Homeಚಳವಳಿರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

ರೈತ ಹೋರಾಟವನ್ನು ತಕ್ಷಣಕ್ಕೆ ಹಿಂಪಡೆಯುವುದಿಲ್ಲ: ರಾಕೇಶ್ ಟಿಕಾಯತ್

- Advertisement -
- Advertisement -

ಪ್ರಧಾನಿಯವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಹೇಳಿದ ತಕ್ಷಣ ಪ್ರತಿಭಟನೆ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಅಧಿಕೃತವಾಗಿ ರದ್ದುಪಡಿಸುವ ದಿನಕ್ಕಾಗಿ ಕಾಯುತ್ತೇವೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, “ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡಲಾಗುವುದು. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರು ಮನೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ಒಂದು ವರ್ಗದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಮಗೆ ಸಾಧ್ಯವಾಗಲಿಲ್ಲ ಎಂದು ನಾನು ದೇಶವಾಸಿಗಳಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ತಿಳಿಸಿದ್ದಾರೆ.  

ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ರೈತ ನಾಯಕ ರಾಕೇಶ್ ಟಿಕಾಯತ್ ” ಆಂದೋಲನವನ್ನು ತಕ್ಷಣವೇ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ಅಧೀಕೃತವಾಗಿ ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಸರ್ಕಾರವು MSP ಜೊತೆಗೆ ರೈತರ ಇತರ ಸಮಸ್ಯೆಗಳನ್ನು ಚರ್ಚಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: ವಿವಾದಿತ ಕೃಷಿ ಕಾಯ್ದೆಗಳು ರದ್ದು: ಕ್ಷಮೆಯಾಚಿಸಿದ ಮೋದಿ, ರೈತರ ಹೋರಾಟಕ್ಕೆ ಗೆಲುವು

“ಒಂದು ವರ್ಷದ ಬಳಿಕ ಗೆದ್ದಿದ್ದೇವೆ. ಮೂರು ವಿವಾದಿತ ಕಾಯ್ದೆಗಳನ್ನು ವಾಪಸ್‌ ಪಡೆಯಲು ಮೋದಿ ಸರ್ಕಾರ ನಿರ್ಧರಿಸಿದೆ. ಇದು ರೈತರಿಗೆ ಸಂದ ಗೆಲುವು” ಎಂದು ಕಿಸಾನ್‌ ಏಕ್ತಾ ಮೋರ್ಚಾ ಟ್ವೀಟ್‌ ಮಾಡಿದೆ.

ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶ ಸೇರಿದಂತೆ ದೇಶದ ಸಾವಿರಾರು ರೈತರು ಕಳೆದ ವರ್ಷ ನವೆಂಬರ್ 26 ರಿಂದ ಸಿಂಘು ಮತ್ತು ಟಿಕ್ರಿ ಸೇರಿದಂತೆ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೂರು ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: 700 ಕ್ಕೂ ಹೆಚ್ಚು ರೈತರ ಸಾವು ಮತ್ತು ಲಖಿಂಪುರ್ ಖೇರಿ ಹತ್ಯಾಕಾಂಡ ತಡೆಯಬಹುದಿತ್ತು: ಸಂಯುಕ್ತ ಕಿಸಾನ್ ಮೋರ್ಚಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ರೈತ ಕಾಯ್ದೆ ಗಳನ್ನು ಕೇಂದ್ರ ಸರ್ಕಾರ ಹಿಂಪಡೆದ ಮೇಲೂ ಇವರ ಹೋರಾಟ ನಿಲ್ಲಿಸೋದಿಲ್ಲಾ ಅಂತಿದ್ದಾರೆ ಅಂದರೇ ಈ ನಕಲಿ ರೈತ ಅಯೋಗ್ಯರ ಉದ್ದೇಶ ಏನೆಂಬುದನ್ನು ಅರಿಯಲು ಜಾಸ್ತಿ ಸಮಯ ಬೇಕಿಲ್ಲಾ ,ವಿದೇಶಿ ಭಯೋತ್ಪಾದಕರ ಚೇಲಾಗಳು ಇವರು ಅನ್ನೋದಕ್ಕೆ

  2. ಇದು ಸರಿಯಾದ ನಿರ್ಧಾರ. ಮೋದಿಯ ಹೇಳಿಕೆಯನ್ನು ಮಾತ್ರ ಪರಿಗಣಿಸಿ, ಚುನಾವಣೆಯ ನಂತರ ಮೋಸಹೋಗುವ ಎಲ್ಲಾ ಸಂಭವಗಳನ್ನು ತಳ್ಳಿಹಾಕುವಂತಿಲ್ಲ. ಸುಳ್ಳಿನ ಸರಮಾಲೆಯನ್ನೇ ಕಟ್ಟುವವರು ಮಾತಿನಲ್ಲಿ ಹೇಳಿದ್ದನ್ನು ನಂಬಲಾಗದು. ಈ ಅಂಧಭಕ್ರಗಳ ಸರಧಿ. ವಿಶ್ವಗುರು ಹೇಳಿದ ಮೇಲೂ ಪ್ರತಿಭಟನೆ ಹಿಂಪಡೆಯದ ರೈತರು ಅಹಂಕಾರಿಗಳು, ನಕ್ಸಲರು…..ಪುಂಗ್ ಪುಂಗ್ ಪುಂಗ್.

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...