Homeಮುಖಪುಟಅತ್ಯಾಚಾರ ಪ್ರಕರಣಗಳಲ್ಲಿ ದೂರುದಾರರು ಮತ್ತು ಆರೋಪಿಗಳು ನ್ಯಾಯಾಲಯದ ಹೊರಗೆ ರಾಜಿಯಾಗುವಂತಿಲ್ಲ : ಕೇರಳ ಹೈಕೋರ್ಟ್

ಅತ್ಯಾಚಾರ ಪ್ರಕರಣಗಳಲ್ಲಿ ದೂರುದಾರರು ಮತ್ತು ಆರೋಪಿಗಳು ನ್ಯಾಯಾಲಯದ ಹೊರಗೆ ರಾಜಿಯಾಗುವಂತಿಲ್ಲ : ಕೇರಳ ಹೈಕೋರ್ಟ್

- Advertisement -
- Advertisement -

ಅತ್ಯಾಚಾರ ಪ್ರಕರಣಗಳನ್ನು ದೂರುದಾರರು ಮತ್ತು ಆರೋಪಿಗಳು ನ್ಯಾಯಾಲಯದ ಹೊರಗೆ ಇತ್ಯರ್ಥ ಮಾಡಿಕೊಳ್ಳುವಂತಿಲ್ಲ ಎಂದು ಕೇರಳ ಹೈಕೋರ್ಟ್ ಸ್ಪಷ್ಟಪಡಿಸಿದೆ.

ದೂರುದಾರರು ಮತ್ತು ಆರೋಪಿಗಳ ನಡುವಿನ ಒಪ್ಪಂದವು ಸಾರ್ವಜನಿಕ ನೀತಿಗೆ ವಿರುದ್ಧವಾದ ಕಾರಣ ಅನೂರ್ಜಿತವಾಗಿದೆ ಎಂದು ಹೈಕೋರ್ಟ್ ಇತ್ತೀಚಿನ ತೀರ್ಪಿನಲ್ಲಿ ಹೇಳಿದೆ.

ದೂರುದಾರರು ಮತ್ತು ಆರೋಪಿ ವಿಷಯವನ್ನು ತಮ್ಮೊಳಗೆ ಇತ್ಯರ್ಥಗೊಳಿಸಲು ಒಪ್ಪಿಕೊಂಡಿದ್ದಾರೆ ಎಂಬ ಕಾರಣಕ್ಕೆ ಪ್ರಕರಣವನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಎ ಬಧರುದ್ದೀನ್ ಅವರ ಪೀಠ ತಿಳಿಸಿದೆ.

ತ್ರಿಶ್ಶೂರ್ ಜಿಲ್ಲೆಯ ಗ್ರಾಮ ಪಂಚಾಯತ್ ಒಂದರ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆ, ಅದೇ ಗ್ರಾಮ ಪಂಚಾಯತ್‌ನ ಸಹಾಯಕ ಕಾರ್ಯದರ್ಶಿ ಅಬ್ದುಲ್ ಜಲೀಲ್ ಎಂಬಾತ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ 2018ರಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು.

2016ರ ಮಾರ್ಚ್ 13ರಂದು ತುರ್ತು ಕೆಲಸ ಇದೆ ಎಂದು ಕಚೇರಿಗೆ ಕರೆಸಿಕೊಂಡ ಜಲೀಲ್, ತನ್ನ ಮೇಲೆ ಮೊದಲ ಬಾರಿ ಅತ್ಯಾಚಾರವೆಸಗಿದ್ದರು. ಆ ಬಳಿಕ ಆಗಾಗ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಮಹಿಳೆ ದೂರಿದ್ದರು. ಆರಂಭದಲ್ಲಿ ಭಯ ಮತ್ತು ಹಿಂಜರಿಕೆಯಿಂದ ಮಹಿಳೆ ಸುಮ್ಮನಿದ್ದರು. ಬಳಿಕ ದೇಹದಲ್ಲಿ ನೋವಿನ ಕಾರಣ ವೈದ್ಯಕೀಯ ಸಹಾಯ ಪಡೆದಿದ್ದರು. ಜಲೀಲ್ ಮದುವೆಯಾಗುವುದಾಗಿ ನಂಬಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವರದಿಗಳು ಹೇಳಿವೆ.

ಮಹಿಳೆ ದೂರು ನೀಡಿದ ಬಳಿಕ ಜಲೀಲ್ ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದ. ತನ್ನಿಂದ ಹಣ ಪಡೆಯಲು ಮಹಿಳೆ ಸುಳ್ಳು ಆರೋಪ ಮಾಡಿದ್ದಾರೆ ಎಂದಿದ್ದ. ಬಳಿಕ ಮಹಿಳೆ ಮತ್ತು ತನ್ನ ನಡುವೆ ಒಪ್ಪಿತ ಲೈಂಗಿಕ ಸಂಪರ್ಕ ನಡೆದಿದ ಎಂದು ಎರಡು ಒಪ್ಪಂದ ಪಠ್ಯಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದ.

ಮಾರ್ಚ್ 2016ರಲ್ಲಿ ನಡೆದಿದ್ದ ಘಟನೆಯನ್ನು ಪರಸ್ಪರ ಸಮ್ಮತಿಯದ್ದು ಎಂದು ಹೇಳಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಒಪ್ಪಂದಗಳನ್ನು ಪರಿಶೀಲಿಸಿದ ಬಳಿಕ ಅವು ಅತ್ಯಾಚಾರದ ಗಂಭೀರ ಆರೋಪದ ವಿಚಾರಣೆಯನ್ನು ತಡೆಯುವ ಉದ್ದೇಶವನ್ನು ಹೊಂದಿರುವುದು ಸ್ಪಷ್ಟವಾಗಿದೆ. ಆದ್ದರಿಂದ ಈ ಒಪ್ಪಂದಗಳು ಕಾನೂನುಬಾಹಿರವಾಗಿವೆ ಮತ್ತು ಕಾನೂನು ಕ್ರಮವನ್ನು ರದ್ದುಗೊಳಿಸಲು ಏಕೈಕ ಆಧಾರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ: ತಂದೆ-ಮಗನ ವಿರುದ್ಧ 2,144 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ ಎಸ್‌ಐಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ್ಯ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...