Homeಮುಖಪುಟಪೋಷಕರ ಇಚ್ಛೆಗೆ ವಿರುದ್ಧ ಮದುವೆಯಾದ ಜೋಡಿಗೆ ಪೊಲೀಸ್ ರಕ್ಷಣೆ ನೀಡಲ್ಲ ಎಂದ ಅಲಹಾಬಾದ್ ಹೈಕೋರ್ಟ್

ಪೋಷಕರ ಇಚ್ಛೆಗೆ ವಿರುದ್ಧ ಮದುವೆಯಾದ ಜೋಡಿಗೆ ಪೊಲೀಸ್ ರಕ್ಷಣೆ ನೀಡಲ್ಲ ಎಂದ ಅಲಹಾಬಾದ್ ಹೈಕೋರ್ಟ್

- Advertisement -
- Advertisement -

ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾಗುವ ದಂಪತಿಗಳ ಜೀವ ಮತ್ತು ಸ್ವಾತಂತ್ರ್ಯಕ್ಕೆ ನಿಜವಾಗಿಯು ಬೆದರಿಕೆ ಇಲ್ಲದಿದ್ದರೆ, ಪೊಲೀಸ್ ರಕ್ಷಣೆಯನ್ನು ಹಕ್ಕಿನ ವಿಷಯವಾಗಿ ಪಡೆಯಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ ಎಂದು ಲೈವ್ ಲಾ ಬುಧವಾರ ವರದಿ ಮಾಡಿದೆ. ಪೊಲೀಸ್ ರಕ್ಷಣೆ ಮತ್ತು ಸಂಬಂಧಿಕರು ಹಸ್ತಕ್ಷೇಪ ಮಾಡದಂತೆ ತಡೆಯುವ ನಿರ್ದೇಶನವನ್ನು ಕೋರಿ ದಂಪತಿಗಳು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಆಲಿಸುವಾಗ ನ್ಯಾಯಮೂರ್ತಿ ಸೌರಭ್ ಶ್ರೀವಾಸ್ತವ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದಂಪತಿಗಳಿಗೆ ಯಾವುದೇ ಗಂಭೀರ ಬೆದರಿಕೆ ಇಲ್ಲ ಎಂದು ನ್ಯಾಯಾಲಯ ಹೇಳಿದ್ದು, ಅವರ ಅರ್ಜಿಯನ್ನು ವಿಲೇವಾರಿ ಮಾಡಿದೆ.

ದಂಪತಿಗಳಿಗೆ ಪೊಲೀಸ್ ರಕ್ಷಣೆ ಒದಗಿಸಲು ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. “ತಮ್ಮ ಸ್ವಂತ ಇಚ್ಛೆಯಂತೆ ಮದುವೆಯಾಗಲು ಓಡಿಹೋದ” ಯುವಕರಿಗೆ ನ್ಯಾಯಾಲಯಗಳು ರಕ್ಷಣೆ ನೀಡಲು ಉದ್ದೇಶಿಸಿಲ್ಲ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಅದು ಉಲ್ಲೇಖಿಸಿದೆ. ಅರ್ಹ ಪ್ರಕರಣಗಳಲ್ಲಿ ಭದ್ರತೆ ನೀಡಬಹುದು ಎಂದು ನ್ಯಾಯಾಲಯ ಹೇಳಿದ್ದು, ಆದರೆ ನಿಜವಾಗಿಯು ಯಾವುದೇ ಬೆದರಿಕೆ ಇಲ್ಲದಿದ್ದಾಗ, ದಂಪತಿಗಳು “ಪರಸ್ಪರ ಒಗ್ಗಟ್ಟಾಗಿ ನಿಂತು ಸಮಾಜವನ್ನು ಎದುರಿಸಲು ಕಲಿಯಬೇಕು” ಎಂದು ಹೇಳಿದೆ.

ಅರ್ಜಿದಾರರ ಜೀವನ ಮತ್ತು ಸ್ವಾತಂತ್ರ್ಯ ಅಪಾಯದಲ್ಲಿದೆ ಎಂದು ಸೂಚಿಸುವ ಯಾವುದೇ ಪುರಾವೆಗಳು ನ್ಯಾಯಾಲಯಕ್ಕೆ ಕಂಡುಬಂದಿಲ್ಲ ಎಂದು ಅದು ಪ್ರಕರಣದಲ್ಲಿ ಹೇಳಿದೆ. “ಖಾಸಗಿ ಪ್ರತಿವಾದಿಗಳು [ಅರ್ಜಿದಾರರಲ್ಲಿ ಇಬ್ಬರ ಸಂಬಂಧಿಕರು] ಅರ್ಜಿದಾರರ ಮೇಲೆ ದೈಹಿಕ ಅಥವಾ ಮಾನಸಿಕ ಹಲ್ಲೆ ನಡೆಸುವ ಸಾಧ್ಯತೆಯಿದೆ ಎಂದು ಸಾಬೀತುಪಡಿಸಲು ಯಾವುದೇ ಪುರಾವೆಗಳಿಲ್ಲ” ಎಂದು ನ್ಯಾಯಾಲಯ ಹೇಳಿದ್ದಾಗಿ ದಿ ಹಿಂದೂ ಉಲ್ಲೇಖಿಸಿದೆ.

ದಂಪತಿಗಳು ತಮ್ಮ ಸಂಬಂಧಿಕರಿಂದ ನಡೆಸಲ್ಪಟ್ಟ ದುಷ್ಕೃತ್ಯದ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪೊಲೀಸರಿಗೆ ನಿರ್ದಿಷ್ಟ ಅರ್ಜಿಯನ್ನು ಸಲ್ಲಿಸಿಲ್ಲ ಎಂದು ನ್ಯಾಯಾಲಯ ಹೇಳಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತಾದ ಸೆಕ್ಷನ್ 175(3) ರ ಅಡಿಯಲ್ಲಿ ಪ್ರಾರಂಭಿಸಲಾದ ಯಾವುದೇ ಕ್ರಮ ಅಥವಾ ಔಪಚಾರಿಕ ಅರ್ಜಿಗೆ ಪ್ರತಿಕ್ರಿಯೆಯಾಗಿ ಪೊಲೀಸರು ಯಾವುದೇ ನಿಷ್ಕ್ರಿಯತೆ ತೋರಿಲ್ಲ. ಪೊಲೀಸರು ಎಫ್‌ಐಆರ್ ದಾಖಲಿಸಲು ಅಥವಾ ತನಿಖೆ ನಡೆಸಲು ವಿಫಲವಾದಾಗ ಸೂಕ್ಷ್ಮ ವಿಷಯವನ್ನು ತನಿಖೆ ಮಾಡಲು ಪೊಲೀಸರಿಗೆ ಆದೇಶಿಸಲು ಈ ವಿಭಾಗವು ನ್ಯಾಯಾಂಗ ಮ್ಯಾಜಿಸ್ಟ್ರೇಟ್‌ಗೆ ಅಧಿಕಾರ ನೀಡುತ್ತದೆ.

ಆದಾಗ್ಯೂ, ಅರ್ಜಿದಾರರು ಉತ್ತರ ಪ್ರದೇಶದ ಚಿತ್ರಕೂಟದ ಪೊಲೀಸ್ ವರಿಷ್ಠಾಧಿಕಾರಿಗೆ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ ಎಂದು ಪೀಠ ಹೇಳಿದೆ. “ಸಂಬಂಧಪಟ್ಟ ಪೊಲೀಸರು ನಿಜವಾಗಿಯು ಬೆದರಿಕೆ ಇದೆ ಎಂದು ಗ್ರಹಿಸಿದರೆ, ಅವರು ಕಾನೂನಿನ ಪ್ರಕಾರ ಅಗತ್ಯ ಕ್ರಮವನ್ನು ಕೈಗೊಳ್ಳಬೇಕು” ಎಂದು ನ್ಯಾಯಾಲಯ ಹೇಳಿದೆ. ದಂಪತಿಗೆ ಯಾರಾದರೂ ಕಿರುಕುಳ ನೀಡಿದರೆ, ನ್ಯಾಯಾಲಯಗಳು ಮತ್ತು ಪೊಲೀಸ್ ಅಧಿಕಾರಿಗಳು ಅವರ ಸಹಾಯಕ್ಕೆ ಬರಲು ಸಿದ್ಧರಿರಬೇಕು ಎಂದು ಪೀಠ ಒತ್ತಿ ಹೇಳಿದೆ. ಪೋಷಕರ ಇಚ್ಛೆಗೆ ವಿರುದ್ಧವಾಗಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂವಿಧಾನ ಅಸ್ತಿತ್ವಕ್ಕೆ ಬಂದು 75 ವರ್ಷಗಳ ನಂತರವೂ ಪೊಲೀಸರಿಗೆ ಮೂಲಭೂತ ಹಕ್ಕುಗಳ ಅರಿವಿಲ್ಲ ಎಂದ ಕುನಾಲ್

ಸಂವಿಧಾನ ಅಸ್ತಿತ್ವಕ್ಕೆ ಬಂದು 75 ವರ್ಷಗಳ ನಂತರವೂ ಪೊಲೀಸರಿಗೆ ಮೂಲಭೂತ ಹಕ್ಕುಗಳ ಅರಿವಿಲ್ಲ ಎಂದ ಕುನಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...

ದಾವಣಗೆರೆ: ನಿಮ್ಮ ದೇಶಭಕ್ತಿ ಪ್ರಶ್ನಿಸುವ ಅಯೋಗ್ಯರಿಗೆ ಮತ ಹಾಕಬೇಡಿ; ಮುಸ್ಲಿಮರಿಗೆ ಪ್ರದೀಪ್ ಈಶ್ವರ್ ಮನವಿ

ದಾವಣಗೆರೆ: ಮುಸ್ಲಿಮರ ದೇಶಭಕ್ತಿಯನ್ನು ಪ್ರಶ್ನಿಸಿದ, ಅವರ ಕುಟುಂಬಗಳ ಮಹಿಳೆಯರ ಬಗ್ಗೆ ಹೀನಾಯವಾಗಿ ಮಾತನಾಡಿದ್ದು ಬಿಜೆಪಿ. ಇವತ್ತು ಯಾವುದೋ ಅಸಮಾಧಾನಕ್ಕೆ ಬಿಜೆಪಿಗೆ ಮತ ಹಾಕದರೆ ನಿಮ್ಮ ಅಸ್ತಿತ್ವಕ್ಕೆ ಕುತ್ತು ಬರುತ್ತದೆ. ಇಂತಹ ಅಯೋಗ್ಯರಿಗೆ ಮತ...