Homeಚಳವಳಿಕೃಷಿ ಕಾನೂನುಗಳು: ಇಂದು ರೈತ ಹೋರಾಟದಲ್ಲಿ ಭಾಗಿಯಾಗಲಿರುವ ಅರವಿಂದ್ ಕೇಜ್ರಿವಾಲ್

ಕೃಷಿ ಕಾನೂನುಗಳು: ಇಂದು ರೈತ ಹೋರಾಟದಲ್ಲಿ ಭಾಗಿಯಾಗಲಿರುವ ಅರವಿಂದ್ ಕೇಜ್ರಿವಾಲ್

ಕೇಜ್ರಿವಾಲ್ ಮೊದಲ ಬಾರಿಗೆ ಭೇಟಿ ನೀಡಿದ್ದಾಗ, "ನಾನು ಇಲ್ಲಿಗೆ ಮುಖ್ಯಮಂತ್ರಿಯಾಗಿ ಬಂದಿಲ್ಲ. ಬದಲಿಗೆ ಸೇವಕನಾಗಿ ಬಂದಿದ್ದೇನೆ. ರೈತರು ಇಂದು ತೊಂದರೆಯಲ್ಲಿದ್ದಾರೆ, ನಾವು ಅವರೊಂದಿಗೆ ನಿಲ್ಲಬೇಕು" ಎಂದು ಹೇಳಿದ್ದರು.

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ-ಪಂಜಾಬ್‌ನ ಸಿಂಘು ಗಡಿಯಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದು, ಇಲ್ಲಿಗೆ ಇಂದು ಸಂಜೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಭೇಟಿ ನೀಡಲಿದ್ದಾರೆ. ಈ ತಿಂಗಳಲ್ಲಿ ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿ.

ತಮ್ಮ ಭೇಟಿಯ ಸಂದರ್ಭದಲ್ಲಿ, ದೆಹಲಿ ಸರ್ಕಾರದ ಪಂಜಾಬಿ ಅಕಾಡೆಮಿ ವತಿಯಿಂದ ಸಿಂಘುನಲ್ಲಿ ನಿರ್ಮಿಸಲಾಗಿರುವ ತೇಜ್ ಬಹದ್ದೂರ್ ಸ್ಮಾರಕದಲ್ಲಿ ಆಯೋಜಿಸಿರುವ ಎರಡು ದಿನಗಳ ‘ಶಹೀದಿ ದಿವಸ್’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಂಬತ್ತನೇ ಸಿಖ್ ಗುರುಗಳ ಹುತಾತ್ಮತೆ ಮತ್ತು ತ್ಯಾಗದ ಸಂಕೇತವಾಗಿ ಈ ಶಹೀದ್ ದಿವಸ್‌ ಅನ್ನು ಆಚರಿಸಲಾಗುತ್ತದೆ.

ಕೇಜ್ರಿವಾಲ್ ಈ ಹಿಂದೆಯೂ ಸ್ಮಾರಕಕ್ಕೆ ಭೇಟಿ ನೀಡಿದ್ದರು. ಅಲ್ಲಿ ತಮ್ಮ ಸರ್ಕಾರವು ಪ್ರತಿಭಟನಾ ನಿರತ ರೈತರಿಗೆ ಆಹಾರ ಮತ್ತು ನೈರ್ಮಲ್ಯದ ವ್ಯವಸ್ಥೆಗಳನ್ನು ಮಾಡಿತ್ತು.

ಇದನ್ನೂ ಓದಿ: ಮಾಧ್ಯಮಗಳ ಪ್ರಕಾರ ಹೇಳುವುದಾದರೆ ಅಲ್ಲಿ ಹೋರಾಡುತ್ತಿರುವವರು ರೈತರೇ ಅಲ್ಲ: ಪೇಜಾವರ ಮಠದ ಸ್ವಾಮೀಜಿ

ಕೇಜ್ರಿವಾಲ್ ಇಲ್ಲಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾಗ, “ನಾನು ಇಲ್ಲಿಗೆ ಮುಖ್ಯಮಂತ್ರಿಯಾಗಿ ಬಂದಿಲ್ಲ. ಬದಲಿಗೆ ಸೇವಕನಾಗಿ ಬಂದಿದ್ದೇನೆ. ರೈತರು ಇಂದು ತೊಂದರೆಯಲ್ಲಿದ್ದಾರೆ, ನಾವು ಅವರೊಂದಿಗೆ ನಿಲ್ಲಬೇಕು” ಎಂದು ಹೇಳಿದ್ದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಕರಾಳ ಕೃಷಿ ಕಾನೂನಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿರುವ ವಿರೋಧ ಪಕ್ಷಗಳ ನಾಯಕರ ಪೈಕಿ ಅರವಿಂದ್ ಕೇಜ್ರಿವಾಲ್ ಕೂಡ ಒಬ್ಬರು.

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಇತರೆ ಹಲವು ರಾಜ್ಯಗಳ ಲಕ್ಷಾಂತರ ರೈತರು ನವೆಂಬರ್ 26 ರಿಂದ ದೆಹಲಿಯ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಇಂದಿಗೆ ಒಂದು ತಿಂಗಳು ಕಳೆದಿದೆ.

ಇದನ್ನೂ ಓದಿ: ಪ್ರತಿಭಟನಾ ಸ್ಥಳದಲ್ಲಿಯೇ ಈರುಳ್ಳಿ ಬಿತ್ತನೆ: ಹೋರಾಟದಲ್ಲಿಯೂ ಕೃಷಿ ಬಿಡಲೊಪ್ಪದ ರೈತರು!

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.

ಇದನ್ನೂ ಓದಿ: ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಪ್ರತಿಭಟನಾ ನಿರತ ರೈತರು ಈಗ ಕೇಂದ್ರದೊಟ್ಟಿಗೆ ಮಾತುಕತೆಗೆ ಮುಂದಾಗಿದ್ದಾರೆ. ಜೊತೆಗೆ ಈ ಮಾತುಕತೆಯಲ್ಲಿ ರೈತರು ಚರ್ಚಿಸ ಬಯಸುವ ವಿಷಯಗಳನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸ್ವರಾಜ್ ಇಂಡಿಯಾ ಪಕ್ಷದ ಮುಖ್ಯಸ್ಥ ಯೋಗೇಂದ್ರ ಯಾದವ್, “ಡಿಸಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಕೇಂದ್ರದೊಟ್ಟಿಗೆ ಮತ್ತೊಂದು ಸುತ್ತಿನ ಮಾತುಕತೆಗೆ ಮುಂದಾಗಿದ್ದೇವೆ. ಈ ಮಾತುಕತೆಯಲ್ಲಿ ನಮ್ಮ ಎರಡು ಉದ್ದೇಶಗಳ ಬಗ್ಗೆ ಚರ್ಚಿಸಲಿದ್ದೇವೆ. ಒಂದು, ಈ ಕೃಷಿ ಕಾನೂನುಗಳನ್ನು ಹಿಂಪಡೆಯುವ ವಿಧಾನಗಳ ಕುರಿತು, ಮತ್ತೊಂದು, ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ)ಯನ್ನು ಜಾರಿಗೊಳಿಸುವ ಪ್ರಕ್ರಿಯೆಗಳ ಕುರಿತು ಚರ್ಚಿಸುತ್ತೇವೆ” ಎಂದು ಹೇಳಿದ್ದಾರೆ.

ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ 72ನೇ ಹಾಗೂ 2020ನೇ ಸಾಲಿನ ಕೊನೆಯ ಆವೃತ್ತಿಯ ರೇಡಿಯೊ ಕಾರ್ಯಕ್ರಮ ಮನ್ ಕೀ ಬಾತ್‌ನಲ್ಲಿ ಮಾತನಾಡಿದರು. ಪ್ರಧಾನಿಯ ಮನ್ ಕೀ ಬಾತ್ ಭಾಷಣದ ವೇಳೆ ತಟ್ಟೆಗಳನ್ನು ಬಾರಿಸಬೇಕು ಎಂದು ರೈತ ನಾಯಕರು ಇಡೀ ದೇಶದ ಜನತೆಗೆ ಕರೆ ನೀಡಿದ್ದರು.

ಈ ಕರೆಯ ಮೇರೆಗೆ ದೇಶದಾದ್ಯಂತ ಹಲವು ಕಡೆಗಳಲ್ಲಿ ರೈತರು ತಟ್ಟೆ ಬಡಿದು ತಮ್ಮ ವಿರೋಧ ವ್ಯಕ್ತಪಡಿಸಿದರು. ಜೊತೆಗೆ ದೆಹಲಿಯ ಗಡಿಯಲ್ಲಿಯೂ ಪ್ರತಿಭಟನಾ ನಿರತ ರೈತರು ತಟ್ಟೆ ಬಡಿದು ಆಕ್ರೋಶ ಹೊರಹಾಕಿದ್ದಾರೆ.


 

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸಲು ‘7–8 ಲಕ್ಷ ರೈತರನ್ನು’ ಸೇರಿಸಲಾಗಿದೆ – ಅಣ್ಣಾಮಲೈ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...