ಸೇನಾ ನೇಮಕಾತಿಗಾಗಿ ಒಕ್ಕೂಟ ಸರ್ಕಾರ ಘೋಷಿಸಿರುವ ಹೊಸ ಯೋಜನೆಯಾದ ‘ಅಗ್ನಿಪಥ’ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೊಸ ಯೋಜನೆಯು “ಸೇನೆಯನ್ನೇ ಮುಗಿಸುತ್ತದೆ” ಎಂದು ಹೇಳಿದ್ದಾರೆ.
ಒಕ್ಕೂಟ ಸರ್ಕಾರದ ಅಗ್ನಿಪಥ ಯೋಜನೆ ವಿರುದ್ಧ ದೆಹಲಿಯ ಜಂತರ್‌ಮಂತರ್‌ನಲ್ಲಿ ಕಾಂಗ್ರೆಸ್‌ನ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಭಟನಾಕಾರರು ತಮ್ಮ ಆಂದೋಲನವನ್ನು ಶಾಂತಿಯುತವಾಗಿ ಮುಂದುವರೆಸಬೇಕು. ಸರ್ಕಾರವನ್ನು ಕೆಳಗಿಳಿಸಬೇಕು ಎಂದು ಒತ್ತಾಯಿಸಿದರು.
“ಈ ಯೋಜನೆಯು ದೇಶದ ಯುವಕರನ್ನು, ಸೈನ್ಯವನ್ನು ಮುಗಿಸುತ್ತದೆ. ಈ ಸರ್ಕಾರದ ಉದ್ದೇಶವನ್ನು ನೋಡಿ. ಪ್ರಜಾಸತ್ತಾತ್ಮಕ, ಶಾಂತಿಯುತ ಮತ್ತು ಅಹಿಂಸಾತ್ಮಕ ಮಾರ್ಗಗಳ ಮೂಲಕ ಈ ಸರ್ಕಾರವನ್ನು ಉರುಳಿಸಬೇಕು. ಶಾಂತಿಯುತವಾಗಿ ಪ್ರತಿಭಟಿಸುವಂತೆ ನಾನು ಒತ್ತಾಯಿಸುತ್ತೇನೆ, ಆದರೆ ಪ್ರತಿಭಟನೆ ನಿಲ್ಲಿಸಬೇಡಿ. ಇದು ನಿಮ್ಮ ಹಕ್ಕು. ಕಾಂಗ್ರೆಸ್‌ನ ಪ್ರತಿಯೊಬ್ಬ ನಾಯಕ ಮತ್ತು ಕಾರ್ಯಕರ್ತರು ನಿಮ್ಮೊಂದಿಗಿದ್ದಾರೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಇದನ್ನೂ ಓದಿ: ಅಗ್ನಿಪಥ ಯೋಜನೆ: ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ ಕೇಂದ್ರಕ್ಕೆ ಸಿದ್ದರಾಮಯ್ಯ ಪ್ರಶ್ನೆ
देशप्रेम व बलिदान का जज्बा दिल में लिए, सेना में जाने की तैयारी करने वाले युवा हमारा गौरव हैं।
युवाओं के बलिदानी जज्बे का सम्मान करना हर देशभक्त का कर्तव्य है।
भारतीय राष्ट्रीय कांग्रेस सत्याग्रह के जरिए "नो रैंक, नो पेंशन" वाली नई आर्मी भर्ती योजना के खिलाफ संघर्ष करती रहेगी pic.twitter.com/XEy5CsB7dX
— Priyanka Gandhi Vadra (@priyankagandhi) June 19, 2022
ದೇಶದಾದ್ಯಂತ ಭಾರಿ ಪ್ರತಿಭಟನೆಗೆ ಕಾರಣವಾಗಿರುವ ಈ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಮತ್ತು ಮುಖಂಡರು ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಭಾರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿತ್ತು. ಜಂತರ್ ಮಂತರ್‌ಗೆ ಪ್ರವೇಶ ಮತ್ತು ನಿರ್ಗಮನ ಸ್ಥಳಗಳನ್ನು ನಿರ್ಬಂಧಿಸಲಾಗಿದೆ.
ದೇಶಾದ್ಯಂತ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದಿವೆ. ಅದರಲ್ಲೂ ಬಿಹಾರದಲ್ಲಿ ಸುಮಾರು 700 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ಸರ್ಕಾರದ ಆಸ್ತಿ–ಪಾಸ್ತಿಗೆ ದಕ್ಕೆ ಮಾಡಿದ ಸುಮಾರು 200 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಅಗ್ನಿಪಥ ಯೋಜನೆ: ದೇಶದ ಜನರಿಗೆ ಏನು ಬೇಕೆಂದು ಪ್ರಧಾನಿಗೆ ಅರ್ಥವಾಗುತ್ತಿಲ್ಲ – ರಾಹುಲ್ ಗಾಂಧಿ


