ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಒಕ್ಕೂಟ ಸರ್ಕಾರ ಘೋಷಿಸಿರುವ ’ಅಗ್ನಿಪಥ್’ ಯೋಜನೆ ವಿರುದ್ಧ ಉದ್ಯೋಗಾಕಾಂಕ್ಷಿಗಳು ದೇಶವ್ಯಾಪಿ ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ಇದುವರೆಗೆ 200 ಕ್ಕೂ ಹೆಚ್ಚು ರೈಲುಗಳ ಮೇಲೆ ಪರಿಣಾಮ ಬೀರಿದೆ ಎಂದು ರೈಲ್ವೆ ಇಲಾಖೆ ಶುಕ್ರವಾರ ತಿಳಿಸಿದೆ.
ಬುಧವಾರ (ಜೂನ್ 16) ಪ್ರತಿಭಟನೆಗಳು ಭುಗಿಲೆದ್ದ ನಂತರ ಸುಮಾರು 35 ರೈಲುಗಳನ್ನು ರದ್ದುಗೊಳಿಸಲಾಗಿದೆ. ಮತ್ತು 13 ರೈಲುಗಳನ್ನು ಅಲ್ಪಾವಧಿಗೆ ರದ್ದುಗೊಳಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.
ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ವ್ಯಾಪಕ ಪ್ರತಿಭಟನೆಗಳು ನಡೆದಿದೆ. ರೈಲುಗಳ ಚಲನವಲನದ ಮೇಲೆ ನಾವು ನಿಗಾ ಇರಿಸಿದ್ದೇವೆ. ಪರಿಸ್ಥಿತಿ ನೋಡಿಕೊಂಡು ಅವುಗಳ ಕಾರ್ಯಾಚರಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಅಗ್ನಿಪಥ್ ಯೋಜನೆ: ಮಧ್ಯಪ್ರದೇಶದಲ್ಲಿ ತೀವ್ರಗೊಂಡ ಪ್ರತಿಭಟನೆ, ಕಲ್ಲು ತೂರಾಟ, ಹಳಿಗಳ ಮೇಲೆ ಧರಣಿ
ಬಿಹಾರದಲ್ಲಿ ಉದ್ರಿಕ್ತ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ರೈಲು, ರಸ್ತೆ ತಡೆಯನ್ನು ನಡೆಸಿದ್ದಾರೆ. ಪ್ರತಿಭಟನಾಕಾರರು ಸರನ್ ಜಿಲ್ಲೆಯ ಛಾಪ್ರಾದಲ್ಲಿ ಪ್ಯಾಸೆಂಜರ್ ರೈಲಿಗೆ ಬೆಂಕಿ ಹಚ್ಚಿದ್ದರು. ಪೊಲೀಸರು ಜನರನ್ನು ಚದುರಿಸಲು ಲಾಠಿ ಚಾರ್ಜ್ ಮಾಡಿದ್ದು, ಆಶ್ರುವಾಯು ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
#ಬಿಹಾರ: ಒಕ್ಕೂಟ ಸರ್ಕಾರದ #ಅಗ್ನಿಪಥ ಯೋಜನೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ, ಪ್ರತಿಭಟನಾಕಾರರು ಸರನ್ ಜಿಲ್ಲೆಯ ಛಾಪ್ರಾದಲ್ಲಿ ಪ್ಯಾಸೆಂಜರ್ ರೈಲಿಗೆ ಬೆಂಕಿ ಹಚ್ಚಲಾಯಿತು.#ಉದ್ಯೋಗಕೊಡಿ #NaanuGauri #Agnipath #Agniveer pic.twitter.com/A4XruCtay6
— Naanu Gauri (@naanugauri) June 16, 2022
ಬಿಹಾರದ ಭಬುವಾ ನಗರದಲ್ಲಿಯೂ ಅಗ್ನಿಪಥ್ ಯೋಜನೆ ವಿರೋಧಿಸಿ ಮತ್ತು ಉದ್ಯೋಗಕ್ಕಾಗಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ರೈಲಿಗೆ ಬೆಂಕಿ ಹಚ್ಚಿದ್ದರು.
#ಬಿಹಾರ ದ ಭಬುವಾ ನಗರದಲ್ಲಿ #ಬಿಜೆಪಿ ಸರ್ಕಾರದ #ಅಗ್ನಿಪಥ್ ಯೋಜನೆ ವಿರೋಧಿಸಿ ಮತ್ತು ಉದ್ಯೋಗಕ್ಕಾಗಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ರೈಲಿಗೆ ಬೆಂಕಿ ಹಚ್ಚಿದ್ದಾರೆ#ಉದ್ಯೋಗಕೊಡಿ #NaanuGauri #Agnipath #Agniveer #ಅಗ್ನಿವೀರ್ pic.twitter.com/04V9G34tQE
— Naanu Gauri (@naanugauri) June 16, 2022
ಬಲಿಯಾದಲ್ಲಿ ‘ಭಾರತ್ ಮಾತಾ ಕಿ ಜೈ’ ಮತ್ತು ‘ಅಗ್ನಿಪಥ್ ವಾಪಾಸ್ ಲೋ (ಅಗ್ನಿಪಥ್ ಯೋಜನೆ ಹಿಂಪಡೆಯಿರಿ) ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾಕಾರರು ಖಾಲಿ ರೈಲಿಗೆ ಬೆಂಕಿ ಹಚ್ಚಿದರು. ಇತರ ಕೆಲವು ರೈಲುಗಳನ್ನು ಧ್ವಂಸಗೊಳಿಸಿದರು.
7 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ತಡೆಯಲು ಪೊಲೀಸರು ಲಾಠೀ ಚಾರ್ಜ್ ಮಾಡಿದ್ದರಿಂದ ಪ್ರತಿಭಟನೆ ಹಿಂಸಾರೂಪ ಪಡೆದಿದೆ. ಇದುವರೆಗೂ ದೇಶಾದ್ಯಂತ ಒಂದು ಸಾವು ಸಂಭವಿಸಿದ್ದು, 8 ಜನರ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ: ಅಗ್ನಿಪಥ್ ವಿರುದ್ಧ ಸಿಡಿದೆದ್ದ ಯುವಜನತೆ: ಒಂದು ಸಾವು, 8 ಜನರಿಗೆ ಗಾಯ – ವಯಸ್ಸಿನ ಮಿತಿ ಹೆಚ್ಚಳಕ್ಕೆ ಮುಂದಾದ ಕೇಂದ್ರ


