ದೇಶದ ರೈತರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ರಾಜಧಾನಿ ದೆಹಲಿಯಲ್ಲಿ ಕಳೆದ ಎಂಟು ದಿನಗಳಿಂದ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಸಮಯದಲ್ಲಿ ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್ ’ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆಯ ಸಮೀಪದ ಕೃಷಿ ಕಾಲೇಜಿನಲ್ಲಿ ಬಿದಿರು ಸಂಪನ್ಮೂಲ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ್, ಸಾಲ ಮತ್ತಿತರ ಕಾರಣಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದಿದ್ದಾರೆ.
ಇಂದು ಕೊಡಗು ಜಿಲ್ಲೆ ಪೊನ್ನಂಪೇಟೆಯ ಅರಣ್ಯ ಮಹಾವಿದ್ಯಾಲಯದಲ್ಲಿ, ಬಿದಿರು ಸಂಪನ್ಮೂಲ ಕೇಂದ್ರ ಮತ್ತು ಬಿದಿರು ನರ್ಸರಿ ಉದ್ಘಾಟನೆ ಹಾಗೂ ಬಾಲಕ ಬಾಲಕಿಯರ ವಸತಿ ನಿಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.#Ponnampet | #Kodagu @DDChandanaNews | @BSYBJP | @KarnatakaVarthe | @AnandSinghBS | @AgriGoI pic.twitter.com/X6Llmc6uy9
— Kourava B.C.Patil (@bcpatilkourava) December 3, 2020
ಕೃಷಿ ಕೆಲಸ ಮಾಡಿ ಉತ್ತಮ ಬದುಕು ಕಟ್ಟಿಕೊಂಡು, ಒಳ್ಳೆಯ ಜೀವನ ನಡೆಸುತ್ತಿರುವ ರೈತರಿದ್ದಾರೆ. ತನ್ನ ಹೆಂಡತಿ, ಮಕ್ಕಳನ್ನ ನೋಡಿಕೊಳ್ಳಲಾಗದೇ, ಆತ್ಮಹತ್ಯೆ ಮಾಡಿಕೊಳ್ಳುವವರು ಹೇಡಿ. ಹೇಡಿಗಳು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ.
ಇದನ್ನೂ ಓದಿ: ಅನ್ನದ ಋಣ ತೀರಿಸಲು ಸುವರ್ಣಾವಕಾಶ- ರೈತ ಹೋರಾಟವನ್ನು ಹೀಗೂ ಬೆಂಬಲಿಸಬಹುದು
ಬದುಕಿನಲ್ಲಿ ಈಸಬೇಕು, ಈಸಿ ಜಯಿಸಬೇಕು. ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದು ಅನ್ನೋದಕ್ಕೆ ಸ್ವಾವಲಂಬಿ ರೈತರು ಮಾದರಿ ಎಂದು ಬಿ.ಸಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.
ರೈತರನ್ನು ಹೇಡಿಗಳು ಎಂದ ಸಚಿವ ಬಿ.ಸಿ.ಪಾಟೀಲ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿ, ಬಹಿರಂಗವಾಗಿ ರೈತ ಸಮುದಾಯದ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿರುವ ಕುಮಾರಸ್ವಾಮಿ, ’ಕೃಷಿ ಸಚಿವರೇ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ. ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸುತ್ತೇನೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೃಷಿ ಸಚಿವರೇ ರೈತ ಸಮುದಾಯದ ವಿರುದ್ಧ ಎಲುಬಿಲ್ಲದ ನಾಲಿಗೆ ಹರಿ ಬಿಟ್ಟಿರುವುದು ಖಂಡನೀಯ. ರೈತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸುವಂತೆ ಆಗ್ರಹಿಸುತ್ತೇನೆ.
4/4— H D Kumaraswamy (@hd_kumaraswamy) December 3, 2020
ಇದನ್ನೂ ಓದಿ: ಕೇಂದ್ರದೊಂದಿಗೆ ರೈತ ಮುಖಂಡರ ಸಭೆ: ಸಂಸತ್ ಅಧಿವೇಶನ ಕರೆದು ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ರೈತರ ತಾಕೀತು
’ರೈತ, ರಾಜಕಾರಣಿಗಳಂತೆ ಅಧಿಕಾರಕ್ಕಾಗಿ ಬಣ್ಣ ಬದಲಿಸುವ ಗೋಸುಂಬೆ ವ್ಯಕ್ತಿತ್ವದವನಲ್ಲ. ನೆಲವನ್ನೇ ನಂಬಿ ಬದುಕುವ ಕಡು ಕಷ್ಟ ಜೀವಿ. ಇಂತಹ ರೈತ ಸಮುದಾಯಕ್ಕೆ ಕೇಂದ್ರ-ರಾಜ್ಯ ಸರ್ಕಾರಗಳು ರಟ್ಟೆಗೆ ಬಲ ತುಂಬುವ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಬೇಕೇ ಹೊರತು, ಹೇಡಿ ಎಂಬ ಪಟ್ಟ ಕಟ್ಟಿ ಹೊಣೆಗೇಡಿತನ ಪ್ರದರ್ಶಿಸಬಾರದು’ ಎಂದು ಸರ್ಕಾರ ಮತ್ತು ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ.
1/4— H D Kumaraswamy (@hd_kumaraswamy) December 3, 2020
’ರೈತ ಹುಟ್ಟು ಸ್ವಾಭಿಮಾನಿ ಹಾಗೂ ಮರ್ಯಾದಸ್ತ. ಸಾಲ ಕೊಟ್ಟವರು ಬಂದು ಕಿಬ್ಬದಿಯ ಕೀಲು ಮುರಿದಂತೆ ಪೀಡಿಸುವಾಗ ಮರ್ಯಾದೆಗೆ ಅಂಜಿ ದಿಕ್ಕು ತೋಚದಂತಾಗಿ ಆತ್ಮಹತ್ಯೆಗೆ ಶರಣಾಗುತ್ತಾನೆ. ಕೃಷಿ ಸಚಿವರು ಹೇಳಿದಂತೆ ರೈತ ಹೇಡಿಯಲ್ಲ’ ಎಂದು ಬಿ.ಸಿ.ಪಾಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರಿಗೆ ಕನಿಷ್ಟ ಬೆಂಬಲ ಬೆಲೆ ನೀಡಲು, ಸರಿಯಾದ ಮಾರುಕಟ್ಟೆ ಒದಗಿಸಲು, ಬೀಜ-ರಸಗೊಬ್ಬರ ಒದಗಿಸಲು ಪ್ರಯತ್ನಿಸದೇ, ರೈತರನ್ನೇ ಹೇಡಿಗಳು ಎನ್ನುವ ಸರ್ಕಾರದ ವಿರುದ್ಧ ರೈತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.