Homeಚಳವಳಿತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

ತೀವ್ರಗೊಳ್ಳುತ್ತಿರುವ ರೈತರ ಆಕ್ರೋಶ: ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಮತ್ತು ಕೃಷಿ ಕಾನೂನುಗಳ ವಿರುದ್ಧ ರಾಷ್ಟ್ರ ರಾಜಧಾನಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದು, ಈ ಪ್ರತಿಭಟನೆಗೆ ದೇಶದಾದ್ಯಂತ ಇರುವ ಇನ್ನಷ್ಟು ರೈತರು ಸೇರಿಕೊಳ್ಳುತ್ತಿದ್ದಾರೆ. ಹಾಗಾಗಿ ದೆಹಲಿಯ ಗಡಿಯಲ್ಲಿ ರೈತ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತಿದೆ.

ಮಹಾರಾಷ್ಟ್ರದ ರೈತರು ಇಂದು ದೆಹಲಿಯ ಪ್ರತಿಭಟನೆಗೆ ಸೇರಿಕೊಳ್ಳಲು ಸಾಗರೋಪಾದಿಯಲ್ಲಿ ತೆರಳುತ್ತಿರುವ ವೀಡಿಯೋವನ್ನು ಈ ಕೆಳಗೆ ನೋಡಬಹುದು.

ಇದನ್ನೂ ಓದಿ:ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಇದನ್ನೂ ಓದಿ:ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಈ ಕುರಿತು ಫೇಸ್‌ಬುಕ್‌ನಲ್ಲಿ ಪತ್ರಿಕಾ ವರದಿಯೊಂದನ್ನು ಹಂಚಿಕೊಂಡಿರುವ ಚಿಂತಕರು ಮತ್ತು ಹೋರಾಟಗಾರರಾದ ಶ್ರೀಪಾದ್ ಭಟ್, “ಮಹಾರಾಷ್ಟ್ರದ ರೈತರು ಜೇಬಿನಲ್ಲಿ 100ರೂ.ಇಟ್ಟುಕೊಂಡು, ಸಾವಿರಾರು ಕಿ.ಮೀ. ಪ್ರಯಾಣಿಸಿ ದೆಹಲಿಗೆ ಬರುತ್ತಿದ್ದಾರೆ. ಸಂಘಿಗಳೇ ನಿಮಗೆ ನೆನಪಿದೆಯೇ? ಎರಡು ವರ್ಷಗಳ ಹಿಂದೆ ಇದೇ 35,000 ರೈತರು 700 ಕಿ.ಮೀ.ನ ‘ಲಾಂಗ್ ಮಾರ್ಚ್’ನ ಮೂಲಕ ಮುಂಬೈಗೆ ಮುತ್ತಿಗೆ ಹಾಕಿದ್ದರು. ನಿಮ್ಮ ವಟು ಫಡ್ನವೀಸ್‌ನ ಬೆವರಿಳಿಸಿದ್ದರು. ಈಗ ದೆಹಲಿಗೆ ಬರುತ್ತಿದ್ದಾರೆ. ಕಷ್ಟವಿದೆ ನಿಮಗೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ಇನ್ನು ಪಶ್ಚಿಮ ಬಂಗಾಳದ ನಂದಿಗ್ರಾಮದಿಂದಲೂ ದೆಹಲಿಯ ಸಿಂಘು ಗಡಿಗೆ ಸಾವಿರಾರು ರೈತರು ಬರುತ್ತಿದ್ದಾರೆ. ಈ ವಾರಾಂತ್ಯದಲ್ಲಿ ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನಗಳಲ್ಲಿ ಸುಗ್ಗೀ ಕಾಲ ಮುಗಿಯಲಿದ್ದು, ದೊಡ್ಡ ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ ಎಂದು ಪ್ರತಿಧ್ವನಿ ವರದಿ ಮಾಡಿದೆ.

ರೈತರ ಹೋರಾಟವನ್ನು ಹತ್ತಿಕ್ಕುವ ಸಲುವಾಗಿ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಏನೆಲ್ಲಾ ಪ್ರಯತ್ನಪಟ್ಟರೂ ರೈತರನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಇದರ ನಡುವೆಯೇ ರೈತರ ಪ್ರತಿಭಟನೆ ಒಂದು ತಿಂಗಳನ್ನು ಪೂರೈಸಿದೆ.

ಡಿಸಂಬರ್ 29 ರಂದು ರೈತ ಮುಖಂಡರೊಂದಿಗೆ ಕೇಂದ್ರ ಸರ್ಕಾರವು ಮಾತುಕತೆ ನಡೆಸಲಿದ್ದು, ಇದು ನಿರ್ಣಾಯಕ ಸಭೆಯಾಗಲಿದೆ ಎಂದು ರೈತರು ಹೇಳಿದ್ದಾರೆ. ಜೊತೆಗೆ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎನ್ನುವ ನಿಲುವಿನಿಂದ ಹಿಂದೆ ಸರಿಯುವುದಿಲ್ಲ ಎಂದೂ ಹೇಳಿದ್ದಾರೆ.


ಇದನ್ನೂ ಓದಿ:ಮತಾಂತರ ನಿಷೇಧ ಕಾಯ್ದೆ: ಉತ್ತರಪ್ರದೇಶ ತೊರೆಯುತ್ತಿರುವ ಅಂತರ್‌ಧರ್ಮೀಯ ಸಂಗಾತಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...