ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆಗ್ರಾದ ತಾಜ್ ಮಹಲ್ ಮುಖ್ಯ ಗುಮ್ಮಟ ನೀರು ಸೋರಿಕೆಯಾಗಿದ್ದು, ಆವರಣದಲ್ಲಿರುವ ಉದ್ಯಾನಕ್ಕೆ ನೀರು ನುಗ್ಗಿದೆ. ಗುರುವಾರ ತಾಜ್‌ಮಹಲ್ ಆವರಣದಲ್ಲಿರುವ ಉದ್ಯಾನ ಮುಳುಗಡೆ ಆಗಿರುವ ವಿಡಿಯೋ ವೈರಲ್ ಆಗಿತ್ತು. ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗಿದೆಯಾದರೂ, ಅದಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಗುರುವಾರ ಸಂಜೆ ಹೊರಹೊಮ್ಮಿದ 20 ಸೆಕೆಂಡ್‌ಗಳ ವೀಡಿಯೊವು ಇಂಟರ್‌ನೆಟ್‌ನಲ್ಲಿ ವೈರಲ್ ಆಗಿದ್ದು, ಇದರಲ್ಲಿ ಸ್ಮಾರಕದ ಉದ್ಯಾನವೊಂದು ಮಳೆ ನೀರಿನಿಂದ ಮುಳುಗಿದ್ದು ದಾಖಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ತಾಜ್ ಮಹಲ್ ಮುಖ್ಯ ಗುಮ್ಮಟದಲ್ಲಿನ ಸೋರಿಕೆ ಕುರಿತು ಮಾತನಾಡಿದ ಆಗ್ರಾ ವೃತ್ತದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ಎಎಸ್‌ಐ) ಅಧೀಕ್ಷಕ ಮುಖ್ಯಸ್ಥ ರಾಜ್‌ಕುಮಾರ್ ಪಟೇಲ್, “ಹೌದು, ತಾಜ್ ಮಹಲ್‌ನ ಮುಖ್ಯ ಗುಮ್ಮಟದಲ್ಲಿ ಸೋರಿಕೆಯಾಗಿರುವುದನ್ನು ನಾವು ನೋಡಿದ್ದೇವೆ. ಅದರ ನಂತರ ನಾವು ಪರಿಶೀಲಿಸಿದಾಗ ಸೋರಿಕೆಯಿಂದಾಗಿ ಮುಖ್ಯ ಗುಮ್ಮಟಕ್ಕೆ ಯಾವುದೇ ಹಾನಿಯಾಗಿಲ್ಲ. ನಾವು ಡ್ರೋನ್ ಕ್ಯಾಮೆರಾ ಮೂಲಕ ಮುಖ್ಯ ಗುಮ್ಮಟವನ್ನು ಪರಿಶೀಲಿಸಿದ್ದೇವೆ” ಎಂದು ಹೇಳಿದ್ದಾರೆ.
ಇದನ್ನೂಓದಿ: ಬಿರಿಯಾನಿ ತಂದ ವಿದ್ಯಾರ್ಥಿಯ ಅಮಾನತು ಪ್ರಕರಣ | ಮಕ್ಕಳ ಹಕ್ಕುಗಳ ಆಯೋಗದಿಂದ ತನಿಖೆಗೆ ಆದೇಶ
ವಿಡಿಯೊ ಪ್ರವಾಸಿಗರ ಗಮನ ಸೆಳೆದಿದ್ದು, ಹಾಗಾಗಿ ಹಲವಾರು ಜನರು ತಾಜ್ ಮಹಲ್‌ಗೆ ಭೇಟಿ ನೀಡಿ, ಅದರ ವೀಡಿಯೊವನ್ನು ಚಿತ್ರೀಕರಿಸಿದ್ದಾರೆ. ಸರ್ಕಾರಿ ಅನುಮೋದಿತ ಪ್ರವಾಸಿ ಮಾರ್ಗದರ್ಶಿಯಾಗಿ ಕೆಲಸ ಮಾಡುತ್ತಿರುವ ಸ್ಥಳೀಯ ನಿವಾಸಿಯೊಬ್ಬರು, “ಸ್ಮಾರಕವನ್ನು ಸರಿಯಾದ ಕಾಳಜಿ ವಹಿಸಿ ನಿರ್ವಹಿಸಬೇಕು. ಏಕೆಂದರೆ ಪ್ರವಾಸೋದ್ಯಮ ಉದ್ಯಮದ ಜನರಿಗೆ ಇದು ಏಕೈಕ ಭರವಸೆಯಾಗಿದೆ” ಎಂದು ಹೇಳಿದರು.
ತಾಜ್ ಮಹಲ್ ಆಗ್ರಾ ಮತ್ತು ಇಡೀ ರಾಷ್ಟ್ರದ ಹೆಮ್ಮೆಯಾಗಿದೆ, ಇದು ನೂರಾರು ಸ್ಥಳೀಯರಿಗೆ ಮತ್ತು ಪ್ರವಾಸೋದ್ಯಮ ಉದ್ಯಮದಲ್ಲಿ ಕೆಲಸ ಮಾಡುವವರಿಗೆ ಉದ್ಯೋಗವನ್ನು ನೀಡುತ್ತದೆ ಎಂದು ಸರ್ಕಾರದ ಅನುಮೋದಿತ ಪ್ರವಾಸಿ ಮಾರ್ಗದರ್ಶಿ ಮೋನಿಕಾ ಶರ್ಮಾ ಹೇಳಿದ್ದಾರೆ.
ಆಗ್ರಾದಲ್ಲಿ ಕಳೆದ ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಬಹುತೇಕ ಭಾಗಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯೊಂದು ಮಳೆ ನೀರಿನಿಂದ ಕೊಚ್ಚಿ ಹೋಗಿದ್ದು, ಮಳೆ ನೀರಿನಿಂದ ಬೆಳೆಗಳು ಮುಳುಗಡೆಯಾಗಿದ್ದು, ನಿರಂತರ ಮಳೆಯಿಂದಾಗಿ ನಗರದ ಐಷಾರಾಮಿ ಪ್ರದೇಶಗಳು ನೀರು ನುಗ್ಗಿವೆ ಎಂದು ವರದಿಯಾಗಿದೆ. ಮಳೆಯಿಂದಾಗಿ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಆಗ್ರಾ ಆಡಳಿತ ಆದೇಶಿಸಿದೆ.
ವಿಡಿಯೊನೋಡಿ: ರಾಜ್ಯಗಳ ಅಸ್ಮಿತೆ ಹಕ್ಕು ಮತ್ತು ಪಾಲಿನ ರಕ್ಷಣೆಗಾಗಿ ರಾಷ್ಟ್ರೀಯ ಅಭಿಯಾನ ಚಾಲನಾ ಸಭೆ


