇ ವೇಳೆ ಅವರು, ಸಾರ್ವಜನಿಕ ಭೂಮಿಯಿಂದ ಅಕ್ರಮ ಒತ್ತುವರಿಯನ್ನು ತೆಗೆದುಹಾಕುವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ‘ಅಕ್ರಮ ಅತಿಕ್ರಮಣ’ದ
ಕಳೆದ ಎರಡು ವರ್ಷಗಳಲ್ಲಿ ಸರ್ಕಾರಿ ಭೂಮಿಯಿಂದ ಅಕ್ರಮ ಒತ್ತುವರಿಯನ್ನು ತೆಗೆದುಹಾಕಲಾಗಿದ್ದು, ಅಲ್ಲಿ ಶಾಲೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು ಎಂದು ಗುಜರಾತ್ ಸಚಿವ ಸಂಘವಿ ಹೇಳಿದ್ದಾರೆ. “ಭೂಪೇಂದ್ರ ಪಟೇಲ್ ಅವರ ಬುಲ್ಡೋಜರ್ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಕೆಲಸ ಮಾಡುತ್ತದೆ. ಏಕೆಂದರೆ ಅಕ್ರಮ ಅತಿಕ್ರಮಣ ಇನ್ನೂ ಅನೇಕ ನಗರಗಳಲ್ಲಿ ಇದೆ” ಎಂದು ಅವರು ಹೇಳಿದ್ದಾರೆ. ‘ಅಕ್ರಮ ಅತಿಕ್ರಮಣ’ದ
ಬುಲ್ಡೋಜರ್ ಅ’ನ್ಯಾಯ’ ಅಥವಾ ಆಸ್ತಿಯ ದಂಡನೆಗೆ ಒಳಗಾದ ನಿದರ್ಶನಗಳನ್ನು ನಿಗ್ರಹಿಸಲು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಹೊರಡಿಸಿದ ಸುಮಾರು ಒಂದು ತಿಂಗಳ ನಂತರ ಗುಜರಾತ್ ಗೃಹ ಸಚಿವ ಈ ಹೇಳಿಕೆ ನೀಡಿದ್ದಾರೆ. ಧ್ವಂಸ ಪ್ರಕರಣಗಳಲ್ಲಿ, ಈ ಕ್ರಮದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಂತ್ರಸ್ತ ವ್ಯಕ್ತಿಗಳಿಗೆ ಸಾಕಷ್ಟು ಸಮಯ ನೀಡಬೇಕು ಮತ್ತು ಮೊದಲು ಶೋಕಾಸ್ ನೋಟಿಸ್ ನೀಡಬೇಕು ಎಂದು ನ್ಯಾಯಾಲಯ ಹೇಳಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಅದಾಗ್ಯೂ, ಈ ಆದೇಶವು ಸಾರ್ವಜನಿಕ ಭೂಮಿಯನ್ನು ಒತ್ತುವರಿ ಮಾಡುವುದರ ವಿರುದ್ಧ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ತಡೆಯುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
ಗೋಹತ್ಯೆ, ಲವ್ ಜಿಹಾದ್ ಮತ್ತು ಲ್ಯಾಂಡ್ ಜಿಹಾದ್ ವಿರುದ್ಧ ಹೋರಾಡಲು ಗುಜರಾತ್ ಸರ್ಕಾರ ನಿರ್ಧರಿಸಿದೆ ಎಂದು ಸಂಘವಿ ಬುಧವಾರ ಹೇಳಿದ್ದಾರೆ. “ಲವ್ ಜಿಹಾದ್” ಮತ್ತು “ಲ್ಯಾಂಡ್ ಜಿಹಾದ್” ಎಂಬುದು ಬಿಜೆಪಿ ಮತ್ತು ಆರೆಸ್ಸೆಸ್‌ನ ಪಿತೂರಿ ಸಿದ್ಧಾಂತವಾಗಿದ್ದು, ಇದು ಕಾಲ್ಪನಿಕ ವಿಚಾರವಾಗಿದೆ. ಈ ವರೆಗೆ ಈ ಬಗ್ಗೆ ಯಾವುದೆ ಪ್ರಕರಣವಾಗಲಿ ದಾಖಲಾಗಿಲ್ಲ ಮತ್ತು ಒಬ್ಬರಿಗೂ ಶಿಕ್ಷೆಯಾಗಿಲ್ಲ.
“ಗೋಹತ್ಯೆ ಪ್ರಕರಣಗಳಲ್ಲಿ ಆರೋಪಿಗಳು ಸಿಕ್ಕಿಬಿದ್ದು, ಶಿಕ್ಷೆಗೊಳಗಾದ ಏಕೈಕ ರಾಜ್ಯ ಗುಜರಾತ್ ಆಗಿದೆ” ಎಂದು ಸಂಘವಿ ಹೇಳಿಕೊಂಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ”ಕಳೆದ ಒಂದು ವರ್ಷದಲ್ಲಿ 16 ಮಂದಿ ಗೋಹತ್ಯೆ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದಾರೆ. ಅದು ಕಚ್, ಬನಸ್ಕಾಂತ ಅಥವಾ ಅಮ್ರೇಲಿ ಆಗಿರಲಿ, ಆರೋಪಿಗಳಿಗೆ ಶಿಕ್ಷೆಯಾಗುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಆದ್ದರಿಂದ ಅದು ಕೊಲೆಗಾರರಲ್ಲಿ ಭಯವನ್ನು ಉಂಟುಮಾಡುತ್ತದೆ” ಎಂದು ಅವರು ಹೇಳಿದ್ದಾರೆ.
ಲವ್ ಜಿಹಾದ್ ಪ್ರಕರಣಗಳಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರದ “ಮುಗ್ಧ ಹುಡುಗಿಯರನ್ನು” ರಕ್ಷಿಸಲು ಮತ್ತು ದೂರುಗಳ ಅನುಪಸ್ಥಿತಿಯಲ್ಲಿಯೂ ಅವರನ್ನು ಅವರ ಕುಟುಂಬಗಳೊಂದಿಗೆ ಮತ್ತೆ ಸೇರಿಸಲು ಪೊಲೀಸರು ಸಮರ್ಥರಾಗಿದ್ದಾರೆ ಎಂದು ಸಚಿವರು ಹೇಳಿದ್ದಾರೆ. “ಭೂಪೇಂದ್ರ ಪಟೇಲ್ ಅವರ ದಂಡ ಯಾರನ್ನೂ ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ – ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ


