Homeಮುಖಪುಟಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

- Advertisement -
- Advertisement -

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಿದ್ದಾರೆ.

ವರದಿಗಳ ಪ್ರಕಾರ, ಎಐ ಶೃಂಗಸಭೆಯ ಪ್ರತಿಭಟನೆಗೆ ಸಂಬಂಧಪಟ್ಟಂತೆ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರಾದ ಸೌರಭ್, ಅರ್ಬಾಝ್ ಮತ್ತು ಸಿದ್ಧಾರ್ಥ್ ಎಂಬವರನ್ನು ಬಂಧಿಸಿ ಕರೆತರಲು ದೆಹಲಿ ಪೊಲೀಸರು ಬುಧವಾರ (ಫೆ.25) ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರೋಹ್ರು ಪಟ್ಟಣಕ್ಕೆ ಹೋಗಿದ್ದರು.

ಅಲ್ಲಿನ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ಸಿವಿಲ್ ಡ್ರೆಸ್‌ನಲ್ಲಿ ರೆಸಾರ್ಟ್‌ವೊಂದಕ್ಕೆ ನುಗ್ಗಿದ ದೆಹಲಿ ಪೊಲೀಸರು, ಆರೋಪಿಗಳಾದ ಮೂವರು ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದರು ಮತ್ತು ರೆಸಾರ್ಟ್‌ನ ಸಿಸಿಟಿವಿ ಡಿವಿಆರ್ ವಶಕ್ಕೆ ಪಡೆದಿದ್ದರು. ಬಳಿಕ ಬಂಧಿತರು ಮತ್ತು ಸಿಸಿಟಿವಿ ಡಿವಿಆರ್ ಜೊತೆ ಕಾರಿನಲ್ಲಿ ದೆಹಲಿಗೆ ಹೊರಟ್ಟಿದ್ದರು.

ಈ ವೇಳೆ ರೋಹ್ರು ಪಟ್ಟಣ ಸಮೀಪದ ಚೆಕ್ ಪೋಸ್ಟ್‌ನಲ್ಲಿ ಅವರನ್ನು ತಡೆದ ಸ್ಥಳೀಯ ಪೊಲೀಸರು, ಕಾಂಗ್ರೆಸ್ ಕಾರ್ಯಕರ್ತರನ್ನು ಅಪಹರಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ದೆಹಲಿ ಪೊಲೀಸ್ ತಂಡದಲ್ಲಿದ್ದ ಸುಮಾರು 20 ಸಿಬ್ಬಂದಿಯನ್ನು ವಶಕ್ಕೆ ಪಡೆದಿದ್ದಾರೆ. ನಂತರ ಅವರನ್ನು ಸ್ಥಳೀಯ ಧಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ದೆಹಲಿ ಪೊಲೀಸರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೆ ಸಿವಿಲ್ ಡ್ರೆಸ್‌ನಲ್ಲಿ ಬಂದು ಕಾಂಗ್ರೆಸ್‌ ಕಾರ್ಯಕರ್ತರನ್ನು ಅಪಹರಿಸಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್ 365 (ಅಪಹರಣ) ಮತ್ತು 452 (ಅತಿಕ್ರಮಣ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಆ ಬಳಿಕ, ದೆಹಲಿ ಪೊಲೀಸರು ನಿಜವಾಗಿಯೂ ಅಧಿಕೃತ ಕಾರ್ಯದ ಮೇಲೆ ಬಂದಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರ ಗುರುತಿನ ಚೀಟಿಗಳನ್ನು ತಪಾಸಣೆ ಮಾಡಿದ್ದಾರೆ. ಸುಮಾರು 10-12 ಗಂಟೆಗಳ ಕಾಲ ಅವರನ್ನು ಠಾಣೆಯಲ್ಲೇ ಇರಿಸಿಕೊಂಡು ವಿಚಾರಣೆ ನಡೆಸಿದ್ದಾರೆ.

ಇದಾದ ಬಳಿಕ, ದೆಹಲಿ ಪೊಲೀಸರು ಬಂಧಿಸಿದ್ದ ಮೂವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ತಮ್ಮ ವಶಕ್ಕೆ ಪಡೆದ ಸ್ಥಳೀಯ ಪೊಲೀಸರು, ಮಧ್ಯರಾತ್ರಿಯೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ದೆಹಲಿ ಪೊಲೀಸರು ಇವರನ್ನು ಕರೆದೊಯ್ಯಬೇಕಾದರೆ ಕಾನೂನುಬದ್ಧವಾಗಿ ‘ಟ್ರಾನ್ಸಿಟ್ ರಿಮಾಂಡ್’ ಪಡೆಯಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.

ದೆಹಲಿ ಪೊಲೀಸರು ರೆಸಾರ್ಟ್‌ನಿಂದ ಕಾನೂನುಬಾಹಿರವಾಗಿ ವಶಪಡಿಸಿಕೊಂಡಿದ್ದರು ಎನ್ನಲಾದ ಸಿಸಿಟಿವಿ ಡಿವಿಆರ್ ಮತ್ತು ಇತರ ದಾಖಲೆಗಳನ್ನು ತಮ್ಮ ವಶಕ್ಕೆ ಪಡೆದಿದ್ದಾರೆ ಮತ್ತು ಅದರ ಬಗ್ಗೆ ಅಧಿಕೃತ ದಾಖಲೆ ನೀಡುವಂತೆ ಒತ್ತಾಯಿಸಿದ್ದಾರೆ.

ಅಂತಿಮವಾಗಿ, ತಡರಾತ್ರಿ ಸುಮಾರು 1:30ಕ್ಕೆ ನ್ಯಾಯಾಲಯವು ದೆಹಲಿ ಪೊಲೀಸರಿಗೆ ‘ಟ್ರಾನ್ಸಿಟ್ ರಿಮಾಂಡ್’ ನೀಡಿತು. ಅದರ ನಂತರ ದೆಹಲಿ ಪೊಲೀಸರು ಆರೋಪಿಗಳೊಂದಿಗೆ ಶಿಮ್ಲಾದಿಂದ ಹೊರಟರು. ಆದರೆ, ಅವರನ್ನು ಶಿಮ್ಲಾ ಹೊರವಲಯದ ಕನ್ಲೋಗ್ ಮತ್ತು ಶೋಗಿ ಎಂಬಲ್ಲಿ ಶಿಮ್ಲಾ ಪೊಲೀಸರು ಎರಡನೇ ಬಾರಿ ತಡೆದರು.

ಈ ಬಾರಿ ಶಿಮ್ಲಾ ಪೊಲೀಸರು ಕೇವಲ ತಡೆಯಲಿಲ್ಲ, ಬದಲಿಗೆ ದೆಹಲಿ ಪೊಲೀಸರ ವಾಹನಗಳ ಮುಂದೆ ಮತ್ತು ಹಿಂದೆ ತಮ್ಮ ಪೊಲೀಸ್ ವಾಹನಗಳನ್ನು ನಿಲ್ಲಿಸಿ ರಸ್ತೆಯನ್ನು ಸಂಪೂರ್ಣವಾಗಿ ಬ್ಲಾಕ್ ಮಾಡಿದರು.

ದೆಹಲಿ ಪೊಲೀಸರು ರೋಹ್ರು ರೆಸಾರ್ಟ್‌ನಿಂದ ಸಿಸಿಟಿವಿ ಡಿವಿಆರ್ ಮತ್ತು ಇತರ ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. “ನಮ್ಮ ರಾಜ್ಯದ ವ್ಯಾಪ್ತಿಯಲ್ಲಿ ನೀವು ವಶಪಡಿಸಿಕೊಂಡ ವಸ್ತುಗಳ ಬಗ್ಗೆ ನಮಗೆ ಅಧಿಕೃತ ದಾಖಲೆ ನೀಡದೆ ನೀವು ಹೋಗುವಂತಿಲ್ಲ” ಎಂದು ಸ್ಥಳೀಯರು ಪೊಲೀಸರು ಪಟ್ಟು ಹಿಡಿದರು.

ನ್ಯಾಯಾಲಯದ ಆದೇಶ ಕೈಯಲ್ಲಿದ್ದರೂ ಸಹ, ದೆಹಲಿ ಪೊಲೀಸರನ್ನು ಸುಮಾರು 5 ಗಂಟೆಗಳ ಕಾಲ ರಸ್ತೆಯಲ್ಲೇ ತಡೆಹಿಡಿಯಲಾಗಿತ್ತು. ದೆಹಲಿ ಪೊಲೀಸರು ಮತ್ತು ಶಿಮ್ಲಾ ಪೊಲೀಸರ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲೇ ತೀವ್ರ ವಾಗ್ವಾದ ನಡೆಯಿತು.

ಕೊನೆಗೆ ದೆಹಲಿ ಪೊಲೀಸರು ತಾವು ವಶಪಡಿಸಿಕೊಂಡ ವಸ್ತುಗಳ ಪಟ್ಟಿಯನ್ನು ಶಿಮ್ಲಾ ಪೊಲೀಸರಿಗೆ ಅಧಿಕೃತವಾಗಿ ಹಸ್ತಾಂತರಿಸಿದರು. ಈ ಪ್ರಕ್ರಿಯೆ ಮುಗಿದ ನಂತರ, ಅಂದರೆ ಗುರುವಾರ (ಫೆ.26) ಮುಂಜಾನೆ ಸುಮಾರು 6:50ಕ್ಕೆ ದೆಹಲಿ ಪೊಲೀಸರು ಹಿಮಾಚಲ ಪ್ರದೇಶದ ಗಡಿ ದಾಟಲು ಅನುಮತಿ ನೀಡಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...