Homeಮುಖಪುಟಕೃಷಿ ಕಾಯ್ದೆಗಳು 1 ವರ್ಷ ಜಾರಿಯಲ್ಲಿರಲಿ, ನಂತರ ತಿದ್ದುಪಡಿ ಮಾಡಲು ಸಿದ್ಧ: ರಾಜನಾಥ್ ಸಿಂಗ್

ಕೃಷಿ ಕಾಯ್ದೆಗಳು 1 ವರ್ಷ ಜಾರಿಯಲ್ಲಿರಲಿ, ನಂತರ ತಿದ್ದುಪಡಿ ಮಾಡಲು ಸಿದ್ಧ: ರಾಜನಾಥ್ ಸಿಂಗ್

"ರೈತರ ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ಕಾರ್ಯವನ್ನು ಮೋದಿ ಸರಕಾರ ಮಾಡುವುದಿಲ್ಲ. ಧರಣಿ ನಡೆಸುತ್ತಿರುವ ರೈತರು ಹಾಗೂ ರೈತರ ಕುಟುಂಬಗಳಲ್ಲಿ ಹುಟ್ಟಿದವರ ಮೇಲೆ ನಮಗೆ ಅಪಾರವಾದ ಗೌರವವಿದೆ"

- Advertisement -
- Advertisement -

“ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಒಂದು ವರ್ಷದ ತನಕ ಜಾರಿಯಲ್ಲಿರಲಿ. ನಂತರ ಇದು ರೈತರಿಗೆ ಪ್ರಯೋಜನಕಾರಿಯಲ್ಲವೆಂದು ಕಂಡು ಬಂದರೆ ಅವುಗಳನ್ನು ತಿದ್ದುಪಡಿ ಮಾಡಲು ಸರ್ಕಾರ ಸಿದ್ಧ” ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಸಚಿವರು, “ನಾನು ಕೂಡ ಒಬ್ಬ ರೈತನ ಮಗ. ರೈತರ ಹಿತಾಸಕ್ತಿಗೆ ವಿರುದ್ಧವಾದ ಯಾವುದೇ ಕಾರ್ಯವನ್ನು ಮೋದಿ ಸರಕಾರ ಮಾಡುವುದಿಲ್ಲ. ಧರಣಿ ನಡೆಸುತ್ತಿರುವ ರೈತರು ಹಾಗೂ ರೈತರ ಕುಟುಂಬಗಳಲ್ಲಿ ಹುಟ್ಟಿದವರ ಮೇಲೆ ನಮಗೆ ಅಪಾರವಾದ ಗೌರವವಿದೆ” ಎಂದು ಮನವೊಲಿಸಲು ಪ್ರಯತ್ನಿಸಿದರು.

“ಸಮಸ್ಯೆಯು ಮಾತುಕತೆಗಳ ಮೂಲಕ ಬಗೆಹರಿಯುವುದಕ್ಕೆ ಸಾಧ್ಯವಿದೆ. ಮಾತುಕತೆಗಳು ಮುಂದುವರಿಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಯಸಿದ್ದಾರೆ. ಈ ಹಿನ್ನೆಲೆಯಲ್ಲಿ ರೈತರಿಗೆ ಆಹ್ವಾನ ನೀಡಲಾಗಿದೆ. ಕನಿಷ್ಟ ಬೆಂಬಲ ಬೆಲೆ ಅಂತ್ಯವಾಗಲಿದೆ ಎಂಬ ತಪ್ಪು ಅಭಿಪ್ರಾಯವಿದೆ. ಕನಿಷ್ಟ ಬೆಂಬಲ ಬೆಲೆ ಅಂತ್ಯವಾಗುವುದಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ನಾನು ಕೂಡ ಈ ನಿಟ್ಟಿನಲ್ಲಿ ಭರವಸೆ ನೀಡುತ್ತೇನೆ” ಎಂದು ಹೇಳಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

“ಈ ಕಾನೂನುಗಳು ಪ್ರಯೋಗಾತ್ಮಕವಾಗಿ ಒಂದು ವರ್ಷ ಜಾರಿಯಲ್ಲಿರಲಿ. ನಂತರ ಬೇಡವಾದರೆ ಬೇಕಾದ ತಿದ್ದುಪಡಿ ಮಾಡಲು ಸರ್ಕಾರ ಸಿದ್ಧವಿದೆ” ಎಂದು ಸಚಿವರು ಹೇಳಿದ್ದಾರೆ ಎಂಬುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇದರ ನಡುವೆಯೂ, ಈ ಕಾನೂನುಗಳನ್ನು ಹಿಂಪಡೆಯುವಂತೆ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ದಿನೇ ದಿನೇ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪಂಜಾಬ್, ಹರಿಯಾಣ ಮತ್ತು ಇತರೆ ಹಲವು ರಾಜ್ಯಗಳ ಸಾವಿರಾರು ರೈತರು ನವೆಂಬರ್ 26 ರಿಂದ ದೆಹಲಿಯ ವಿವಿಧ ಭಾಗಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪಾರ್ಟಿ ಮುಗಿಸಿ ಮನೆಗೆ ಹೋಗುತ್ತಿದ್ದ ಯುವಕ ಮತಾಂತರ ನಿಷೇಧ ಕಾಯ್ದೆಯಡಿ ಜೈಲಿಗೆ!

ಕೃಷಿ ಕಾನೂನುಗಳಿಗೆ ಸಂಬಂಧಿಸಿದಂತೆ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಅವುಗಳೆಲ್ಲಾ ವಿಫಲವಾಗಿವೆ. ಇತ್ತೀಚೆಗೆ ಈ ವಿಷಯವನ್ನು ಕೈಗೆತ್ತಿಕೊಂಡು ಸುಪ್ರೀಂಕೋರ್ಟ್, ಈ ಕುರಿತು ಶೋಧನೆ ಮಾಡಲು ಒಂದು ಸ್ವತಂತ್ರ ಸಮಿತಿಯನ್ನು ರಚಿಸುವಂತೆ ಕೇಂದ್ರಕ್ಕೆ ಸಲಹೆ ನೀಡಿತ್ತು.

ಜೊತೆಗೆ ರೈತರು ತಮ್ಮ ಹೋರಾಟವನ್ನು ಹಿಂತೆಗೆದುಕೊಳ್ಳಬೇಕಾಗಿಲ್ಲ. ಹೋರಾಟ ಮಾಡುವುದು ಅವರ ಹಕ್ಕು ಎಂದು ಸುಪ್ರೀಂ ಹೇಳಿತ್ತು. ಆದರೆ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ, ಶಾಂತಿಯುತವಾಗಿ ಪ್ರತಿಭಟಿಸುವಂತೆ ಹೇಳಿತ್ತು.


ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಮೋದಿಗೆ ಮುತ್ತಿಗೆ ಹಾಕಿದ ಸಂಸದರು: ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...