Homeಮುಖಪುಟ‘ಏಜ್ ಈಸ್ ಜಸ್ಟ್‌ ಎ ನಂಬರ್‌!’: ಪಂಚಾಯತ್ ಅಧ್ಯಕ್ಷೆಯಾಗಲಿರುವ 85 ವರ್ಷದ ಮಹಿಳೆ

‘ಏಜ್ ಈಸ್ ಜಸ್ಟ್‌ ಎ ನಂಬರ್‌!’: ಪಂಚಾಯತ್ ಅಧ್ಯಕ್ಷೆಯಾಗಲಿರುವ 85 ವರ್ಷದ ಮಹಿಳೆ

- Advertisement -
- Advertisement -

ಏಜ್ ಈಸ್ ಜಸ್ಟ್‌ ಎ ನಂಬರ್‌’ಎಂಬ ಮಾತಿದೆ (ವಯಸ್ಸು ಎಂಬುವುದು ಕೇವಲ ಒಂದು ಸಂಖ್ಯೆ). ತಮಿಳುನಾಡಿನ 85 ವರ್ಷದ ಎಸ್. ಪೆರುಮಾತಾಳ್ ಎಂಬ ಹಿರಿಯ ಮಹಿಳೆ ಇದನ್ನು ಸಾಬೀತುಪಡಿಸಿದ್ದಾರೆ. ಅವರು ತಮಿಳುನಾಡಿನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಪಂಚಾಯತ್ ಚುನಾವಣೆಯಲ್ಲಿ ಗೆದ್ದು, ಶಿವಂತಿಪಟ್ಟಿ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ.

ತಮಿಳುನಾಡಿನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಯ್ಕೆಯಾಗುವ, ಅತ್ಯಂತ ಹಿರಿಯ ಪಂಚಾಯತ್ ಅಧ್ಯಕ್ಷರಾಗಿ ಪೆರುಮಾತಾಳ್‌ ಹೊರಹೊಮ್ಮಲಿದ್ದಾರೆ. ದೀರ್ಘಕಾಲದಿಂದಲೂ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದ ಅವರು ಎಂದಿಗೂ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಇದುವೆ ಮೊದಲ ಬಾರಿಗೆ ಸ್ಪರ್ಧಿಸಿದ್ದ ಅವರು ಮೊದಲ ಪ್ರಯತ್ನದಲ್ಲೇ ಸಫಲರಾಗಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಭರ್ಜರಿ ಗೆಲುವಿನತ್ತ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ

ಅವರು ಹಲವಾರು ವರ್ಷಗಳಿಂದ ತನ್ನ ಮಗನಿಗಾಗಿ ಚುನಾವಣೆ ಪ್ರಚಾರ ಮಾಡುತ್ತಿದ್ದರು. ಪಂಚಾಯತ್‌ನ ಅಧ್ಯಕ್ಷ ಸ್ಥಾನವು ಮಹಿಳೆಗೆ ಮೀಸಲು ಎಂದು ಅಧಿಕಾರಿಗಳು ಘೋಷಿಸಿದಾಗ ಅವರು ಚುನಾವಣೆಯಲ್ಲಿ ಸ್ಫರ್ಧಿಸಲು ನಿರ್ಧರಿಸಿದ್ದರು. ಚಲಾವಣೆಯಾದ ಒಟ್ಟು 2,060 ಮತಗಳಲ್ಲಿ ಪೆರುಮಾತಾಳ್‌ ಅವರಿಗೆ 1,568 ಬಿದ್ದಿದೆ ಎಂದು TNIE ವರದಿ ಮಾಡಿದೆ.

ತನ್ನ ಮಗನ ದಾರಿಯಲ್ಲಿ ತಾನು ಮುಂದುವರೆಯುತ್ತಿರುವುದು ಸಂತೋಷವಾಗಿದ್ದು, ಜನರ ಸೇವೆಯನ್ನು ಮುಂದುವರಿಸಲು ಬಯಸುತ್ತೇನೆ ಎಂದು ಪೆರುಮಾತಾಳ್ ಅವರು ಹೇಳಿದ್ದಾಗಿ TNIE ವರದಿ ಮಾಡಿದೆ.

“ಪ್ರತಿನಿತ್ಯ ಜನರೊಂದಿಗೆ ಮಾತನಾಡುವದರಿಂದ, ಪಂಚಾಯತ್‌ನಲ್ಲಿ ಪ್ರಚಾರ ಮಾಡುವುದು ಮತ್ತು ಮನೆಗಳಿಗೆ ಭೇಟಿ ನೀಡುವುದು ನನಗೆ ಯಾವುದೇ ಸಮಸ್ಯೆಯಾಗಿಲ್ಲ. ಪಂಚಾಯತ್‌ಗೆ ಕುಡಿಯುವ ನೀರಿನ ಪೂರೈಕೆ ನಿರಂತರವಾಗಿ ಆಗುವಂತೆ ನೋಡಿಕೊಳ್ಳುತ್ತೇನೆ. ನನ್ನ ಬಾಲ್ಯದಿಂದಲೂ ಕುಡಿಯುವ ನೀರು ಇಲ್ಲಿನ ಪ್ರಮುಖ ಸಮಸ್ಯೆಯಾಗಿದೆ” ಎಂದು ಅವರು ಹೇಳಿದ್ದಾರೆ.

ನಾವು ಮಳೆಯ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದ್ದು, ನಮ್ಮಲ್ಲಿ ಕುಡಿಯುವ ನೀರಿಗೆ ಬೇರೆ ಯಾವುದೇ ಮೂಲವಿಲ್ಲ. ಬೀದಿದೀಪಗಳನ್ನು ಅಳವಡಿಸಲು ಮತ್ತು ಪಂಚಾಯತ್‌ನಲ್ಲಿ ರಸ್ತೆಗಳನ್ನು ನಿರ್ಮಿಸಲು ಪ್ರಯತ್ನಿಸುವುದಾಗಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...