Homeಮುಖಪುಟಅಹಮದಾಬಾದ್ ಸರಣಿ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ

ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣ: 38 ಅಪರಾಧಿಗಳಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ

- Advertisement -
- Advertisement -

2008 ರ ಅಹಮದಾಬಾದ್ ಸರಣಿ ಸ್ಫೋಟ ಪ್ರಕರಣದಲ್ಲಿ 49 ಅಪರಾಧಿಗಳ ಪೈಕಿ ಮೂವತ್ತೆಂಟು ಮಂದಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ಪ್ರಕರಣದಲ್ಲಿ ಸುಮಾರು 80 ಆರೋಪಿಗಳನ್ನು ವಿಚಾರಣೆ ಮಾಡಲಾಗಿತ್ತು.

2008 ರ ಜುಲೈ 26 ರಂದು ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಉಗ್ರರು ನಡೆಸಿದ ಸರಣಿ ಸ್ಫೋಟದ ದಾಳಿಯಲ್ಲಿ 56 ಮಂದಿ ಸಾವನ್ನಪ್ಪಿದ್ದರು.

ಫೆಬ್ರವರಿ 8 ರಂದು ಗುಜರಾತ್ ನ್ಯಾಯಾಲಯವು 49 ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತು. 38 ಮಂದಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದಲ್ಲಿ ಇತರ 28 ಆರೋಪಿಗಳನ್ನು ಖುಲಾಸೆಗೊಳಿಸಿತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ 13 ವರ್ಷಕ್ಕೂ ಹೆಚ್ಚು ಹಳೆಯ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೊನೆಗೊಳಿಸಿದೆ.

ಇದನ್ನೂ ಓದಿ: ’ಪ್ರಧಾನಿ ಹುದ್ದೆಗೆ ವಿಶೇಷ ಸ್ಥಾನಮಾನವಿದೆ’: ಮೋದಿ ವಿರುದ್ಧ ಮಾಜಿ ಪಿಎಂ ಮನಮೋಹನ್ ಸಿಂಗ್ ಕಿಡಿ

 

ಜುಲೈ 26, 2008 ರಂದು ಅಹಮದಾಬಾದ್ ನಗರದಲ್ಲಿ ಸುಮಾರು 70 ನಿಮಿಷಗಳ ಅವಧಿಯಲ್ಲಿ ಸಂಭವಿಸಿದ 21 ಬಾಂಬ್ ಸ್ಫೋಟಗಳಲ್ಲಿ 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಈ ದುರಂತದಲ್ಲಿ ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ ಆಫ್ ಇಂಡಿಯಾ (SIMI) ಯ ಒಂದು ಬಣವಾದ ಇಂಡಿಯನ್ ಮುಜಾಹಿದೀನ್ (IM) ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದರು.

2002 ರಲ್ಲಿ ಗುಜರಾತ್‌ನಲ್ಲಿ ನಡೆದ ಗೋಧ್ರಾ ಹತ್ಯಾಕಾಂಡದ ನಂತರದ ಗಲಭೆಗೆ ಪ್ರತೀಕಾರವಾಗಿ ಇಂಡಿಯನ್ ಮುಜಾಹಿದ್ದೀನ್ (ಐಎಂ) ಭಯೋತ್ಪಾದಕರು ಈ ಸ್ಫೋಟಗಳನ್ನು ಯೋಜಿಸಿ ಕಾರ್ಯಗತಗೊಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

ನ್ಯಾಯಾಲಯವು ಎಲ್ಲಾ 35 ಎಫ್‌ಐಆರ್‌ಗಳನ್ನು ಒಂದು ಮಾಡಿದ ನಂತರ ಇಂಡಿಯನ್ ಮುಜಾಹಿದ್ದೀನ್‌ನೊಂದಿಗೆ ಸಂಪರ್ಕ ಹೊಂದಿದ 78 ಜನರ ವಿರುದ್ಧ ಡಿಸೆಂಬರ್ 2009 ರಲ್ಲಿ ಪ್ರಕರಣದ ವಿಚಾರಣೆ ಪ್ರಾರಂಭವಾಗಿತ್ತು.


ಇದನ್ನೂ ಓದಿ: ಯುಪಿ ಚುನಾವಣೆ: 2 ಹಂತಗಳ ಮತದಾನದಲ್ಲಿ ಎಸ್‌ಪಿ ಶತಕ ಬಾರಿಸಿದೆ ಎಂದ ಅಖಿಲೇಶ್ ಯಾದವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...