Homeಮುಖಪುಟ'ಸಂವಿಧಾನದ ಆಶಯಕ್ಕೆ ವಿರುದ್ಧ': ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ

‘ಸಂವಿಧಾನದ ಆಶಯಕ್ಕೆ ವಿರುದ್ಧ’: ತರಾತುರಿಯಲ್ಲಿ ಮುಖ್ಯ ಚು.ಆಯುಕ್ತರ ನೇಮಕಕ್ಕೆ ಕಾಂಗ್ರೆಸ್ ಟೀಕೆ

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ (ಸಿಇಸಿ) ಮತ್ತು ಹರಿಯಾಣದ ಮುಖ್ಯ ಕಾರ್ಯದರ್ಶಿ ಡಾ. ವಿವೇಕ್ ಜೋಶಿ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸಿರುವುದು ‘ನಮ್ಮ ಸಂವಿಧಾನದ ಆಶಯ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳಿಗೆ ವಿರುದ್ಧವಾದ ಮಧ್ಯರಾತ್ರಿಯ ಆತುರದ ನಡೆ’ ಎಂದು ಕಾಂಗ್ರೆಸ್ ಟೀಕಿಸಿದೆ.

ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ನಿರ್ಧರಿಸುವವರೆಗೆ ನೇಮಕಾತಿ ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಮನವಿ ಮಾಡಿದ್ದರು. ಇದಾದ ಕೆಲವೇ ಗಂಟೆಗಳ ನಂತರ ಹೊಸ ಆಯುಕ್ತರ ನೇಮಕ ಆಗಿದೆ. ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಬುಧವಾರ (ಫೆ.19) ನಡೆಯಲಿದೆ.

“ಇದು ನಮ್ಮ ಸಂವಿಧಾನದ ಆಶಯಕ್ಕೆ ವಿರುದ್ಧವಾದ ನಡೆ. ಚುನಾವಣಾ ಪ್ರಕ್ರಿಯೆಯು ಸರಿಯಾಗಿ ನಡೆಯಬೇಕಾದರೆ, ಮುಖ್ಯ ಚುನಾವಣಾ ಆಯುಕ್ತ ನಿಷ್ಪಕ್ಷಪಾತ ಪಾಲುದಾರರಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಹಲವು ಪ್ರಕರಣಗಳಲ್ಲಿ ಪುನರುಚ್ಚರಿಸಿದೆ” ಎಂದು ಕಾಂಗ್ರೆಸ್ ಸಂಸದ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ ವೇಣುಗೋಪಾಲ್ ಹೇಳಿದ್ದಾರೆ.

“ತಿದ್ದುಪಡಿ ಮಾಡಿದ ಕಾನೂನಿನಲ್ಲಿ ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನು ಹೊರಗಿಡಲಾಗಿದೆ. ಸರ್ಕಾರ ಮುಖ್ಯ ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಮೊದಲು ಫೆಬ್ರವರಿ 19ರಂದು ನಡೆಯುವ ಸುಪ್ರೀಂ ಕೋರ್ಟ್‌ನ ವಿಚಾರಣೆಯವರೆಗೆ ಕಾಯಬೇಕಿತ್ತು” ಎಂದಿದ್ದಾರೆ.

“ಇಂದು ತರಾತುರಿಯಲ್ಲಿ ಸಭೆ ನಡೆಸಿ ಹೊಸ ಚುನಾವಣಾ ಆಯುಕ್ತರನ್ನು ನೇಮಿಸುವ ಅವರ (ಸರ್ಕಾರದ) ನಿರ್ಧಾರವು ಸುಪ್ರೀಂ ಕೋರ್ಟ್‌ನ ಪರಿಶೀಲನೆಯನ್ನು ತಪ್ಪಿಸಲು ಮತ್ತು ಸ್ಪಷ್ಟ ಆದೇಶ ಬರುವ ಮೊದಲು ನೇಮಕಾತಿಯನ್ನು ಪೂರ್ಣಗೊಳಿಸಲು ಅವರು ಉತ್ಸುಕರಾಗಿದ್ದಾರೆಂದು ತೋರಿಸುತ್ತದೆ” ಎಂದು ವೇಣುಗೋಪಾಲ್ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

“ಇಂತಹ ನಡವಳಿಕೆಯು, ಆಡಳಿತ ನಡೆಸುತ್ತಿರುವ ಸರ್ಕಾರವು ಚುನಾವಣಾ ಪ್ರಕ್ರಿಯೆಯನ್ನು ಹೇಗೆ ನಾಶಪಡಿಸುತ್ತಿದೆ ಮತ್ತು ನಿಯಮಗಳನ್ನು ತನ್ನ ಲಾಭಕ್ಕಾಗಿ ಹೇಗೆ ಬದಲಾಯಿಸುತ್ತಿದೆ ಎಂಬುದರ ಬಗ್ಗೆ ಅನೇಕರು ವ್ಯಕ್ತಪಡಿಸಿರುವ ಅನುಮಾನಗಳನ್ನು ದೃಢಪಡಿಸುತ್ತದೆ. ಅದು ನಕಲಿ ಮತದಾರರ ಪಟ್ಟಿಗಳಾಗಿರಬಹುದು, ಬಿಜೆಪಿಗೆ ಅನುಕೂಲಕರವಾದ ವೇಳಾಪಟ್ಟಿಯಾಗಿರಬಹುದು ಅಥವಾ ಇವಿಎಂ ಹ್ಯಾಕಿಂಗ್ ಬಗ್ಗೆ ಕಳವಳಗಳಾಗಿರಬಹುದು – ಸರ್ಕಾರ ಮತ್ತು ಅದು ನೇಮಿಸುವ ಚುನಾವಣಾ ಆಯುಕ್ತರು ಇಂತಹ ಘಟನೆಗಳಿಂದಾಗಿ ಆಳವಾದ ಅನುಮಾನಕ್ಕೆ ಒಳಗಾಗುತ್ತಾರೆ” ಎಂದು ಹೇಳಿದ್ದಾರೆ.

“ವಿರೋಧ ಪಕ್ಷದ ನಾಯಕರು ಸರಿಯಾಗಿಯೇ ಹೇಳಿದಂತೆ, ಸುಪ್ರೀಂ ಕೋರ್ಟ್ ಸಂವಿಧಾನಕ್ಕೆ ಅನುಗುಣವಾಗಿ ಈ ವಿಷಯವನ್ನು ನಿರ್ಧರಿಸುವವರೆಗೆ ಈ ನಿರ್ಧಾರವನ್ನು ಪಕ್ಕಕ್ಕೆ ಇಡಬೇಕಾಗಿತ್ತು” ಎಂದಿದ್ದಾರೆ.

ನೂತನ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಬುಧವಾರ (ಫೆ.19) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಹಾಲಿ ಆಯುಕ್ತ ರಾಜೀವ್ ಕುಮಾರ್ ಮಂಗಳವಾರ (ಫೆ.18) ನಿವೃತ್ತರಾಗಲಿದ್ದಾರೆ.

ಮೂಲಗಳ ಪ್ರಕಾರ, 30 ನಿಮಿಷದ ಸಭೆಯಲ್ಲಿ ಹೊಸ ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲಾದ ಐದು ಹೆಸರುಗಳ ಪಟ್ಟಿಯನ್ನು ಸಮಿತಿಯ ಮುಂದೆ ಪರಿಗಣನೆಗೆ ಇಡಲಾಗಿತ್ತು.

ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ಸಚೇತಕ ಮಾಣಿಕ್ಕಂ ಟ್ಯಾಗೋರ್ ಕೂಡ ವೇಣುಗೋಪಾಲ್ ಹೇಳಿದ್ದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಆಯುಕ್ತರ ಈ ನೇಮಕ ‘ನಮ್ಮ ಸಂವಿಧಾನದ ಆಶಯ ಮತ್ತು ಮುಕ್ತ ಚುನಾವಣೆಗಳನ್ನು ದುರ್ಬಲಗೊಳಿಸುತ್ತದೆ’ ಎಂದಿದ್ದಾರೆ.

“ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದಂತೆ, ಫೆಬ್ರವರಿ 19ರಂದು ನಡೆಯುವ ಸುಪ್ರೀಂ ಕೋರ್ಟ್ ವಿಚಾರಣೆಯವರೆಗೆ ಕಾಯಬೇಕಿತ್ತು. ಆದರೆ, ಅವಸರದಿಂದ ನೇಮಕ ಮಾಡಿರುವುದು ಪರಿಶೀಲನೆಯನ್ನು ತಪ್ಪಿಸುವ ಅವರ ಉದ್ದೇಶವನ್ನು ತೋರಿಸುತ್ತದೆ. ಪ್ರಜಾಪ್ರಭುತ್ವವು ಇದಕ್ಕಿಂತ ಉತ್ತಮವಾದುದಕ್ಕೆ ಅರ್ಹವಾಗಿದೆ” ಎಂದು ಟ್ಯಾಗೋರ್ ಹೇಳಿದ್ದಾರೆ.

ರಿಲಯನ್ಸ್ ವಿರುದ್ಧದ ವಂಚನೆ ಆರೋಪಗಳನ್ನು ಮರುಸ್ಥಾಪಿಸಿದ ದೆಹಲಿ ಹೈಕೋರ್ಟ್ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...