Homeಚಳವಳಿಅಗ್ನಿಪಥ ಯೋಜನೆ: ಹಿಂಸಾಚಾರದಲ್ಲಿ ಭಾಗಿಯಾದವರು ಸೇನೆ ಸೇರಲು ಸಾಧ್ಯವಿಲ್ಲ- ಲೆ. ಜನರಲ್ ಪುರಿ

ಅಗ್ನಿಪಥ ಯೋಜನೆ: ಹಿಂಸಾಚಾರದಲ್ಲಿ ಭಾಗಿಯಾದವರು ಸೇನೆ ಸೇರಲು ಸಾಧ್ಯವಿಲ್ಲ- ಲೆ. ಜನರಲ್ ಪುರಿ

- Advertisement -
- Advertisement -

ಅಗ್ನಿಪಥ ಯೋಜನೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆಗಳು ಭುಗಿಲೆದ್ದಿರುವ ಬೆನ್ನಲ್ಲೇ, ’ಹಿಂಸಾಚಾರ, ವಿದ್ವಂಸಕ ಕೃತ್ಯಗಳಲ್ಲಿ ಭಾಗಿಯಾದವರು ಸೇನೆಗೆ ಸೇರಲು ಸಾಧ್ಯವಿಲ್ಲ’ ಎಂದು ಮಿಲಿಟರಿ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್ ಜನರಲ್ ಪುರಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸರ್ಕಾರವು ಯೋಜನೆಯನ್ನು ಪರಿಶೀಲಿಸಲು ಅಥವಾ ಹಿಂದೆಗೆದುಕೊಳ್ಳಲು ಪ್ರಸ್ತಾಪಿಸಿದೆಯೇ ಎಂಬ ಪ್ರಶ್ನೆಗೆ, ಉತ್ತರಿಸಿರುವ ಅವರು, “ಇಲ್ಲ, ಈ ಯೋಜನೆಯನ್ನು ಏಕೆ ಹಿಂತೆಗೆದುಕೊಳ್ಳಬೇಕು..? ಎಂದಿದ್ದಾರೆ.

ಪ್ರತಿಭಟನಾಕಾರರಿಗೆ ಎಚ್ಚರಿಕೆ ನೀಡಿರುವ ಲೆಫ್ಟಿನೆಂಟ್ ಜನರಲ್ ಪುರಿ, ಇಂತಹ ಪ್ರತಿಭಟನೆಯಿಂದ ಅಗ್ನಿಪಥ ಯೋಜನೆಯಲ್ಲಿ ಯಾವುದೇ ಸ್ಥಾನ ಪಡೆಯುವುದಿಲ್ಲ ಎಂದಿದ್ದಾರೆ.

“ಸೇನೆಯ ಅಡಿಪಾಯ ಶಿಸ್ತು. ಬೆಂಕಿ ಹಚ್ಚುವಿಕೆ ಅಥವಾ ವಿಧ್ವಂಸಕ ಕೃತ್ಯಗಳಿಗೆ ಇಲ್ಲಿ ಜಾಗವಿಲ್ಲ. ಪ್ರತಿಯೊಬ್ಬ ವ್ಯಕ್ತಿಗೂ ಹಿಂಸಾತ್ಮಕ ಪ್ರತಿಭಟನೆ ಅಥವಾ ವಿಧ್ವಂಸಕ ಕೃತ್ಯದ ಭಾಗವಾಗಿಲ್ಲ ಎಂದು ಪ್ರಮಾಣಪತ್ರವನ್ನು ನೀಡುತ್ತಾರೆ. 100% ಪೊಲೀಸ್ ಪರಿಶೀಲನೆ ನಡೆಯಲಿದೆ. ಪೊಲೀಸ್ ಪರಿಶೀಲನೆ ಇಲ್ಲದೆ ಯಾರೂ ಸೇನೆ ಸೇರಲು ಸಾಧ್ಯವಿಲ್ಲ. ಉದ್ಯೋಗಾಕಾಂಕ್ಷಿಗಳ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಿಸಿದ್ದರೂ, ಅವರು ಸೇರಲು ಸಾಧ್ಯವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ: ಅಗ್ನಿಪಥ್ ವಿರೋಧಿಸಿ ಇಂದು ಭಾರತ್ ಬಂದ್: ಬಿಹಾರದಲ್ಲಿ 350 ರೈಲುಗಳ ಸಂಚಾರ ರದ್ದು

ಸೇನೆಗೆ ಸಂಬಂಧಿಸಿದಂತೆ, ಲೆಫ್ಟಿನೆಂಟ್ ಜನರಲ್ ಬನ್ಸಿ ಪೊನ್ನಪ್ಪ, ಅವರು ನೇಮಕಾತಿ ಕುರಿತು ಕರಡು ಅಧಿಸೂಚನೆಯನ್ನು ಸೋಮವಾರ ಹೊರಡಿಸಲಾಗುವುದು.  ಒಟ್ಟು ದೇಶಾದ್ಯಂತ 83 ನೇಮಕಾತಿ ರ್‍ಯಾಲಿಗಳನ್ನು ಆಯೋಜಿಸಲಾಗುವುದು. ನವೆಂಬರ್ 21 ರೊಳಗೆ ನೌಕಾಪಡೆಯ ಮೊದಲ ಬ್ಯಾಚ್ ಪುರುಷ ಮತ್ತು ಮಹಿಳೆ ಇಬ್ಬರೂ ತರಬೇತಿಗೆ ಸೇರುತ್ತಾರೆ ಎಂದಿದ್ದಾರೆ.

ಇನ್ನು ಮೊದಲ ಬ್ಯಾಚ್‌ನಲ್ಲಿ, 3,000 ಅಗ್ನಿವೀರರನ್ನು ನೌಕಾಪಡೆಗೆ ಸೇರಿಸಲಾಗುವುದು, ಅವರಲ್ಲಿ 20% ಮಹಿಳೆಯರು ಇರುತ್ತಾರೆ ಎಂದು ಮೂಲಗಳು ತಿಳಿಸಿವೆ.

ಯೋಜನೆ ಘೋಷಿಸಿ ಒಂದು ವಾರವಾಗುತ್ತಿದ್ದರೂ ಪ್ರತಿಭಟನೆಗಳು ಜೋರಾಗುತ್ತಲೇ ಇವೆ. ಕಾಶ್ಮೀರದಿಂದ ಕೇರಳದವರೆಗೆ ಪ್ರತಿಭಟನೆಗಳು ವ್ಯಾಪಿಸಿದ್ದು, ಉದ್ಯೋಗ ಆಕಾಂಕ್ಷಿಗಳು ಇಂದು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಹಾರದಲ್ಲಿ ಇಂದು 350 ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.


ಇದನ್ನೂ ಓದಿ: ಅಗ್ನಿಪಥ ಯೋಜನೆಗೆ ವಿರೋಧ: ತೆಲಂಗಾಣ ಹಿಂಸಾಚಾರ ಆರೋಪದಲ್ಲಿ ಮಾಜಿ ಸೈನಿಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...