Homeಮುಖಪುಟರೈತರನ್ನು ಹೇಡಿಗಳು ಎಂದ ಬಿ.ಸಿ.ಪಾಟೀಲ್: ಎಚ್.ಡಿ. ಕುಮಾರಸ್ವಾಮಿ ತಿರುಗೇಟು

ರೈತರನ್ನು ಹೇಡಿಗಳು ಎಂದ ಬಿ.ಸಿ.ಪಾಟೀಲ್: ಎಚ್.ಡಿ. ಕುಮಾರಸ್ವಾಮಿ ತಿರುಗೇಟು

’ರೈತ ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ಕೃಷಿ ಸಚಿವ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ.

- Advertisement -
- Advertisement -

ದೇಶದ ರೈತರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ಕಳೆದ ಎಂಟು ದಿನಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಮಯದಲ್ಲಿ ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್ ’ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಸಮೀಪದ  ಕೃಷಿ ಕಾಲೇಜಿನಲ್ಲಿ ಬಿದಿರು ಸಂಪನ್ಮೂಲ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್, ಸಾಲ ಮತ್ತಿತರ ಕಾರಣಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದಿದ್ದಾರೆ.

ಕೃಷಿ ಕೆಲಸ ಮಾಡಿ ಉತ್ತಮ‌ ಬದುಕು ಕಟ್ಟಿಕೊಂಡು, ಒಳ್ಳೆಯ ಜೀವನ ನಡೆಸುತ್ತಿರುವ ರೈತರಿದ್ದಾರೆ. ತನ್ನ ಹೆಂಡತಿ, ಮಕ್ಕಳನ್ನ ನೋಡಿಕೊಳ್ಳಲಾಗದೇ, ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿ. ಹೇಡಿಗಳು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು

ಬದುಕಿನಲ್ಲಿ ಈಸಬೇಕು, ಈಸಿ ಜಯಿಸಬೇಕು. ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಅನ್ನೋದಕ್ಕೆ ಸ್ವಾವಲಂಬಿ ರೈತರು ಮಾದರಿ ಎಂದು ಬಿ.ಸಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.

ರೈತರನ್ನು ಹೇಡಿಗಳು ಎಂದ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ, ಬಹಿರಂಗವಾಗಿ ರೈತ ಸಮುದಾಯದ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.

ತಮ್ಮ ಟ್ವಿಟರ್‌ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ’ಕೃಷಿ ಸಚಿವರೇ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ. ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸುತ್ತೇನೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು

’ರೈತ, ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ನೆಲವನ್ನೇ ನಂಬಿ ಬದುಕುವ ಕಡು ಕಷ್ಟ ಜೀವಿ. ಇಂತಹ ರೈತ ಸಮುದಾಯಕ್ಕೆ ಕೇಂದ್ರ-ರಾಜ್ಯ ಸರ್ಕಾರಗಳು ರಟ್ಟೆಗೆ ಬಲ ತುಂಬುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕೇ ಹೊರತು, ಹೇಡಿ ಎಂಬ ಪಟ್ಟ ಕಟ್ಟಿ ಹೊಣೆಗೇಡಿತನ ಪ್ರದರ್ಶಿಸಬಾರದು’ ಎಂದು ಸರ್ಕಾರ ಮತ್ತು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

’ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ’ ಎಂದು ಬಿ.ಸಿ.ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಕನಿಷ್ಟ ಬೆಂಬಲ ಬೆಲೆ ನೀಡಲು, ಸರಿಯಾದ ಮಾರುಕಟ್ಟೆ ಒದಗಿಸಲು, ಬೀಜ-ರಸಗೊಬ್ಬರ ಒದಗಿಸಲು ಪ್ರಯತ್ನಿಸದೇ, ರೈತರನ್ನೇ ಹೇಡಿಗಳು ಎನ್ನುವ ಸರ್ಕಾರದ ವಿರುದ್ಧ ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: ’ಶಾಹೀನ್ ಬಾಗ್‌ ದಾದಿ’ಯ ಕುರಿತು ಆಕ್ಷೇಪಾರ್ಹ ಹೇಳಿಕೆ- ನಟಿ ಕಂಗನಾಗೆ ಕಾನೂನು ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...