Homeಮುಖಪುಟಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

ಅಗ್ನಿಪಥ ಯೋಜನೆ: ನಿರ್ಧಾರ ಕೈಗೊಳ್ಳುವ ಮೊದಲು ನಮ್ಮ ಮಾತನ್ನೂ ಕೇಳಿ- ಸುಪ್ರೀಂಗೆ ಕೇಂದ್ರದ ಮನವಿ

- Advertisement -
- Advertisement -

‘ಅಗ್ನಿಪಥ’ ಸೇನಾ ನೇಮಕಾತಿ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ಕುರಿತು ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ನ್ಯಾಯಾಲಯವು ತಮ್ಮ ಮಾತನ್ನು ಆಲಿಸಬೇಕು ಎಂದು ಒತ್ತಾಯಿಸಿ ಒಕ್ಕೂಟ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ.

ಈವರೆಗೆ, ಒಕ್ಕೂಟ ಸರ್ಕಾರ ಸಶಸ್ತ್ರ ಪಡೆಗಳಿಗೆ ಅಲ್ಪಾವಧಿಯ ನೇಮಕಾತಿ ಯೋಜನೆಯಾದ ‘ಅಗ್ನಿಪಥ’ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೂರು ಅರ್ಜಿಗಳನ್ನು ಸಲ್ಲಿಸಲಾಗಿದೆ. ಆದರೆ ಕೇಂದ್ರ ಸರ್ಕಾರ ಸಲ್ಲಿಸಿರುವ ಮನವಿ ನಿರ್ದಿಷ್ಟವಾಗಿ ಯಾವುದೇ ಅರ್ಜಿಯನ್ನು ಉಲ್ಲೇಖಿಸಿಲ್ಲ.

‘ಅಗ್ನಿಪಥ’ ನೇಮಕಾತಿ ಯೋಜನೆಯನ್ನು ಮರುಪರಿಶೀಲಿಸುವಂತೆ ಕೇಂದ್ರಕ್ಕೆ ನಿರ್ದೇಶನಗಳನ್ನು ನೀಡುವಂತೆ ವಕೀಲ ಹರ್ಷ್ ಅಜಯ್ ಸಿಂಗ್ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯೋಜನೆ ಘೋಷಣೆಯಾದ ನಂತರ ದೇಶದ ಹಲವಾರು ಭಾಗಗಳಲ್ಲಿ ಪ್ರತಿಭಟನೆಗೆ ಕಾರಣವಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ: ’ಮೋದಿ ಹಿಟ್ಲರ್‌ ಮಾರ್ಗವನ್ನು ಅನುಸರಿಸಿದರೆ ಹಿಟ್ಲರ್‌ನಂತೆ ಸಾಯುತ್ತಾರೆ’- ಕಾಂಗ್ರೆಸ್ ನಾಯಕ

ವಕೀಲ ಹರ್ಷ್ ಅಜಯ್ ಸಿಂಗ್ ಅರ್ಜಿ ಸಲ್ಲಿಸುವ ಮೊದಲು ಈ ಯೋಜನೆಯ ವಿರುದ್ಧ ವಕೀಲರಾದ ಎಂ.ಎಲ್. ಶರ್ಮಾ ಮತ್ತು ವಿಶಾಲ್ ತಿವಾರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ಸಂವಿಧಾನಾತ್ಮಕ ನಿಬಂಧನೆಗಳಿಗೆ ವಿರುದ್ಧವಾದ ಮತ್ತು ಸಂಸತ್ತಿನ ಅನುಮೋದನೆಯಿಲ್ಲದೆಯೇ, ಒಕ್ಕೂಟ ಸರ್ಕಾರ ಸಶಸ್ತ್ರ ಪಡೆಗಳಿಗೆ ಶತಮಾನಗಳಷ್ಟು ಹಳೆಯದಾದ ಆಯ್ಕೆ ಪ್ರಕ್ರಿಯೆಯನ್ನು ರದ್ದುಗೊಳಿಸಿದೆ ಎಂದು ವಕೀಲ ಎಂಎಲ್ ಶರ್ಮಾ ಸಲ್ಲಿಸಿದ ಅರ್ಜಿಯಲ್ಲಿ ಆರೋಪಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಳೆದ ವಾರ, ವಕೀಲ ವಿಶಾಲ್ ತಿವಾರಿ ಅವರು ತಮ್ಮ ಅರ್ಜಿಯಲ್ಲಿ, ರಾಷ್ಟ್ರೀಯ ಭದ್ರತೆ ಮತ್ತು ಸೇನೆಯ ಮೇಲೆ ಈ ಯೋಜನೆಯ ಪ್ರಭಾವವನ್ನು ಪರಿಶೀಲಿಸಲು ಸಮಿತಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್‌ಗೆ ಒತ್ತಾಯಿಸಿದ್ದರು. ಸಾರ್ವಜನಿಕ ಆಸ್ತಿ ನಾಶಕ್ಕೆ ಕಾರಣವಾದ ಯೋಜನೆಯ ವಿರುದ್ಧ ನಡೆದ ದೊಡ್ಡ ಪ್ರಮಾಣದ ಹಿಂಸಾಚಾರದ ತನಿಖೆಗೆ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸುವಂತೆ ಉನ್ನತ ನ್ಯಾಯಾಲಯದಿಂದ ನಿರ್ದೇಶನವನ್ನು ಕೋರಿದ್ದಾರೆ.

ಜೂನ್ 14 ರಂದು ಕೇಂದ್ರವು ‘ಅಗ್ನಿಪಥ’ ಯೋಜನೆಯನ್ನು ಅನಾವರಣಗೊಳಿಸಿದ ನಂತರ ಹಲವಾರು ರಾಜ್ಯಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದವು. ಈ ಯೋಜನೆಯಡಿಯಲ್ಲಿ, 17.5 ರಿಂದ 21 ವರ್ಷಗಳ ನಡುವಿನ ಯುವ ಜನರನ್ನು ನಾಲ್ಕು ವರ್ಷಗಳ ಅವಧಿಗೆ ಸಶಸ್ತ್ರ ಪಡೆಗಳಲ್ಲಿ ನೇಮಿಸಿಕೊಳ್ಳಲಾಗುವುದು. ಪ್ರತಿಭಟನಾಕಾರರನ್ನು ಸಮಾಧಾನಪಡಿಸುವ ಪ್ರಯತ್ನದಲ್ಲಿ ಸರ್ಕಾರವು ನೇಮಕಾತಿಗಾಗಿ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ವಿಸ್ತರಿಸಿತು.


ಇದನ್ನೂ ಓದಿ: ಪ್ರಧಾನಿ ಮೋದಿ ಬಾಲ್ಯದಲ್ಲಿ ‘ಭಾರಿ ಧೈರ್ಯವಂತ’ ಆಗಿದ್ದರು: 1ನೇ ತರಗತಿ ಪಠ್ಯಪುಸ್ತಕ ಸೇರಿದ ‘ಮೊಸಳೆ ಕತೆ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...