Homeಮುಖಪುಟಆಗ್ರಾ: ಹೋಟೆಲ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಐವರ ಬಂಧನ

ಆಗ್ರಾ: ಹೋಟೆಲ್‌ನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಐವರ ಬಂಧನ

- Advertisement -
- Advertisement -

ಆಗ್ರಾದ ಹೋಟೆಲ್​ವೊಂದರಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಯುವತಿಗೆ ಮದ್ಯ ಸೇವಿಸುವಂತೆ ಒತ್ತಾಯಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ತನ್ನ ಸ್ನೇಹಿತ ಮತ್ತು ಇತರ ಕೆಲವರು ತನಗೆ ಬಲವಂತವಾಗಿ ಕುಡಿಯಲು ಒತ್ತಾಯಿಸಿದರು ಎಂದು ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ, ಮೊದಲು ಕೋಣೆಯೊಳಗೆ ಎಳೆದೊಯ್ದರು ಮತ್ತು ಪ್ರತಿಭಟಿಸಲು ಮುಂದಾದಾಗ ಕೆಲವರು ಹಲ್ಲೆ ಮಾಡಿದ್ದಾರೆ ಎಂದು ಯುವತಿ ಹೇಳಿಕೊಂಡಿದ್ದಾಳೆ.

ಈ ಸಂಬಂಧ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಅತ್ಯಾಚಾರ, ಹಲ್ಲೆ ಮತ್ತು ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪುರುಷರು ಹಾಗೂ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

ಸಂತ್ರಸ್ತ ಮಹಿಳೆ ಒಂದೂವರೆ ವರ್ಷದಿಂದ ಅದೇ ಹೋಟೆಲ್​ನಲ್ಲಿ ಉದ್ಯೋಗಿಯಾಗಿದ್ದಳು. ವಿಡಿಯೋದಲ್ಲಿ ಓರ್ವ ವ್ಯಕ್ತಿಯು ಕೋಣೆಗೆ ಆಕೆಯನ್ನು ಎಳೆದುಕೊಂಡು ಹೋಗುತ್ತಿರುವುದು ಹಾಗೂ ಸಹಾಯಕ್ಕಾಗಿ ಮನವಿ ಮಾಡುತ್ತಿರುವುದು ಕಂಡುಬಂದಿದೆ.

ತನ್ನನ್ನು ಬಲವಂತವಾಗಿ ಕೋಣೆಗೆ ಕರೆದೊಯ್ದು, ಅಮಾನುಷವಾಗಿ ಥಳಿಸಲಾಗಿದೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಆರೋಪಿಗಳು ಆಕೆಗೆ ಮದ್ಯ ಸೇವಿಸುವಂತೆ ಒತ್ತಾಯಿಸಿದ್ದಾರೆ. ಮಹಿಳೆ ತಲೆಯಲ್ಲಿ ರಕ್ತಸ್ರಾವವಾಗುತ್ತಿತ್ತು. ಆರೋಪಿಯೊಬ್ಬ ಮದ್ಯದ ಬಾಟಲಿಯಿಂದ ಆಕೆಯ ತಲೆಗೆ ಹೊಡೆದಿದ್ದಾನೆ ಎಂದು ಹೇಳಲಾಗಿದೆ.

ಇದನ್ನೂ ಓದಿ: 4 ವರ್ಷದ ಮಗು ಮೇಲೆ ಅತ್ಯಾಚಾರ: ಸಬ್ ಇನ್ಸ್‌ಪೆಕ್ಟರ್‌ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...