ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ, ಕೃಷಿಗೆ ಸಂಬಂಧಿಸಿದ ಮಸೂದೆಗಳನ್ನು ರಾಜ್ಯಸಭೆಯಲ್ಲಿ ಇಂದು ಅಂಗೀಕರಿಸಲಾಗಿದೆ. ಈ ವಾರ ಲೋಕಸಭೆಯಲ್ಲಿ ಅಂಗೀಕಾರ ಪಡೆದು ರಾಜ್ಯಸಭೆಯಲ್ಲಿ ಅನುಮೋದನೆಗಾಗಿ ಇಂದು ಕಳುಹಿಸಿತ್ತು.
ವಿರೋಧ ಪಕ್ಷಗಳ ಖಂಡನೆಯ ನಡುವೆಯೂ ಧ್ವನಿ ಮತದ ಮೂಲಕ ಮಸೂದೆಗಳನ್ನು ಅಂಗೀಕರಿಸಲಾಯಿತು. ಇದನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮ ಟ್ವಿಟ್ಟರ್‌ನಲ್ಲಿ #KisanVirodhiNarendraModi (ರೈತ ವಿರೋಧಿ ನರೇಂದ್ರ ಮೋದಿ) ಎಂದು ಟ್ವೀಟಾಂದೋಲನ ಆಗುತ್ತಿದೆ.
ಇದನ್ನೂ ಓದಿ: ಭೂಮಿ ಸ್ವಾಭಿಮಾನದ ಸಂಕೇತ, ಅದು ಆರ್ಥಿಕ ಭದ್ರತೆ ನೀಡಲಿದೆ – ಕುಮಾರ್ ಸಮತಳ ಸಂದರ್ಶನ
ಟ್ವಿಟ್ಟರ್‌ನಲ್ಲಿ ಈ ಹ್ಯಾಶ್‌ಟ್ಯಾಗ್ ಬಳಸಿ, ಈ ವರದಿ ಬರೆಯುವ ವೇಳೆಗೆ, ಸುಮಾರು 2.14 ಲಕ್ಷ ಟ್ವೀಟ್‌ಗಳನ್ನು ಮಾಡಿ, ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತವಿರೋಧಿ ಕಾಯ್ದೆಗಳನ್ನು ವಿರೋಧಿಸಿದ್ದಾರೆ.

ವಿರೋಧ ಪಕ್ಷಗಳು ಸೇರಿದಂತೆ, ಅನೇಕರು ಟ್ವೀಟ್ ಮಾಡಿ, ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರವು ರೈತವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವುದರ ಮೂಲಕ ತಮ್ಮ ಬಂಡವಾಳಶಾಹಿ ಧೋರಣೆಯನ್ನು ವ್ಯಕ್ತಪಡಿಸಿದೆ ಎಂದು ಕಿಡಿಕಾರಿದ್ದಾರೆ.
“ರಾಕೇಶ್ ಯಾದವ್ ಟ್ವೀಟ್ ಮಾಡಿ, “ಮೋದಿ ಸರ್ಕಾರ ಯಾರ ಪರವಾಗಿದೆ? ನಿರುದ್ಯೋಗಿ ಯುವಕರು, ರೈತರು, ಐಐಟಿ/ಮೆಡಿಕಲ್ ವಿದ್ಯಾರ್ಥಿಗಳು, ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳು, ಸಣ್ಣ ಅಂಗಡಿ ಮಾಲೀಕರು, ಎಲ್ಲರೂ ಅವರ ಮೇಲಿನ ಕೋಪವನ್ನು ಹೊರಹಾಕುತ್ತಿದ್ದಾರೆ. #KisanVirodhiNarendraModi (ರೈತ ವಿರೋಧಿ ನರೇಂದ್ರ ಮೋದಿ, #StudentsLivesMatter (ವಿದ್ಯಾರ್ಥಿಗಳ ಬದುಕಿನ ವಿಷಯ), #speakup (ಮಾತನಾಡಿ)” ಎಂದು ಟ್ವೀಟ್ ಮಾಡಿದ್ದಾರೆ.
Modi Govt is for whom ?
Everyone is angry with them :
• Unemployed Youths
• Farmers
• IIT/Medical Students
•MSME
•Small shop Owners#KisanVirodhiNarendraModi#StudentsLivesMatter#speakup pic.twitter.com/WVHtvzkprR
— Rakesh Yadav (@Careerwill1) September 20, 2020
ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ
ಸಂಸತ್ತಿನಲ್ಲಿ ಅಂಗೀಕಾರವಾಗಿರುವ ಮೂರು ಕೃಷಿ ಸುಗ್ರೀವಾಜ್ಞೆಗಳ ವಿರುದ್ಧ ಪಂಜಾಬ್, ಹರಿಯಾಣ, ತೆಲಂಗಾಣ ಸೇರಿ ದೇಶದ ಹಲವೆಡೆ ಕಳೆದೊಂದು ವಾರದಿಂದ ಪ್ರತಿಭಟನೆ ನಡೆಯುತ್ತಿದೆ. ನಿನ್ನೆ ಪಂಜಾಬ್‌ನಲ್ಲಿ ರೈತರೊಬ್ಬರು ವಿಷ ಸೇವಿಸಿ ಮೃತಪಟ್ಟಿದ್ದಾರೆ.
ಹೊಸ ಮಸೂದೆಗಳು ರೈತರನ್ನು, ಕೃಷಿ ಕ್ಷೇತ್ರವನ್ನು ಕಾರ್ಪೊರೇಟ್ ಶಕ್ತಿಗಳ ಸೆರೆಯಾಗುವಂತೆ ಮಾಡುತ್ತಿವೆ ಎಂದು ಆರೋಪಿಸುತ್ತಿದ್ದಾರೆ. ಪಂಜಾಬ್‌ನಲ್ಲಿ ಕಿಸಾನ್ ಮಜ್ದೂರ್ ಸಂಘರ್ಷ್ ಸಂಘಟನೆ ಸೆಪ್ಟೆಂಬರ್ 24 ರಿಂದ ಸೆಪ್ಟೆಂಬರ್ 26 ರವರೆಗೆ ರಾಜ್ಯಾದ್ಯಂತ ‘ರೈಲ್ ರೋಕೊ’ ಆಂದೋಲನಕ್ಕೆ ಕರೆ ನೀಡಿದೆ. ಇತರ ರೈತ ಸಂಘಟನೆಗಳು ಸೆಪ್ಟೆಂಬರ್ 25ಕ್ಕೆ ಪಂಜಾಬ್ ಬಂದ್‌ಗೆ ಕರೆ ನೀಡಿವೆ.
ಇದನ್ನೂ ಓದಿ: ‘ಭೂಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಟೆಕ್ಕಿಗಳಿಗೆ ಲಾಭ: ಸಚಿವ ಮಾಧುಸ್ವಾಮಿ
ಸೆಪ್ಟಂಬರ್ 21ರಿಂದ ಕರ್ನಾಟಕ ರಾಜ್ಯ ಸರ್ಕಾರವು ವಿಧಾನಸೌಧದಲ್ಲಿ ಅಧಿವೇಶನ ನಡೆಸಲು ಮುಂದಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕದಲ್ಲಿರುವ ದಲಿತ, ಕಾರ್ಮಿಕ, ರೈತ ಸಂಘಟನೆಗಳೆಲ್ಲಾ ಒಟ್ಟಾಗಿ ಐಕ್ಯ ಹೋರಾಟ ನಡೆಸಬೇಕೆಂದು ಕರೆ ನೀಡಿವೆ. ಅಧಿವೇಶನ ನಡೆಯುವ ಪ್ರತಿದಿನವೂ ತಮ್ಮ ಪ್ರತಿಭಟನೆಯನ್ನು ಕೈಗೊಂಡು, ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಿವೆ. ತುರ್ತಾಗಿ ಹಿಂಪಡೆಯಲೇಬೇಕಾದ ಮತ್ತು ಸುಗ್ರೀವಾಜ್ಞೆ ತಂದು ಜಾರಿಗೊಳಿಸಲು ಹೊರಟಿರುವ ಕೆಲವು ಕಾಯ್ದೆಗಳನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗುತ್ತಿದೆ.
ಇಷ್ಟೆಲ್ಲಾ ನಡೆಯುತ್ತಿದ್ದರೂ, ‘ಇದು ರೈತರ ಅನುಕೂಲಕ್ಕಾಗಿ’ ಎಂದುಕೊಂಡು ಕೇಂದ್ರ ಸರ್ಕಾರ ಈ ಕಾನೂನುಗಳನ್ನು ಜಾರಿಗೆ ತಂದು, ಮಧ್ಯವರ್ತಿಗಳಿಂದ ರೈತರನ್ನು ರಕ್ಷಿಸುತ್ತದೆ ಎನ್ನುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಮಸೂದೆಗಳ ಅಂಗೀಕಾರಕ್ಕೆ ಸಂತಸ ವ್ಯಕ್ತಪಡಿಸಿದ್ದು, ಮಸೂದೆ ವಿರೋಧಿಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ವಿಪಕ್ಷಗಳ ಮೇಲೆ ಕಿಡಿ ಕಾರಿದ್ದಾರೆ.
ಇದನ್ನೂ ಓದಿ: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ : ದೇಶವ್ಯಾಪಿ ಅಸಹಕಾರ ಚಳವಳಿಯ ಅಗತ್ಯವಿದೆ


