Homeಕರ್ನಾಟಕಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ರಾಹುಲ್ ಗಾಂಧಿ 'ನ್ಯಾಯ ಯೋಧ' ಎಂದು ಕೊಂಡಾಡಿದ ಸಭೆ

- Advertisement -
- Advertisement -

ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಮೊದಲ ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಡಳಿಯ ಸದಸ್ಯರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಣಯಗಳನ್ನು ಪ್ರಕಟಿಸಿದರು. ಅವುಗಳು ಹೀಗಿವೆ…

  • ಭಾರತೀಯ ಜನಗಣತಿ ಆಯೋಗದಿಂದ ರಾಷ್ಟ್ರೀಯ ಮಟ್ಟದ ಜಾತಿ ಜನಗಣತಿ ನಡೆಯಬೇಕು. ಈ ಜನಗಣತಿಯು ಪ್ರತಿಯೊಬ್ಬ ವ್ಯಕ್ತಿ ಮತ್ತು ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ ಮತ್ತು ರಾಜಕೀಯ ಅಂಶಗಳನ್ನು ಒಳಗೊಂಡಿರಬೇಕು. ಇದಕ್ಕೆ ತೆಲಂಗಾಣ ಮಾದರಿಯನ್ನು ಅನುಸರಿಸಬೇಕು.
  • ಮೀಸಲಾತಿ ಮಿತಿ ಶೇಕಡ 50 ಅನ್ನು ತೆಗೆದು ಹಾಕಬೇಕು. ಈ ಮೂಲಕ ಶಿಕ್ಷಣ, ಸೇವೆ, ರಾಜಕೀಯ ಮತ್ತು ಇತರ ಕ್ಷೇತ್ರಗಳಲ್ಲಿ ಒಬಿಸಿಗಳಿಗೆ ಸೂಕ್ತ ಮೀಸಲಾತಿಯನ್ನು ಒದಗಿಸಬೇಕು.
  • ಸಂವಿಧಾನದ ವಿಧಿ 15(5) ರ ಪ್ರಕಾರ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ನೀಡಬೇಕು.

ಸಮಾಜದ ಅಂಚಿನಲ್ಲಿರುವ ವರ್ಗಗಳ ಸಾಮಾಜಿಕ ನ್ಯಾಯದ ಪರವಾಗಿ ಧೈರ್ಯದಿಂದ ಹೋರಾಡಿದ್ದಕ್ಕಾಗಿ ಮತ್ತು ವಿಶೇಷವಾಗಿ ಹಿಂದುಳಿದ ವರ್ಗಗಳ ಪರವಾಗಿ ನಿಂತಿದ್ದಕ್ಕಾಗಿ ‘ನ್ಯಾಯ ಯೋಧ ರಾಹುಲ್ ಗಾಂಧಿ’ ಅವರಿಗೆ ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆಯು ಸರ್ವಾನುಮತದಿಂದ ಧನ್ಯವಾದಗಳನ್ನು ಅರ್ಪಿಸುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ರಾಹುಲ್ ಗಾಂಧಿಯವರ ದೃಢ ಸಂಕಲ್ಪವು ಜಾತಿ ಜನಗಣತಿಯ ನ್ಯಾಯಯುತ ಮತ್ತು ಸಾಂವಿಧಾನಿಕ ಬೇಡಿಕೆಗೆ ಮನುವಾದಿ ಮೋದಿ ಸರ್ಕಾರ ಮಣಿಯುವಂತೆ ಮಾಡಿತು. ಭಾರತದ ಎಲ್ಲಾ ಹಿಂದುಳಿದ ವರ್ಗಗಳ ಪರವಾಗಿ, ಈ ಐತಿಹಾಸಿಕ ಸಾಧನೆಗೆ ರಾಹುಲ್ ಗಾಂಧಿಯವರಿಗೆ ಮಂಡಳಿಯು ಹೃತ್ಪೂರ್ವಕ ಕೃತಜ್ಞತೆ ಮತ್ತು ಗೌರವವನ್ನು ಸಲ್ಲಿಸುತ್ತದೆ ಎಂದು ಹೇಳಿದರು.

ಇದು ಒಂದು ಮೈಲಿಗಲ್ಲು ಆಗಿದ್ದರೂ, ನಮ್ಮ ಸಂವಿಧಾನದಲ್ಲಿ ಕಲ್ಪಿಸಲಾಗಿರು ಸಾಮಾಜಿಕ ನ್ಯಾಯವನ್ನು ಖಾತರಿಪಡಿಸುವಲ್ಲಿ ಇದು ಒಂದು ಸಣ್ಣ ಹೆಜ್ಜೆಯಾಗಿದೆ. ನಮ್ಮ ನ್ಯಾಯಯೋಧ ರಾಹುಲ್ ಗಾಂಧಿಯವರ ಧೈರ್ಯಶಾಲಿ ಮತ್ತು ಅಚಲ ನಾಯಕತ್ವದಲ್ಲಿ, ನಮ್ಮ ಮಹಾನ್ ರಾಷ್ಟ್ರದಲ್ಲಿ ಸಮಾನತೆ ಮತ್ತು ಸಮ ಸಮಾಜಕ್ಕೆ ಕಾರಣವಾಗುವ ಸಾಮಾಜಿಕ ಪರಿವರ್ತನೆಯ ಅಂತಿಮ ಸಾಂವಿಧಾನಿಕ ಉದ್ದೇಶವನ್ನು ಭಾರತವು ಸಾಕಾರಗೊಳಿಸುವ ಮತ್ತು ಸಾಧಿಸುವ ಗುರಿಯನ್ನು ಹೊಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ನ್ಯಾಯ ಯೋಧ ರಾಹುಲ್ ಗಾಂಧಿಯವರ ಧೈರ್ಯಶಾಲಿ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷದ ಧ್ವಜವನ್ನು ನಮ್ಮ ಕೈಯಲ್ಲಿ ಹಿಡಿದುಕೊಂಡು, ಎಲ್ಲರಿಗೂ ನ್ಯಾಯಕ್ಕಾಗಿ ಹೋರಾಡುವುದನ್ನು ಮುಂದುವರಿಸಲು ನಾವು ಇಲ್ಲಿ ಸಂಕಲ್ಪ ಮಾಡಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸಲಹಾ ಮಂಡಳಿ ಸಂಚಾಲಕ ಅನಿಲ್ ಜೈ ಹಿಂದ್, ಎಂ. ವೀರಪ್ಪ ಮೊಯಿಲಿ, ಬಿ.ಕೆ. ಹರಿಪ್ರಸಾದ್‌ ಮತ್ತಿತರರು ಇದ್ದರು.

ದೇವನಹಳ್ಳಿ ಗೆಲುವು ಪ್ರಜಾಪ್ರಭುತ್ವದ ವಿಜಯ: ಸಂಯುಕ್ತ ಕಿಸಾನ್ ಮೋರ್ಚಾದಿಂದ ಅಭಿನಂದನೆ, ದೇಶಾದ್ಯಂತ ವಿಜಯೋತ್ಸವ ಆಚರಣೆಗೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...