Homeಕರ್ನಾಟಕಒಳಮೀಸಲಾತಿ ಜಾರಿಗೆ ಒಪ್ಪಿಗೆ; ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿ ರದ್ದು: ಸಂಪುಟ ನಿರ್ಧಾರ

ಒಳಮೀಸಲಾತಿ ಜಾರಿಗೆ ಒಪ್ಪಿಗೆ; ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿ ರದ್ದು: ಸಂಪುಟ ನಿರ್ಧಾರ

- Advertisement -
- Advertisement -

ಮುಸ್ಲಿಮರಿಗೆ ಒಬಿಸಿ ಪಟ್ಟಿಯಲ್ಲಿ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದು ಮಾಡಲು ಕರ್ನಾಟಕ ಕ್ಯಾಬಿನೇಟ್ ನಿರ್ಧರಿಸಿದೆ. ಮುಸ್ಲಿಮರನ್ನು ಶೇಕಡಾ 10 ಇಡಬ್ಲ್ಯೂಎಸ್ ಕೋಟಾಕ್ಕೆ ಸ್ಥಳಾಂತರಿಸಲಾಗುತ್ತಿದೆ.

ಇದರ ನಡುವೆ ಮುಸ್ಲಿಮರಿಗೆ ನೀಡಲಾಗಿದ್ದ ಶೇಕಡಾ 4 ಮೀಸಲಾತಿಯನ್ನು ಒಕ್ಕಲಿಗರಿಗೆ (ಶೇಕಡಾ 2) ಮತ್ತು ಲಿಂಗಾಯತರಿಗೆ (ಶೇಕಡಾ 2) ಹಂಚಲು ನಿರ್ಧರಿಸಲಾಗಿದೆ.

ಒಳಮೀಸಲಾತಿ ಜಾರಿಗೆ ಒಪ್ಪಿಗೆ

ಅವಕಾಶ ವಂಚಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ಸರ್ಕಾರ ಪ್ರಕಟಿಸಿದೆ.

ವಿಧಾನಸೌಧದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಪರಿಶಿಷ್ಟ ಸಮುದಾಯಗೊಳಗೆ ಒಳ ಮೀಸಲಾತಿ ನೀಡಲು ಸಂಪುಟ ನಿರ್ಧಾರ ಕೈಗೊಂಡಿದೆ. ಎಸ್‌ಸಿ ಮೀಸಲಾತಿಯನ್ನು ನಾಲ್ಕು ಗುಂಪುಗಳಾಗಿ ವರ್ಗೀಕರಿಸಿ ಜನಸಂಖ್ಯೆಗೆ ಅನುಗುಣವಾಗಿ ನೀಡಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಗುಂಪು ಒಂದರಲ್ಲಿ ಮಾದಿಗ ಸಂಬಂಧಿತ ಜಾತಿಗಳಿಗೆ ಶೇ 6ರಷ್ಟು ಮೀಸಲಾತಿ, ಗುಂಪು 2 ರಲ್ಲಿ ಹೊಲೆಯ ಸಂಬಂಧಿತ ಸಮುದಾಯಕ್ಕೆ ಶೇ 5.5ರಷ್ಟು ಮೀಸಲಾತಿ, ಗುಂಪು 3ರಲ್ಲಿ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಕ್ಕೆ ಶೇ 4.5ರಷ್ಟು ಮೀಸಲಾತಿ, ಗುಂಪು 4ರಲ್ಲಿರುವ ಮತ್ತಿತರರಿಗೆ ಶೇ.1ರಷ್ಟು ಮೀಸಲಾತಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

2ಬಿ ಅಡಿ ಮುಸ್ಲಿಮರಿಗೆ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದ್ದು, ಅವರಿಗೆ ಆರ್ಥಿಕವಾಗಿ ಹಿಂದುಳಿದ ವರ್ಗದ(EWS) ಅಡಿಯಲ್ಲಿ ಮೀಸಲಾತಿ ನೀಡಲಾಗುವುದು. ಧಾರ್ಮಿಕ ಅಲ್ಪಸಂಖ್ಯಾತರಿಗೆ 7 ರಾಜ್ಯಗಳಲ್ಲಿ ಒಬಿಸಿ ಮೀಸಲಾತಿ ಇಲ್ಲ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ಇನ್ನು 2ಸಿ ಅಡಿ ಒಕ್ಕಲಿಗರಿಗೆ ಶೇಕಡಾ 6 ರಷ್ಟು ಮೀಸಲಾತಿ ಹಾಗೂ 2 ಡಿ ಅಡಿ ಲಿಂಗಾಯತರಿಗೆ ಶೇಕಡಾ 7ರಷ್ಟು ಮೀಸಲಾತಿ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಎರಡು ಬೃಹತ್ ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ಸರ್ಕಾರ ಮಾಡಿದೆ.

ಹೆಚ್ಚಳ ಕಾಣದ ಮಾದಿಗ ಸಮುದಾಯದ ಪಾಲು

ಒಳಮೀಸಲಾತಿ ಜಾರಿ ವಿಚಾರ ಈಗ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುತ್ತಿದೆ. ಜಸ್ಟೀಸ್‌ ನಾಗಮೋಹನದಾಸ್ ವರದಿಯ ಅನ್ವಯ ಶೇ. 15ರಿಂದ 17ಕ್ಕೆ ಪರಿಶಿಷ್ಟ ಮೀಸಲಾತಿಯನ್ನು ಏರಿಕೆ ಮಾಡಲು ಸರ್ಕಾರ ನಿರ್ಧಾರ ಪ್ರಕಟಿಸಿತು. ಏರಿಕೆ ಮಾಡಲಾದ ಮೀಸಲಾತಿ ಅನ್ವಯ ಮೀಸಲಾತಿಯನ್ನು ಹಂಚಿಕೆ ಮಾಡಲಾಗುತ್ತಿದೆ.

ಜಸ್ಟೀಸ್ ಎ.ಜೆ.ಸದಾಶಿವ ಆಯೋಗದ ವರದಿಯಲ್ಲಿ ಮಾದಿಗ ಸಮುದಾಯಕ್ಕೆ ಶೇ.6ರಷ್ಟು ಮೀಸಲಾತಿಯನ್ನು ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ ಎಂದು ಸೋರಿಕೆಯಾದ ಮಾಹಿತಿಗಳು ಹೇಳುತ್ತಿವೆ. ಆದರೆ ಈಗ ಸರ್ಕಾರ ಕೈಗೊಂಡಿರುವ ನಿರ್ಧಾರದಲ್ಲಿ ಮೀಸಲಾತಿ ಹೆಚ್ಚಳದ ಪಾಲನ್ನು ಮಾದಿಗ ಸಮುದಾಯಕ್ಕೆ ಪ್ರಕಟಿಸಿದಂತೆ ಕಾಣುತ್ತಿಲ್ಲ. ಸದಾಶಿವ ಆಯೋಗದ ವರದಿಯಲ್ಲಿ ನೀಡಲಾಗಿದ್ದ ಪ್ರಮಾಣವನ್ನಷ್ಟೇ ಮಾದಿಗ ಸಮುದಾಯಕ್ಕೆ ಹಂಚಿಕೆ ಮಾಡಲಾಗುತ್ತಿದೆ.

ಸಾರ್ವಜನಿಕವಾಗಿ ಸೋರಿಕೆಯಾಗಿರುವ ಮಾಹಿತಿಯ ಪ್ರಕಾರ- ಜಸ್ಟಿಸ್ ಎ.ಜೆ.ಸದಾಶಿವ ಆಯೋಗವು ಪರಿಶಿಷ್ಟ ಜಾತಿಯಲ್ಲಿನ 101 ಸಮುದಾಯಗಳನ್ನು 4 ಗುಂಪುಗಳಾಗಿ ವರ್ಗೀಕರಿಸಿ, ಶೇ.15ರ ಮೀಸಲಾತಿಯನ್ನು ಜನಸಂಖ್ಯೆ ಆಧಾರದ ಮೇಲೆ ಹಂಚಿಕೆ ಮಾಡಿದೆ. ಅದರಂತೆ ಶೇ.33.4ರಷ್ಟಿರುವ ಎಡಗೈ (ಮಾದಿಗ) ಸಮುದಾಯಕ್ಕೆ ಶೇ.6ರಷ್ಟು, ಶೇ.32ರಷ್ಟಿರುವ ಬಲಗೈ (ಹೊಲೆಯ) ಸಮುದಾಯಕ್ಕೆ ಶೇ.5ರಷ್ಟು, ಶೇ.23.64ರಷ್ಟಿರುವ ಸ್ಪೃಶ್ಯ ಪರಿಶಿಷ್ಟರಿಗೆ ಶೇ.3ರಷ್ಟು ಹಾಗೂ ಇತರೆ ಪರಿಶಿಷ್ಟರಿಗೆ ಶೇ.1ರಷ್ಟು ಮೀಸಲಾತಿ ನೀಡಬೇಕೆಂದು ಶಿಫಾರಸ್ಸು ಮಾಡಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

0
ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ...