Homeಮುಖಪುಟ‘ಅಕ್ರಮ ಅತಿಕ್ರಮಣ’ದ ವಿರುದ್ಧ ಸಿಎಂ ಅವರ ಬುಲ್ಡೋಜರ್ ಬರಲಿದೆ - ಗುಜರಾತ್ ಗೃಹ ಸಚಿವ

‘ಅಕ್ರಮ ಅತಿಕ್ರಮಣ’ದ ವಿರುದ್ಧ ಸಿಎಂ ಅವರ ಬುಲ್ಡೋಜರ್ ಬರಲಿದೆ – ಗುಜರಾತ್ ಗೃಹ ಸಚಿವ

- Advertisement -
- Advertisement -

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ “ಬುಲ್ಡೋಜರ್” ಮುಂದಿನ ದಿನಗಳಲ್ಲಿ ಬರಲಿದೆ ಎಂದು ಗುಜರಾತ್ ಗೃಹ ಸಚಿವ ಹರ್ಷ ಸಂಘವಿ ಬುಧವಾರ ಎಚ್ಚರಿಕೆ ನೀಡಿದೆ. ಇದೇ ವೇಳೆ ಅವರು, ಸಾರ್ವಜನಿಕ ಭೂಮಿಯಿಂದ ಅಕ್ರಮ ಒತ್ತುವರಿಯನ್ನು ತೆಗೆದುಹಾಕುವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ‘ಅಕ್ರಮ ಅತಿಕ್ರಮಣ’ದ

ಕಳೆದ ಎರಡು ವರ್ಷಗಳಲ್ಲಿ ಸರ್ಕಾರಿ ಭೂಮಿಯಿಂದ ಅಕ್ರಮ ಒತ್ತುವರಿಯನ್ನು ತೆಗೆದುಹಾಕಲಾಗಿದ್ದು, ಅಲ್ಲಿ ಶಾಲೆಗಳು ಮತ್ತು ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು ಎಂದು ಗುಜರಾತ್ ಸಚಿವ ಸಂಘವಿ ಹೇಳಿದ್ದಾರೆ. “ಭೂಪೇಂದ್ರ ಪಟೇಲ್ ಅವರ ಬುಲ್ಡೋಜರ್ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಕೆಲಸ ಮಾಡುತ್ತದೆ. ಏಕೆಂದರೆ ಅಕ್ರಮ ಅತಿಕ್ರಮಣ ಇನ್ನೂ ಅನೇಕ ನಗರಗಳಲ್ಲಿ ಇದೆ” ಎಂದು ಅವರು ಹೇಳಿದ್ದಾರೆ. ‘ಅಕ್ರಮ ಅತಿಕ್ರಮಣ’ದ

ಬುಲ್ಡೋಜರ್ ಅ’ನ್ಯಾಯ’ ಅಥವಾ ಆಸ್ತಿಯ ದಂಡನೆಗೆ ಒಳಗಾದ ನಿದರ್ಶನಗಳನ್ನು ನಿಗ್ರಹಿಸಲು ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಹೊರಡಿಸಿದ ಸುಮಾರು ಒಂದು ತಿಂಗಳ ನಂತರ ಗುಜರಾತ್ ಗೃಹ ಸಚಿವ ಈ ಹೇಳಿಕೆ ನೀಡಿದ್ದಾರೆ. ಧ್ವಂಸ ಪ್ರಕರಣಗಳಲ್ಲಿ, ಈ ಕ್ರಮದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಂತ್ರಸ್ತ ವ್ಯಕ್ತಿಗಳಿಗೆ ಸಾಕಷ್ಟು ಸಮಯ ನೀಡಬೇಕು ಮತ್ತು ಮೊದಲು ಶೋಕಾಸ್ ನೋಟಿಸ್ ನೀಡಬೇಕು ಎಂದು ನ್ಯಾಯಾಲಯ ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅದಾಗ್ಯೂ, ಈ ಆದೇಶವು ಸಾರ್ವಜನಿಕ ಭೂಮಿಯನ್ನು ಒತ್ತುವರಿ ಮಾಡುವುದರ ವಿರುದ್ಧ ಅಧಿಕಾರಿಗಳು ಕಾರ್ಯನಿರ್ವಹಿಸುವುದನ್ನು ತಡೆಯುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ಗೋಹತ್ಯೆ, ಲವ್ ಜಿಹಾದ್ ಮತ್ತು ಲ್ಯಾಂಡ್ ಜಿಹಾದ್ ವಿರುದ್ಧ ಹೋರಾಡಲು ಗುಜರಾತ್ ಸರ್ಕಾರ ನಿರ್ಧರಿಸಿದೆ ಎಂದು ಸಂಘವಿ ಬುಧವಾರ ಹೇಳಿದ್ದಾರೆ. “ಲವ್ ಜಿಹಾದ್” ಮತ್ತು “ಲ್ಯಾಂಡ್ ಜಿಹಾದ್” ಎಂಬುದು ಬಿಜೆಪಿ ಮತ್ತು ಆರೆಸ್ಸೆಸ್‌ನ ಪಿತೂರಿ ಸಿದ್ಧಾಂತವಾಗಿದ್ದು, ಇದು ಕಾಲ್ಪನಿಕ ವಿಚಾರವಾಗಿದೆ. ಈ ವರೆಗೆ ಈ ಬಗ್ಗೆ ಯಾವುದೆ ಪ್ರಕರಣವಾಗಲಿ ದಾಖಲಾಗಿಲ್ಲ ಮತ್ತು ಒಬ್ಬರಿಗೂ ಶಿಕ್ಷೆಯಾಗಿಲ್ಲ.

“ಗೋಹತ್ಯೆ ಪ್ರಕರಣಗಳಲ್ಲಿ ಆರೋಪಿಗಳು ಸಿಕ್ಕಿಬಿದ್ದು, ಶಿಕ್ಷೆಗೊಳಗಾದ ಏಕೈಕ ರಾಜ್ಯ ಗುಜರಾತ್ ಆಗಿದೆ” ಎಂದು ಸಂಘವಿ ಹೇಳಿಕೊಂಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ”ಕಳೆದ ಒಂದು ವರ್ಷದಲ್ಲಿ 16 ಮಂದಿ ಗೋಹತ್ಯೆ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದಾರೆ. ಅದು ಕಚ್, ಬನಸ್ಕಾಂತ ಅಥವಾ ಅಮ್ರೇಲಿ ಆಗಿರಲಿ, ಆರೋಪಿಗಳಿಗೆ ಶಿಕ್ಷೆಯಾಗುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ ಆದ್ದರಿಂದ ಅದು ಕೊಲೆಗಾರರಲ್ಲಿ ಭಯವನ್ನು ಉಂಟುಮಾಡುತ್ತದೆ” ಎಂದು ಅವರು ಹೇಳಿದ್ದಾರೆ.

ಲವ್ ಜಿಹಾದ್ ಪ್ರಕರಣಗಳಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ ಮತ್ತು ಮಹಾರಾಷ್ಟ್ರದ “ಮುಗ್ಧ ಹುಡುಗಿಯರನ್ನು” ರಕ್ಷಿಸಲು ಮತ್ತು ದೂರುಗಳ ಅನುಪಸ್ಥಿತಿಯಲ್ಲಿಯೂ ಅವರನ್ನು ಅವರ ಕುಟುಂಬಗಳೊಂದಿಗೆ ಮತ್ತೆ ಸೇರಿಸಲು ಪೊಲೀಸರು ಸಮರ್ಥರಾಗಿದ್ದಾರೆ ಎಂದು ಸಚಿವರು ಹೇಳಿದ್ದಾರೆ. “ಭೂಪೇಂದ್ರ ಪಟೇಲ್ ಅವರ ದಂಡ ಯಾರನ್ನೂ ಬಿಡುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ನನ್ನ ವಿರುದ್ಧದ ಅವಹೇಳನಕಾರಿ ಹೇಳಿಕೆ ಕಡತದಿಂದ ತೆಗೆದುಹಾಕಿ – ಸ್ಪೀಕರ್‌ಗೆ ರಾಹುಲ್ ಗಾಂಧಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...