Homeಚಳವಳಿಅಗ್ನಿಪಥ ಪ್ರತಿಭಟನೆ: 1,120 ಮಂದಿಯನ್ನು ಬಂಧಿಸಿರುವ ಉತ್ತರ ಪ್ರದೇಶ ಸರ್ಕಾರ

ಅಗ್ನಿಪಥ ಪ್ರತಿಭಟನೆ: 1,120 ಮಂದಿಯನ್ನು ಬಂಧಿಸಿರುವ ಉತ್ತರ ಪ್ರದೇಶ ಸರ್ಕಾರ

ಹಿಂಸಾತ್ಮಕ ಪ್ರತಿಭಟನೆಯಲ್ಲಿ ಪಾಲ್ಗೊಂಡವರನ್ನು ಗುರುತಿಸಿ ಅವರಿಂದ ಹಾನಿ ವಸೂಲಿ ಮಾಡಲು ಉದ್ದೇಶಿಸಲಾಗಿದೆ

- Advertisement -
- Advertisement -

ಅಗ್ನಿಪಥ ಯೋಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಬಂಧಿಸಿರುವ ಪ್ರತಿಭಟನಾಕಾರರ ಸಂಖ್ಯೆ 1,120 ಕ್ಕೆ ತಲುಪಿದೆ. ಬಂಧನದಲ್ಲಿರುವವರು ಹಿಂಸಾತ್ಮಕ ಪ್ರತಿಭಟನೆಯಲ್ಲಿ ತೊಡಗಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ 595 ಮಂದಿಯನ್ನು ಬಂಧಿಸಲಾಗಿದೆ. ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ಆಗಿರುವ ಹಾನಿ ಎಷ್ಟು ಎಂಬುದನ್ನು ನಿರ್ಣಯಿಸುವಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಈ ಆಸ್ತಿ ನಾಶದ ಮೊತ್ತವನ್ನು ಪ್ರತಿಭಟನಾಕಾರರಿಂದ ಪಡೆಯಲು ಯುಪಿ ಸರ್ಕಾರ ಉದ್ದೇಶಿಸಿದೆ.

ಮೂಲಗಳ ಪ್ರಕಾರ, ಪ್ರತಿಭಟನಾ ಸಮಯದಲ್ಲಿ ಸಾರ್ವಜನಿಕ ಆಸ್ತಿಯನ್ನು ನಾಶಪಡಿಸಿದ ವ್ಯಕ್ತಿಗಳನ್ನು ಗುರುತಿಸಿದ ನಂತರ ವಸೂಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಜಿಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಕ್ಷೇತ್ರಾಧಿಕಾರಿಗಳಿಗೆ ಸೂಚಿಸಲಾಗಿದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ಹಿಂಸಾಚಾರದಲ್ಲಿ ಭಾಗಿಯಾದವರು ಸೇನೆ ಸೇರಲು ಸಾಧ್ಯವಿಲ್ಲ- ಲೆ. ಜನರಲ್ ಪುರಿ

‘ವಿದ್ಯಾರ್ಥಿಗಳು ಪ್ರತಿಭಟನಾಕಾರರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ವ್ಯವಹರಿಸುವಾಗ ಪೊಲೀಸರು ಮೃದುವಾಗಿ ವರ್ತಿಸುತ್ತಾರೆ. ಆದರೆ ರೈಲುಗಳನ್ನು ಸುಡುವ, ಬಸ್ಸುಗಳು, ಪೊಲೀಸ್ ವಾಹನಗಳಿಗೆ ಹಾನಿ ಮಾಡುವವರು, ಪೊಲೀಸ್ ಔಟ್‌ಪೋಸ್ಟ್‌ಗಳು ಮತ್ತು ಚೌಕಿಗಳು ಮತ್ತು ಅಂಗಡಿಗಳನ್ನು ದರೋಡೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಾರೆ. ಆವರು ಹಾನಿಯನ್ನು ಪಾವತಿಸಬೇಕಾಗುತ್ತದೆ’ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿದ್ದಾರೆ.

ಪ್ರತಿಭಟನೆಯ ಛಾಯಾಚಿತ್ರಗಳು ಮತ್ತು ವಿಡಿಯೋಗಳ ಮೂಲಕ ಹಿಂಸಾತ್ಮಕ ಪ್ರತಿಭಟನೆಯಲ್ಲಿ ಪಾಲ್ಗೊಂಡವರನ್ನು ಗುರುತಿಸಿ ಅವರಿಂದ ಹಾನಿ ವಸೂಲಿ ಮಾಡಲಾಗುತ್ತದೆ ಎಂದು ಎಡಿಜಿ ಹೇಳಿಕೊಂಡಿದ್ದಾರೆ.

“ಬಲ್ಲಿಯಾ, ವಾರಣಾಸಿ, ಅಲಿಗಢ, ಮಥುರಾ ಮತ್ತು ಆಗ್ರಾ ಸೇರಿದಂತೆ ಜಿಲ್ಲೆಗಳಲ್ಲಿ ಈಗಾಗಲೇ ಪ್ರತಿಭಟನಾಕಾರರನ್ನು ಗುರುತಿಸುವ ಪ್ರಕ್ರಿಯೆ ನಡೆದಿದೆ. ವಿಧ್ವಂಸಕ ಕೃತ್ಯಗಳು, ಬೆಂಕಿ ಹಚ್ಚುವಿಕೆ ಮತ್ತು ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವಲ್ಲಿ ತೊಡಗಿರುವವರಿಗೆ ಶೀಘ್ರದಲ್ಲಿಯೇ ರಿಕವರಿ ನೋಟಿಸ್ ನೀಡಲಾಗುವುದು” ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇಲ್ಲಿಯವರೆಗೆ ಬಂಧಿಸಿರುವ ಒಟ್ಟು 1,120 ಪ್ರತಿಭಟನಾಕಾರರಲ್ಲಿ 618 ಮಂದಿಯನ್ನು ಸಿಆರ್‌ಪಿಸಿಯ ಸೆಕ್ಷನ್ 151 ರ ಉಲ್ಲಂಘನೆಗಾಗಿ ಮತ್ತು 502 ಜನರನ್ನು ಬೆಂಕಿ ಹಚ್ಚುವಿಕೆ ಮತ್ತು ವಿಧ್ವಂಸಕ ಕೃತ್ಯಕ್ಕಾಗಿ ಬಂಧಿಸಲಾಗಿದೆ.


ಇದನ್ನೂ ಓದಿ: ಅಗ್ನಿಪಥ್‌ ಹಿಂಪಡೆಯುವ ಪ್ರಶ್ನೆಯೆ ಇಲ್ಲ: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...