Homeಕರ್ನಾಟಕಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್...

ಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್ ಸುರ್ಜೆವಾಲಾ

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣೆಗೆ 2 ವರ್ಷಗಳು ಬಾಕಿ ಇರುವಂತೆಯೇ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಮುಖ್ಯಮಂತ್ರಿ ಪದವಿಗೆ ರೇಸ್ ಅರಂಭವಾದಂತೆ ಕಾಣುತ್ತದೆ. ಇದುವರೆಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿದ್ದ ಮುಸುಕಿ ಗುದ್ದಾಟ ಈಗ ಬೀದಿಗೆ ಬಂದಿದೆ. ಇದಕ್ಕೆ ಸ್ಪಷ್ಟ ನಿದರ್ಶನಗಳಂತೆ ಕರ್ನಾಟಕದ ಹಲವು ಶಾಸಕರು ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಈಗಾಗಲೇ ಬಿಂಬಿಸತೊಡಗಿದ್ದರೆ, ಇದಕ್ಕೆ ವಿರುದ್ಧವಾಗಿ ಇನ್ನೊಂದು ಬಣ ಡಿ.ಕೆ.ಶಿವಕುಮಾರ್ ಕಾಂಗ್ರೆಸ್‌ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರಚಾರ ಆರಂಭಿಸಿದ್ದಾರೆ. ಶಿವಕುಮಾರ್ ಅಥವಾ ಸಿದ್ದರಾಮಯ್ಯನವರು ಈ ಬಗ್ಗೆ ತುಟಿ ಬಿಚ್ಚುತ್ತಿಲ್ಲವಾದರೂ ಪರೋಕ್ಷವಾಗಿ ತಾವು ಯಾಕೆ ಮುಖ್ಯಮಂತ್ರಿ ಆಗಬಾರದು ಎಂದು ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಸಿದ್ಧರಾಮಯ್ಯ ಅಪ್ತವಲಯದಲ್ಲಿ ಗುರುತಿಸಿಕೊಂಡಿರುವ ಕಾಂಗ್ರೆಸ್‌ ಮುಖಂಡ ಮತ್ತು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಭಾನುವಾರ ಸಿದ್ಧರಾಮಯ್ಯನವರೇ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದು ಭವಿಷ್ಯ ನುಡಿದಿದ್ದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ನಾನು ಸಿದ್ಧರಾಮಯ್ಯನವರನ್ನು ಮಾಜಿ ಮುಖ್ಯಮಂತ್ರಿ ಎಂದು ಕರೆಯಲು ಇಷ್ಟಪಡುವುದಿಲ್ಲ. ಅವರು ಕರ್ನಾಟಕದ ಭವಿಷ್ಯದ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದರು. ಅದೇ ರೀತಿಯಲ್ಲಿ ಕೊಪ್ಪಳದ ಶಾಸಕ ರಾಘವೇಂದ್ರ ಹಿಟ್ನಾಳ್ ಕೂಡ ಸಿದ್ದು ಪರ ಬ್ಯಾಟ್ ಬೀಸಿದ್ದರು. ಜಮೀರ್ ಮತ್ತು ಹಿಟ್ನಾಳ್‌ ಅವರ ಹೇಳಿಕೆ ಕಾಂಗ್ರೆಸ್‌ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು ಡಿ.ಕೆ.ಶಿವಕುಮಾರ್ ಮತ್ತು ಸಿದ್ಧರಾಮಯ್ಯ ಅವರ ಬಣಗಳು ಮುಖ್ಯಮಂತ್ರಿ ಅಭ್ಯರ್ಥಿ ವಿಷಯಕ್ಕೆ ಸಂಬಂಧಿಸಿದಂತೆ ಪರಸ್ಪರ ಹೇಳಿಕೆಗಳಲ್ಲಿ ತೊಡಗಿದ್ದರು. ಪಕ್ಷದಲ್ಲಿನ ಮುಖ್ಯಮಂತ್ರಿ ಗೊಂದಲ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿದ್ದೆಗೆಡಿಸಿದ್ದು ಅವರು ಭಾನುವಾರ ಸಂಜೆಯೇ ಹೈಕಮಾಂಡ್ ನಾಯಕರ ಭೇಟಿಗೆ ದೆಹಲಿಗೆ ದೌಡಾಯಿಸಿದ್ದರು. ದೆಹಲಿಯಲ್ಲಿ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಮತ್ತು AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರನ್ನು ಇಂದು ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇಂದು ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವನ್ನು ಬಹಿರಂಗವಾಗಿ ಚರ್ಚಿಸದೇ ಹೈಕಮಾಂಡ್ ಗಮನಕ್ಕೆ ಬಿಡಬೇಕೆಂದು ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚಿಸಿರುವುದಾಗಿ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ 2 ವರ್ಷವಿದ್ದು ಈಗಾಗಲೇ ನಾಯಕತ್ವದ ಚರ್ಚೆ ಬೇಡ. ರಾಜ್ಯದಲ್ಲಿ ಕೆಲವು ನಾಯಕರು ನಿರ್ದಿಷ್ಟ ವ್ಯಕ್ತಿಗಳನ್ನು ಮುಖ್ಯಮಂತ್ರಿಯನ್ನಾಗಿ ಬಿಂಬಿಸಲು ಯತ್ನಿಸುತ್ತಿರುವುದು ಮತ್ತು ಹೇಳಿಕೆಯನ್ನು ನೀಡುತ್ತಿರುವುದು ಹೈಕಮಾಂಡ್ ಗಮನಕ್ಕೆ ಬಂದಿದೆ. ಕರ್ನಾಟಕದ ಕಾಂಗ್ರೆಸ್ ನಾಯಕರು ಮೊದಲು ಚುನಾಣೆಯನ್ನು ಗೆಲ್ಲುವ ಕಡೆ ಗಮನ ಹರಿಸಲಿ. ನಾಯಕತ್ವ ವಿಚಾರವನ್ನು ಹೈಕಮಾಂಡ್ ಮತ್ತು ಶಾಸಕರು ನೋಡಿಕೊಳ್ಳುತ್ತಾರೆ ಎಂದು ರಣದೀಪ್ ಸಿಂಗ್ ಸುರ್ಜೆವಾಲಾ ಅವರು ತಿಳಿಸಿದ್ದಾರೆ.

ದೇಶದ ಆರ್ಥಿಕ ಸ್ಥಿತಿಯ ಚೇತರಿಕೆ ಮತ್ತು ಕೃಷಿ ಕ್ಷೇತ್ರದ ಸುಧಾರಣೆಗೆ ಕಾಂಗ್ರೆಸ್ ಹೋರಾಟ ನಡೆಸುತ್ತಿದೆ. ಕೊರೋನಾದಿಂದ ಕುಸಿದಿರುವ ದೇಶದ ಅಭಿವೃದ್ಧಿಗಾಗಿ ಕರ್ನಾಟಕ ಸೇರಿದಂತೆ ಎಲ್ಲಾ ರಾಜ್ಯಗಳ ಕಾಂಗ್ರೆಸ್‌ ನಾಯಕರು ಒಟ್ಟಾಗಿ ಹೋರಾಟ ನಡೆಸಬೇಕು. ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರಬಲವಾದ ಹೋರಾಟವನ್ನು ನಡೆಸುತ್ತಿದೆ. ಕಾಂಗ್ರೆಸ್‌ನ ಸ್ಥಳೀಯ ನಾಯಕರು ಆ ನಿಟ್ಟಿನಲ್ಲಿಯೇ ಕಾರ್ಯ ನಿರ್ವಹಿಸಬೇಕು ಎಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದಿಪ್ ಸಿಂಗ್ ಸುರ್ಜೆವಾಲ ಹೇಳಿಕೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಾಳೆ ದೆಹಲಿಯಿಂದ ಬೆಂಗಳೂರಿಗೆ ಮರಳಲಿದ್ದಾರೆ. ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಬಂದ ನಂತರ ಮುಖ್ಯಮಂತ್ರಿ ವಿಷಯವನ್ನು ಪ್ರಸ್ತಾಪಿಸುತ್ತಿರುವ ಜಮೀರ್ ಅಹ್ಮದ್ ಮತ್ತು ರಾಘವೇಂದ್ರ ಹಿಟ್ನಾಳ್ ಅವರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ. ಹಾಗೇ ಮುಖ್ಯಮಂತ್ರಿ ವಿಷಯವನ್ನು ಪ್ರಸ್ತಾಪಿಸದಂತೆ ರಾಜ್ಯ ನಾಯಕರಿಗೆ ಮೌಕಿಕ ಆದೇಶವನ್ನು ಅಥವಾ ನೋಟಿಸ್ ನೀಡಬಹುದು. ಈಗಲೇ ಈ ಕುರಿತು ಸ್ಪಷ್ಟವಾಗಿ ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.


ಇದನ್ನೂ ಓದಿ :ಶರದ್ ಪವಾರ್‌ ಮತ್ತು ಪ್ರಶಾಂತ್‌ ಕಿಶೋರ್‌ 2 ನೇ ಭೇಟಿ; 2024 ರ ಚುನಾವಣೆಗೆ ವಿರೋಧ ಪಕ್ಷಗಳು ಸಜ್ಜು?

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...