Homeಕರ್ನಾಟಕಅಗ್ನಿಪಥ ಯೋಜನೆ: ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ ಕೇಂದ್ರಕ್ಕೆ ಸಿದ್ದರಾಮಯ್ಯ ಪ್ರಶ್ನೆ

ಅಗ್ನಿಪಥ ಯೋಜನೆ: ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ ಕೇಂದ್ರಕ್ಕೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆಗೆ ದೇಶದಾದ್ಯಂತ ಯುವಜನರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ಕಳೆದೆರಡು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ’ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ’ ಎಂದು ಪ್ರಶ್ನಿಸಿ ಒಕ್ಕೂಟ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, “ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ..? ” ಎಂದಿದ್ದಾರೆ.

“ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ..?” ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್‌‌‌‌‌ ಯೋಜನೆ ವಿರೋಧಿಸಿ ಹಲವು ರಾಜ್ಯಗಳಲ್ಲಿ ಪ್ರತಿಭಟನೆ: ಬಿಹಾರ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ ಧ್ವಂಸ

“ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ..? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ..?” ಎಂದು ಪ್ರಶ್ನೆಗಳ ಮಳೆ ಸುರಿದಿದ್ದಾರೆ.

“ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ..? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ ನರೇಂದ್ರ ಮೋದಿಯವರೆ”ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

“ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲ!” ಎಂದಿದ್ದಾರೆ.

“ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ, ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು” ಎಂದು ಜನರಿಗೆ ಕರೆ ನೀಡಿದ್ದಾರೆ.

ಒಕ್ಕೂಟ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಗೆ ರಾಷ್ಟ್ರಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಉದ್ಯೋಗಾಕಾಂಕ್ಷಿ ಯುವಜನರು ಸಿಡಿದೆದ್ದಿದ್ದು 7 ರಾಜ್ಯಗಳಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ತಡೆಯಲು ಪೊಲೀಸರು ಲಾಠೀ ಚಾರ್ಜ್ ಮಾಡಿದ್ದರಿಂದ ಪ್ರತಿಭಟನೆ ಹಿಂಸಾರೂಪ ಪಡೆದಿದೆ. ಇದುವರೆಗೂ ದೇಶಾದ್ಯಂತ ಒಂದು ಸಾವು ಸಂಭವಿಸಿದ್ದು, 8 ಜನರ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.


ಇದನ್ನೂ ಓದಿ: ಅಗ್ನಿಪಥ ಯೋಜನೆ: ಯುವಕರಿಗೆ 4 ವರ್ಷಗಳಲ್ಲ, ಪೂರ್ಣಾವಧಿಯ ಉದ್ಯೋಗ ನೀಡಿ- ಕೇಜ್ರಿವಾಲ್ ಒತ್ತಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...