Homeಮುಖಪುಟಆರ್‌ಎಸ್‌ಎಸ್‌ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕನನ್ನು ಪಕ್ಷದ ಪ್ರಮುಖ ಹುದ್ದೆಯಿಂದ ಕೈಬಿಟ್ಟ ಎಐಎಡಿಎಂಕೆ

ಆರ್‌ಎಸ್‌ಎಸ್‌ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಶಾಸಕನನ್ನು ಪಕ್ಷದ ಪ್ರಮುಖ ಹುದ್ದೆಯಿಂದ ಕೈಬಿಟ್ಟ ಎಐಎಡಿಎಂಕೆ

- Advertisement -
- Advertisement -

ಆರ್‌ಎಸ್‌ಎಸ್ ಕಾಲ್ನಡಿಗೆ ಜಾಥಾಗೆ ಚಾಲನೆ ನೀಡಿದ್ದ ಕನ್ಯಾಕುಮಾರಿ ಶಾಸಕ ಎನ್ ತಲವೈ ಸುಂದರಂ ಅವರನ್ನು ಎಐಎಡಿಎಂಕೆ ಪಕ್ಷದ ಕನ್ಯಾಕುಮಾರಿ (ಪೂರ್ವ) ಜಿಲ್ಲಾ ಘಟಕದ ಕಾರ್ಯದರ್ಶಿ ಮತ್ತು ಸಂಘಟನಾ ಕಾರ್ಯದರ್ಶಿ ಹುದ್ದೆಯಿಂದ ಮಂಗಳವಾರ ‘ತಾತ್ಕಾಲಿಕವಾಗಿ’ ಕೈ ಬಿಡಲಾಗಿದೆ.

ಜೆ ಜಯಲಲಿತಾ ಸಂಪುಟದ ಮಾಜಿ ಸಚಿವ ಹಾಗೂ ಎಐಎಡಿಎಂಕೆಯ ಹಿರಿಯ ನಾಯಕ ತಲವೈ ಸುಂದರಂ ಅವರು ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡ ಕಾರಣ ಅವರ ಮೇಲೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಲವೈ ಸುಂದರಂ ಅವರು ಎಐಎಡಿಎಂಕೆಯ ಹಿರಿಯ ಎರಡನೇ ಹಂತದ ನಾಯಕರಲ್ಲಿ ಒಬ್ಬರು, ಸಚಿವರಾಗಿ, ರಾಜ್ಯಸಭಾ ಸಂಸದರಾಗಿ ಮತ್ತು ನವದೆಹಲಿಗೆ ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ವಿವಿಧ ಹುದ್ದೆಗಳನ್ನು ಅವರು ನಿಭಾಯಿಸಿದ್ದಾರೆ. ಅವರು ಕನ್ಯಾಕುಮಾರಿ ಜಿಲ್ಲೆಯ ಏಕೈಕ ಎಐಎಡಿಎಂಕೆ ಶಾಸಕರಾಗಿದ್ದಾರೆ.

ಆರ್‌ಎಸ್‌ಎಸ್ ಸ್ಥಾಪನೆಯ 100ನೇ ವರ್ಷದ ಸ್ಮರಣಾರ್ಥ ಕನ್ಯಾಕುಮಾರಿಯಲ್ಲಿ ಆರ್‌ಎಸ್‌ಎಸ್ ಆಯೋಜಿಸಿದ್ದ ಕಾಲ್ನಡಿಗೆ ಜಾಥಾಗೆ ತಲವೈ ಸುಂದರಂ ಚಾಲನೆ ನೀಡಿದ ಎರಡು ದಿನಗಳ ನಂತರ ಪಕ್ಷ ಅವರ ವಿರುದ್ದ ಕ್ರಮ ಕೈಗೊಂಡಿದೆ.

2026 ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಎದುರಿಸಲು ಎಐಎಡಿಎಂಕೆ ತಯಾರಿ ನಡೆಸುತ್ತಿದ್ದು, ಬಿಜೆಪಿಯಿಂದ ಹೆಚ್ಚು ಅಂತರ ಕಾಯ್ದುಕೊಳ್ಳುತ್ತಿದೆ. ಈ ಸಮಯದಲ್ಲಿ ತಲವೈ ಅವರು ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಪಕ್ಷದೊಳಗೆ ವಿರೋಧಕ್ಕೆ ಕಾರಣವಾಗಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ತಮಿಳುನಾಡಿನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ಭಾಗವಾಗಿದ್ದ ಎಐಎಡಿಎಂಕೆ ಪಕ್ಷ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈಯ ನಿರ್ಧಾರಗಳನ್ನು ವಿರೋಧಿಸಿ 2023ರಲ್ಲಿ ಒಕ್ಕೂಟದಿಂದ ಹೊರ ಬಂದಿತ್ತು. ಆ ಬಳಿಕ ಬಿಜೆಪಿ-ಆರ್‌ಎಸ್‌ಎಸ್‌ನಿಂದ ಅಂತರ ಕಾಯ್ದುಕೊಳ್ಳುತ್ತಿದೆ.

ತನ್ನನ್ನು ಪಕ್ಷದ ಹುದ್ದೆಗಳಿಂದ ಕೆಳಗಿಳಿಸಿದ ಬಗ್ಗೆ ಮಾತನಾಡಿರುವ ತಲವೈ ಸುಂದರಂ ಅವರು ” ನನ್ನ ವಿರುದ್ದದ ಕ್ರಮಕ್ಕೆ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ನಾನು ಕಳೆದ ಕೆಲ ವರ್ಷಗಳಿಂದ ಆರ್‌ಎಸ್‌ಎಸ್‌ ಜಾಥಾಗೆ ಚಾಲನೆ ಕೊಡುತ್ತಿದ್ದೇನೆ. ಕನ್ಯಾಕುಮಾರಿ ಶಾಸಕ ಎಂಬ ನೆಲೆಯಲ್ಲಿ ನನ್ನನ್ನು ಅವರು ಆಹ್ವಾನಿಸಿದ್ದರು. ಅದಕ್ಕೆ ಹೋಗಿದ್ದೆ. ನಾನು ನನ್ನ ಕ್ಷೇತ್ರದ ಕೆಲಸ ಮಾಡಿದ್ದೇನೆ. ಆರ್‌ಎಸ್‌ಎಸ್‌ ಜಾಥಾಗೆ ಚಾಲನೆ ನೀಡಿರುವುದರಲ್ಲಿ ಯಾವುದೇ ತಪ್ಪಿಲ್ಲ ಎಂದಿದ್ದಾರೆ.

ರಾಜಕೀಯ ವಿಶ್ಲೇಷಕರ ಪ್ರಕಾರ, ಆರ್‌ಎಸ್‌ಎಸ್‌, ಹಿಂದುತ್ವದ ಜೊತೆ ಸಖ್ಯ ಬೆಳೆಸಿದರೆ ತಮಿಳುನಾಡಿನಲ್ಲಿ ರಾಜಕೀಯ ನಡೆಸಲು ಸಾಧ್ಯವಿಲ್ಲ ಎಂಬುವುದು ಎಐಎಡಿಎಂಕೆಗ ಅರಿವಾಗಿದೆ. ಆದ್ದರಿಂದ ಅದು ಹಿಂದುತ್ವ ಗುಂಪಿನಿಂದ ಅಂತರ ಕಾಯ್ದುಕೊಂಡು ಮುಂದಿನ ಚುನಾವಣೆಗೆ ತಯಾರಿ ನಡೆಸುತ್ತಿದೆ.

ಇದನ್ನೂ ಓದಿ : ಹರಿಯಾಣ ಚುನಾವಣಾ ಫಲಿತಾಂಶ: ಅತ್ಯಾಚಾರ ಅಪರಾಧಿ ರಾಮ್ ರಹೀಮ್ ಪ್ರಭಾವವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...