Homeಮುಖಪುಟರಾಜ್ಯದಲ್ಲಿಯೂ ಕೃಷಿ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ವಾಪಸ್ ಆಗಲಿ: ಪ್ರಕಾಶ್ ಕಮ್ಮರಡಿ

ರಾಜ್ಯದಲ್ಲಿಯೂ ಕೃಷಿ, ಎಪಿಎಂಸಿ ತಿದ್ದುಪಡಿ ಕಾಯ್ದೆಗಳು ವಾಪಸ್ ಆಗಲಿ: ಪ್ರಕಾಶ್ ಕಮ್ಮರಡಿ

- Advertisement -
- Advertisement -

ಒಂದು ವರ್ಷಗಳ ಕಾಲ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ಹೋರಾಡಿದ ರೈತರಿಗೆ ಕೊನೆಗೂ ಜಯ ಸಿಕ್ಕಿದೆ. ಒಕ್ಕೂಟ ಸರ್ಕಾರವು ರೈತರ ಹೋರಾಟಕ್ಕೆ ಮಣಿದಿದೆ. ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, “ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡಲಾಗುವುದು. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರು ಮನೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೃಷಿ ಬೆಲೆ ನಿಗಧಿ ಆಯೋಗದ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಮ್ಮರಡಿಯವರು,  “ರೈತರ ಒಂದು ವರ್ಷದ ಹೋರಾಟದ ಫಲವಾಗಿ ಕೊನೆಗೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಆದರೆ, ಅದೇ ಕೇಂದ್ರದ ಹಾದಿಯನ್ನೇ ಅನುಸರಿಸಿ‌ ತರಾತುರಿಯಲ್ಲಿ ರಾಜ್ಯದಲ್ಲೂ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ಹಿಂಪಡೆದಾಗ ಮಾತ್ರ ರಾಜ್ಯದ ರೈತರ ಹೋರಾಟಕ್ಕೆ ನಿಜವಾದ ಯಶಸ್ಸು ಸಿಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಕರ್ನಾಟಕದಲ್ಲಿ ಈಗಾಗಲೇ ತಿದ್ದುಪಡಿ ಮಾಡಿರುವ ಭೂ ಸುಧಾರಣೆ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗಳು ತರಾತುರಿಯಲ್ಲಿ ಅನುಷ್ಠಾನಗೊಂಡಿದೆ. ಶೇಕಡಾ 70 ರಿಂದ 80 ರಷ್ಟು ವಿವಿಧ ಬೆಳೆಗಳಲ್ಲಿ ಎಪಿಎಂಸಿ ಒಳಗಿನ ವ್ಯವಹಾರ ಈಗಾಗಲೇ ಕಡಿಮೆಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಹಾಗೆಯೇ ಶೇಕಡಾ 60 ಭೂಮಿಯ ವ್ಯವಹಾರ ಈ ಸಾರಿ ಅಧಿಕಗೊಂಡಿದೇ. ಕರ್ನಾಟಕದಲ್ಲಿ ಈ ಕಾಯ್ದೆಗಳು ವಾಪಾಸು ಬಂದಾಗ ಮಾತ್ರ ನಾವೆಲ್ಲ ಯಶಸ್ಸು ಅಂತ ಭಾವಿಸಬಹುದು ಎಂದು ಕೃಷಿ ತಜ್ಞ ಪ್ರಕಾಶ್ ಕಮ್ಮರಡಿ ತಿಳಿಸಿದ್ದಾರೆ.

ಅಷ್ಟರೊಳಗೆ ಬಿಜೆಪಿ ರೈತಪರ ಅಂತ ತನ್ನ ಮುಖವಾಡ ಬದಲಾಯಿಸಿ ಚುನಾವಣಾ ರಾಜಕೀಯದ ಲಾಭ ಪಡೆಯಲು ಎಲ್ಲ ಪ್ರಯತ್ನ ಮಾಡಲಿದೆ, ಅನುಮಾನವೇ ಇಲ್ಲ. ಹಾಗೆ ಶೀಘ್ರ ತೋರುಗಾಣಿಕೆಗೆ ಬೆಂಬಲ ಬೆಲೆಗೆ ಕಾನೂನನ್ನು ತರಬಹುದು, ಜೊತೆಗೆ ಪ್ರಭಾವಿ ಕೆಲ ಮುಖಂಡರುಗಳನ್ನು ಸೆಳೆದುಕೊಳ್ಳುವುದುಬಹುದು. ಎಲ್ಲವುದರಲ್ಲೂ ರೈತ ಸಂಘಟನೆಗಳು ಎಚ್ಚರವಹಿಸಬೇಕು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

“ಒಂದು ವರ್ಷದ ಬಳಿಕ ಗೆದ್ದಿದ್ದೇವೆ. ಮೂರು ವಿವಾದಿತ ಕಾಯ್ದೆಗಳನ್ನು ವಾಪಸ್‌ ಪಡೆಯಲು ಮೋದಿ ಸರ್ಕಾರ ನಿರ್ಧರಿಸಿದೆ. ಇದು ರೈತರಿಗೆ ಸಂದ ಗೆಲುವು” ಎಂದು ಕಿಸಾನ್‌ ಏಕ್ತಾ ಮೋರ್ಚಾ ಟ್ವೀಟ್‌ ಮಾಡಿದೆ.


ಇದನ್ನೂ ಓದಿ; ವಿವಾದಿತ ಕೃಷಿ ಕಾಯ್ದೆಗಳು ರದ್ದು: ಕ್ಷಮೆಯಾಚಿಸಿದ ಮೋದಿ, ರೈತರ ಹೋರಾಟಕ್ಕೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೊಸ ಕೃಷಿ ಕಾಯ್ದೆ ಯಿಂದ ಪಾಪ ಈ ಮುಟ್ಟಾಳರಿಗೆ ಬರ್ತಿದ್ದ ಕಮಿಷನ್ ನಿಂತುಹೋಗಿರಬೇಕು ಅನಿಸುತ್ತೆ ,ಮೊದಲು ಇವನಿಗೆ ಬರುತ್ತಿರುವ ಆದಾಯ ಮೂಲಗಳ ಬಗ್ಗೆ ತನಿಖೆ ಮಾಡಬೇಕು ,ಆಗ ತಿಳಿಯುತ್ತದೆ ಇವನು ಇವನ ಪರಿವಾರ ತಮ್ಮ ಬೇಳೆ ಬೇಯಿಸಿಕೊಳ್ಳೋಕೆ ವಿದೇಶಗಳಿಂದ ಹಣ ಪಡೆಯುವ ದಂದೆಗಳ ಬಗ್ಗೆ ….ಇವರಿಗೆ ರೈತ ನೆಮ್ಮದಿ ಬೇಕಿಲ್ಲಾ ,ದೇಶ ಅಭಿವೃದ್ಧಿಯ ಬಗ್ಗೆ ಬೇಕಿಲ್ಲಾ ,ಚೈನಿಗಳ ಭಟ್ ನೆಕ್ಕಿ ಕಮೀಷನ್ ಪಡೆದು ಜನರ ದಾರಿ ತಪ್ಪಿಸಿ ದೇಶನ ಅತಂತ್ರ ಮಾಡೋದು ಇವರ ಗುರಿ ,ಅವರಿಂದ ಪ್ರೋತ್ಸಾಹ ನೀಡಲು ನಿಮ್ಮಂತ ಕೆಲ ಪತ್ರಿಕೆಗಳು ,ನಾಚಿಕೆ ಆಗಬೇಕು

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...