Homeಮುಖಪುಟಕೃಷಿ ಕಾಯ್ದೆಗಳನ್ನು ವಾಪಸ್‌ ತರುವುದಾಗಿ ಹೇಳಿಲ್ಲ: ಕೃಷಿ ಸಚಿವ ತೋಮರ್‌ ಯೂಟರ್ನ್

ಕೃಷಿ ಕಾಯ್ದೆಗಳನ್ನು ವಾಪಸ್‌ ತರುವುದಾಗಿ ಹೇಳಿಲ್ಲ: ಕೃಷಿ ಸಚಿವ ತೋಮರ್‌ ಯೂಟರ್ನ್

- Advertisement -
- Advertisement -

ಕೇಂದ್ರ ಕೃಷಿ ಕಾನೂನುಗಳನ್ನು ತಿದ್ದುಪಡಿ ರೂಪದಲ್ಲಿ ಮರು ಪರಿಚಯಿಸುವುದಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸ್ಪಷ್ಟಪಡಿಸಿದ್ದಾರೆ.

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ತಿದ್ದುಪಡಿಗಳೊಂದಿಗೆ ಕೇಂದ್ರವು ಮೂರು ಕೃಷಿ ಕಾನೂನುಗಳನ್ನು (ಈಗ ರದ್ದುಗೊಳಿಸಲಾಗಿದೆ) ಮರಳಿ ತರಲು ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದ ನಂತರ, ಸಂಯುಕ್ತ ಕಿಸಾನ್‌ ಮೋರ್ಚಾ ಎಚ್ಚರಿಕೆಯನ್ನು ನೀಡಿದ ಬೆನ್ನಲ್ಲೇ ಕೇಂದ್ರ ಕೃಷಿ ಸಚಿವರು ಸ್ಪಷ್ಟನೆ ನೀಡಿದ್ದಾರೆ.

ವಿವಾದಿತ ಕೃಷಿ ಕಾನೂನುಗಳ ಕುರಿತು ನಾಗ್ಪುರದ ಕಾರ್ಯಕ್ರಮವೊಂದರಲ್ಲಿ ಶುಕ್ರವಾರ ಮಾತನಾಡಿದ್ದ ಸಚಿವ ತೋಮರ್‌, “ಕೃಷಿ ಕಾಯ್ದೆಗಳನ್ನು ವಾಪಸ್‌ ತರಬಹುದು” ಎಂದು ಹೇಳಿರುವ ಕುರಿತು ಕೇಳಿದಾಗ, “ನಾನು ಹೀಗೆ ಹೇಳಲಿಲ್ಲ” ಎಂದು ಪ್ರತಿಕ್ರಿಯೆ ನೀಡಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

“ಸರ್ಕಾರವು ಉತ್ತಮ (ಕೃಷಿ) ಕಾನೂನುಗಳನ್ನು ಮಾಡಿದೆ ಎಂದು ನಾನು ಹೇಳಿದ್ದೇನೆ. ಕೆಲವು ಕಾರಣಗಳಿಂದ ನಾವು ಅವುಗಳನ್ನು ಹಿಂದಕ್ಕೆ ತೆಗೆದುಕೊಂಡಿದ್ದೇವೆ. ಸರ್ಕಾರವು ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.

“ನಾವು ಕೃಷಿ ಕಾನೂನುಗಳನ್ನು ತಂದಿದ್ದೇವೆ. ಕೆಲವರು ಅದನ್ನು ಇಷ್ಟಪಡಲಿಲ್ಲ. ಆದರೆ ಸ್ವಾತಂತ್ರ್ಯ ಬಂದ 70 ವರ್ಷಗಳ ನಂತರ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಜಾರಿಗೊಳಿಸಿದ ಅತಿದೊಡ್ಡ ಸುಧಾರಣೆಗಳು ಈ ಕಾಯ್ದೆಗಳಾಗಿದ್ದವು. ಸರ್ಕಾರ ನಿರಾಶೆಗೊಂಡಿಲ್ಲ, ನಾವು ಒಂದು ಹೆಜ್ಜೆ ಹಿಂದೆ ಸರಿದಿದ್ದೇವೆ ಮತ್ತು ನಾವು ಮತ್ತೆ ಮುಂದುವರಿಯುತ್ತೇವೆ. ಏಕೆಂದರೆ ರೈತರು ಭಾರತದ ಬೆನ್ನೆಲುಬು. ಬೆನ್ನುಮೂಳೆಯನ್ನು ಬಲಪಡಿಸಿದರೆ ದೇಶವು ಬಲಗೊಳ್ಳುತ್ತದೆ” ಎಂದು ನಾಗ್ಪುರದಲ್ಲಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಯನ್ನು ಉಲ್ಲೇಖಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರು, “ತೋಮರ್ ಅವರ ಹೇಳಿಕೆಯು ಮೂರು ರೈತ ವಿರೋಧಿ ಕಾನೂನುಗಳನ್ನು ಮತ್ತೆ ಜಾರಿಗೊಳಿಸುವ ಕೇಂದ್ರದ ಷಡ್ಯಂತ್ರವನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಬಳಿಕ ಕೇಂದ್ರ ಸರ್ಕಾರವು ಮೂರು ಕರಾಳ ಕಾನೂನುಗಳನ್ನು ಹೊಸ ರೂಪದಲ್ಲಿ ಮರಳಿ ತರಲು ಯೋಜಿಸುತ್ತಿದೆ. ಬಿಜೆಪಿ ಸರ್ಕಾರ ಬಂಡವಾಳಶಾಹಿಗಳ ಒತ್ತಡದಲ್ಲಿ ಇದನ್ನು ಮಾಡುತ್ತಿದೆ” ಎಂದು ಆರೋಪಿಸಿದ್ದರು.

ಐದು ರಾಜ್ಯಗಳ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಕ್ಷಮೆಯಾಚಿಸಿದ್ದು, ಮೂರು ಕರಾಳ ಕಾನೂನುಗಳನ್ನು ರದ್ದುಗೊಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಹುಲ್‌ ಗಾಂಧಿ ಪ್ರತಿಕ್ರಿಯೆ ನೀಡಿದ್ದು, “ಪ್ರಧಾನಿ ನರೇಂದ್ರ ಮೋದಿಯವರ ಕ್ಷಮೆಯಾಚನೆಯನ್ನು ತೋಮರ್ ಅವಮಾನಿಸಿದ್ದಾರೆ” ಎಂದು ಟೀಕಿಸಿದ್ದಾರೆ.

ಕಿಸಾನ್‌ ಮೋರ್ಚಾ ಎಚ್ಚರಿಕೆ

“ಹಿಂತೆಗೆದುಕೊಂಡ ಮೂರು ಕೃಷಿ ಕಾನೂನುಗಳನ್ನು ನಂತರದ ದಿನಗಳಲ್ಲಿ ಮತ್ತೆ ಜಾರಿಗೆ ತರಬಹುದು” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿಕೆ ಹೊರಬಿದ್ದ ಬೆನ್ನಲ್ಲೇ ರೈತ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆ ನೀಡಿ, “ಸರ್ಕಾರದ ಅಹಂ ಮುರಿಯಲು ಎಲ್ಲಾ ಸಮಯದಲ್ಲಿಯೂ ಸಜ್ಜಾಗಿದ್ದೇವೆ” ಎಂದಿತ್ತು.

ಈ ಕುರಿತು ಟ್ವೀಟ್ ಮಾಡಿರುವ ಸಂಯುಕ್ತ ಕಿಸಾನ್ ಮೋರ್ಚಾ, “ಕೃಷಿ ಸಚಿವ ನರೇಂದ್ರ ತೋಮರ್ ಅವರ ಈ ಹೇಳಿಕೆ ದುರಹಂಕಾರದಿಂದ ಕೂಡಿದೆ. ಬಿಜೆಪಿ ಸರ್ಕಾರ ಒಂದು ಹೆಜ್ಜೆ ಹಿಂದೆ ಸರಿದು ಮತ್ತು ಎರಡು ಹೆಜ್ಜೆ ಮುಂದೆ ಹೋಗಬೇಕೆಂದು ಭಾವಿಸಿದರೆ ಅದು ಸಾಧ್ಯವಿಲ್ಲ. ರೈತರು ಮತ್ತು ರೈತ ಸಂಘಟನೆಗಳು ಎಂಎಸ್‌ಪಿ ಸೇರಿದಂತೆ ಎಲ್ಲಾ ವಿಷಯಗಳಲ್ಲಿ ಒಗ್ಗಟ್ಟಾಗಿವೆ ಮತ್ತು ಈ ಸರ್ಕಾರದ ಅಹಂ ಮುರಿಯಲು ಎಲ್ಲಾ ಸಮಯದಲ್ಲೂ ಸಿದ್ಧವಾಗಿದ್ದೇವೆ” ಎಂದು ಹೇಳಿತ್ತು.


ಇದನ್ನೂ ಓದಿರಿ: ಪಂಜಾಬ್ ಚುನಾವಣೆಯಲ್ಲಿ ಸ್ಪರ್ಧಿಸಲು ಕೆಲ ರೈತ ಸಂಘಟನೆಗಳ ನಿರ್ಧಾರ: ಅಂತರ ಕಾಯ್ದುಕೊಂಡ SKM

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. 😎 , AGRICULTURE INDUSTRIES PRODUCT MAFIA, Openly black marketing, gambling in marketing, government allowed, India is still not indipendent from British APMC system

    What is the profit % limitations on consumer rate from agriculture industries according to law ?

    Which law penalize unauthorised buyers and sellers at any rate from agriculture industries to the consumers ?

    Other than agriculture industries, every INDUSTRIES know that what prices consumers pay for his INDUSTRY PRODUCT

    Agriculture industries suffering losses about 453% to 8569% every year in the APMC system

    Work on legalize agriculture industries product marketing

    GOOD LUCK

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...