Homeಚಳವಳಿಅಗ್ನಿಪಥ ಯೋಜನೆಗೆ ವಿರೋಧ: ತೆಲಂಗಾಣ ಹಿಂಸಾಚಾರ ಆರೋಪದಲ್ಲಿ ಮಾಜಿ ಸೈನಿಕರ ಬಂಧನ

ಅಗ್ನಿಪಥ ಯೋಜನೆಗೆ ವಿರೋಧ: ತೆಲಂಗಾಣ ಹಿಂಸಾಚಾರ ಆರೋಪದಲ್ಲಿ ಮಾಜಿ ಸೈನಿಕರ ಬಂಧನ

- Advertisement -
- Advertisement -

ಒಕ್ಕೂಟ ಸರ್ಕಾರ ಘೋಷಿಸಿರುವ ‘ಅಗ್ನಿಪಥ’ ನೇಮಕಾತಿ ಯೋಜನೆಗೆ ಸಂಬಂಧಿಸಿದಂತೆ ತೆಲಂಗಾಣದ ಸಿಕಂದರಾಬಾದ್ ರೈಲ್ವೆ ನಿಲ್ದಾಣದಲ್ಲಿ ಶುಕ್ರವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸೈನಿಕರೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರತಿಭಟನಾಕಾರರು ಹಲವಾರು ರೈಲುಗಳಿಗೆ ಬೆಂಕಿ ಹಚ್ಚಿದ ಹಿಂಸಾಚಾರದ ಹಿಂದಿನ ಮಾಸ್ಟರ್‌ಮೈಂಡ್ ಆವುಲಾ ಸುಬ್ಬಾ ರಾವ್ (Avula Subba Rao) ಎಂದು ಹೇಳಲಾಗಿದೆ. ಇದರ ಜೊತೆಗೆ ಗುಂಪು ಚದುರಿಸಲು ಪೊಲೀಸರು ಗುಂಡು ಹಾರಿಸಿದಾಗ 19 ವರ್ಷದ ರಾಜೇಶ್ ಎಂಬ ಪ್ರತಿಭಟನಾಕಾರ ಸಾವನ್ನಪ್ಪಿದ್ದಾರೆ ಮತ್ತು ಒಂದು ಡಜನ್‌ಗೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಪಥ ವಿರುದ್ಧದ ಪ್ರತಿಭಟನೆಯಲ್ಲಿ ಜನಸಮೂಹವನ್ನು ಸಜ್ಜುಗೊಳಿಸಲು ಅವರು ವಾಟ್ಸಾಪ್ ಗುಂಪುಗಳನ್ನು ರಚಿಸಿದ್ದಾರೆ. ಅಲ್ಲದೆ ಸಿಕಂದರಾಬಾದ್‌ನಲ್ಲಿ ಬೆಂಕಿ ಹಚ್ಚುವಿಕೆ ಮತ್ತು ವಿಧ್ವಂಸಕ ಕೃತ್ಯಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆವುಲಾ ಸುಬ್ಬಾ ರಾವ್ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯವರು. ಕಳೆದ ಕೆಲವು ವರ್ಷಗಳಿಂದ ನರಸರಾವ್‌ಪೇಟೆ, ಹೈದರಾಬಾದ್ ಮತ್ತು ಕನಿಷ್ಠ ಏಳು ಸ್ಥಳಗಳಲ್ಲಿ ಸೇನಾ ಆಕಾಂಕ್ಷಿಗಳಿಗಾಗಿ ತರಬೇತಿ ಅಕಾಡೆಮಿಯನ್ನು ನಡೆಸುತ್ತಿದ್ದಾರೆ. ಶನಿವಾರ ವಿಚಾರಣೆಗಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ: ಯಾರಿಗೂ ಯಾರ ಜೀವವನ್ನು ತೆಗೆಯುವ ಹಕ್ಕು ಇಲ್ಲ- ಸ್ಪಷ್ಟನೆ ನೀಡಿದ ನಟಿ ಸಾಯಿ ಪಲ್ಲವಿ

ಶುಕ್ರವಾರ ಸಾವಿರಾರು ಪ್ರತಿಭಟನಾಕಾರರು ರೈಲ್ವೇ ನಿಲ್ದಾಣದಲ್ಲಿ ಹಲವಾರು ಪ್ರಯಾಣಿಕರ ರೈಲುಗಳ ಮೇಲೆ ದಾಳಿ ಮಾಡಿ, ಕೋಚ್‌ಗಳನ್ನು ಸುಟ್ಟುಹಾಕಿ ಮತ್ತು ಸಾರ್ವಜನಿಕ ಆಸ್ತಿಯನ್ನು ನಾಶಪಡಿಸಿದ್ದರಿಂದ ವಾರಂಗಲ್‌ನ 19 ವರ್ಷದ ರಾಜೇಶ್ ಕೊಲ್ಲಲ್ಪಟ್ಟರು ಮತ್ತು ಒಂದು ಡಜನ್‌ಗೂ ಹೆಚ್ಚು ಜನರು ಗಾಯಗೊಂಡರು.

ಅದೋನಿ, ಕರ್ನೂಲ್, ಗುಂಟೂರು, ನೆಲ್ಲೂರು, ಅಮದಾಲವಲಸ, ವಿಶಾಖಪಟ್ಟಣ ಮತ್ತು ಯಲಮಂಚಿಲಿಯಿಂದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

ನಾಲ್ಕು ವರ್ಷಗಳ ಅಲ್ಪಾವಧಿ ಒಪ್ಪಂದದ ಆಧಾರದ ಮೇಲೆ ಸೇನೆ, ನೌಕಾಪಡೆ ಮತ್ತು ವಾಯುಸೇನೆಯಲ್ಲಿ ಸೈನಿಕರ ನೇಮಕಾತಿಗಾಗಿ ಸರ್ಕಾರ ‘ಅಗ್ನಿಪಥ’ ಯೋಜನೆಯನ್ನು ಘೋಷಿಸಿದ ನಂತರ ಹಲವಾರು ರಾಜ್ಯಗಳಲ್ಲಿ ಭಾರಿ ಪ್ರತಿಭಟನೆ ಭುಗಿಲೆದ್ದಿದೆ.

ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ತೆಲಂಗಾಣ, ಮಧ್ಯಪ್ರದೇಶ ಸೇರಿದಂತೆ ಇತರೆ ರಾಜ್ಯಗಳಲ್ಲಿ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿವೆ. ಅಷ್ಟರಮಟ್ಟಿಗೆ ಯುವಜನರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೇ ಕೊಡಗಿನ ವೀರ ಯೋಧರೂ ಈ ಯೋಜನೆಯ ಕುರಿತು ಆತಂಕ ವ್ಯಕ್ತಪಡಿಸುತ್ತಿದ್ದಾರೆ.


ಇದನ್ನೂ ಓದಿ: ಅಗ್ನಿಪಥ ಯೋಜನೆ: ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ ಕೇಂದ್ರಕ್ಕೆ ಸಿದ್ದರಾಮಯ್ಯ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...