Homeಮುಖಪುಟಅಗ್ನಿಪಥ ಯೋಜನೆ: ಪ್ರತಿಭಟನೆಯನ್ನು ಶಾಂತಿಯುತವಾಗಿ ಮುಂದುವರೆಸಬೇಕು ಎಂದ ಪ್ರಿಯಾಂಕಾ ಗಾಂಧಿ

ಅಗ್ನಿಪಥ ಯೋಜನೆ: ಪ್ರತಿಭಟನೆಯನ್ನು ಶಾಂತಿಯುತವಾಗಿ ಮುಂದುವರೆಸಬೇಕು ಎಂದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ಸೇನಾ ನೇಮಕಾತಿಗಾಗಿ ಒಕ್ಕೂಟ ಸರ್ಕಾರ ಘೋಷಿಸಿರುವ ಹೊಸ ಯೋಜನೆಯಾದ ‘ಅಗ್ನಿಪಥ’ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹೊಸ ಯೋಜನೆಯು “ಸೇನೆಯನ್ನೇ ಮುಗಿಸುತ್ತದೆ” ಎಂದು ಹೇಳಿದ್ದಾರೆ.

ಒಕ್ಕೂಟ ಸರ್ಕಾರದ ಅಗ್ನಿಪಥ ಯೋಜನೆ ವಿರುದ್ಧ ದೆಹಲಿಯ ಜಂತರ್‌ಮಂತರ್‌ನಲ್ಲಿ ಕಾಂಗ್ರೆಸ್‌ನ ಸತ್ಯಾಗ್ರಹವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಭಟನಾಕಾರರು ತಮ್ಮ ಆಂದೋಲನವನ್ನು ಶಾಂತಿಯುತವಾಗಿ ಮುಂದುವರೆಸಬೇಕು. ಸರ್ಕಾರವನ್ನು ಕೆಳಗಿಳಿಸಬೇಕು ಎಂದು ಒತ್ತಾಯಿಸಿದರು.

“ಈ ಯೋಜನೆಯು ದೇಶದ ಯುವಕರನ್ನು, ಸೈನ್ಯವನ್ನು ಮುಗಿಸುತ್ತದೆ. ಈ ಸರ್ಕಾರದ ಉದ್ದೇಶವನ್ನು ನೋಡಿ. ಪ್ರಜಾಸತ್ತಾತ್ಮಕ, ಶಾಂತಿಯುತ ಮತ್ತು ಅಹಿಂಸಾತ್ಮಕ ಮಾರ್ಗಗಳ ಮೂಲಕ ಈ ಸರ್ಕಾರವನ್ನು ಉರುಳಿಸಬೇಕು. ಶಾಂತಿಯುತವಾಗಿ ಪ್ರತಿಭಟಿಸುವಂತೆ ನಾನು ಒತ್ತಾಯಿಸುತ್ತೇನೆ, ಆದರೆ ಪ್ರತಿಭಟನೆ ನಿಲ್ಲಿಸಬೇಡಿ. ಇದು ನಿಮ್ಮ ಹಕ್ಕು. ಕಾಂಗ್ರೆಸ್‌ನ ಪ್ರತಿಯೊಬ್ಬ ನಾಯಕ ಮತ್ತು ಕಾರ್ಯಕರ್ತರು ನಿಮ್ಮೊಂದಿಗಿದ್ದಾರೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ ಕೇಂದ್ರಕ್ಕೆ ಸಿದ್ದರಾಮಯ್ಯ ಪ್ರಶ್ನೆ

ದೇಶದಾದ್ಯಂತ ಭಾರಿ ಪ್ರತಿಭಟನೆಗೆ ಕಾರಣವಾಗಿರುವ ಈ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಮತ್ತು ಮುಖಂಡರು ಭಾನುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಭಾರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿತ್ತು. ಜಂತರ್ ಮಂತರ್‌ಗೆ ಪ್ರವೇಶ ಮತ್ತು ನಿರ್ಗಮನ ಸ್ಥಳಗಳನ್ನು ನಿರ್ಬಂಧಿಸಲಾಗಿದೆ.

ದೇಶಾದ್ಯಂತ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದಿವೆ. ಅದರಲ್ಲೂ ಬಿಹಾರದಲ್ಲಿ ಸುಮಾರು 700 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ಸರ್ಕಾರದ ಆಸ್ತಿ–ಪಾಸ್ತಿಗೆ ದಕ್ಕೆ ಮಾಡಿದ ಸುಮಾರು 200 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಅಗ್ನಿಪಥ ಯೋಜನೆ: ದೇಶದ ಜನರಿಗೆ ಏನು ಬೇಕೆಂದು ಪ್ರಧಾನಿಗೆ ಅರ್ಥವಾಗುತ್ತಿಲ್ಲ – ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...