Homeಕರ್ನಾಟಕಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

ಎನ್‌ಇಪಿ ವಿರುದ್ಧ ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಎಐಡಿಎಸ್‌ಒ ಚಾಲನೆ

- Advertisement -
- Advertisement -

ಎನ್‌ಇಪಿ -2020 (ರಾಷ್ಟ್ರೀಯ ಶಿಕ್ಷಣ ನೀತಿ) ವಿರೋಧಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಷನ್‌‌ (ಎಐಡಿಎಸ್‌ಒ) ಬೃಹತ್‌ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದೆ.

ಎನ್‌ಇಪಿ ಅನುಷ್ಠಾನದ ವಿರುದ್ಧ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೆ, ಹಲವು ಶಿಕ್ಷಣ ತಜ್ಞರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ವಿರೋಧದ ನಡುವೆಯೂ ಈ ನೀತಿಯನ್ನು ಇದೀಗ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಸಾರ್ವಜನಿಕ ಶಿಕ್ಷಣವನ್ನು ನಾಶಗೊಳಿಸಿ, ಶಿಕ್ಷಣ ಕ್ಷೇತ್ರದ ಸಂಪೂರ್ಣ ವ್ಯಾಪಾರೀಕರಣ ಗೊಳಿಸುವ ಉದ್ದೇಶದಿಂದಲೇ ಎನ್.ಇ.ಪಿಯನ್ನು ಅಪ್ರಜಾತಾಂತ್ರಿಕವಾಗಿ ಹೇರಲಾಗುತ್ತಿದೆ ಎಂದು ಎಐಡಿಎಸ್‌ಒ  ಅಭಿಪ್ರಾಯಪಟ್ಟಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರಂಭದಿಂದಲೂ ಈ ಕರಾಳ ನೀತಿಯನ್ನು AIDSO ವಿರೋಧಿಸುತ್ತಾ ಬಂದಿದೆ. ಈ ಹೋರಾಟದ ಮುಂದುವರಿದ ಭಾಗವಾಗಿ AIDSO ಅಖಿಲ ಭಾರತ ಸಮಿತಿಯ ನಾಯಕತ್ವದಲ್ಲಿ ದೇಶಾದ್ಯಂತ ಒಂದು ಕೋಟಿ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲಾಗಿದೆ ಎಂದು ಸಂಘಟನೆ ತಿಳಿಸಿದೆ.

ಸಹಿ ಸಂಗ್ರಹ ಅಭಿಯಾನಕ್ಕೆ ರಾಜ್ಯದ ಹಲವು ಗಣ್ಯರು, ಶಿಕ್ಷಣ ತಜ್ಞರು, ಸಾಹಿತಿಗಳು ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ. ಸಾಹಿತಿಗಳಾದ ಅಲ್ಲಮಪ್ರಭು ಬೆಟ್ಟದೂರು, ಎಸ್.ಜಿ. ಸಿದ್ದರಾಮಯ್ಯ ಹಾಗೂ ಪುರುಷೋತ್ತಮ ಬಿಳಿಮಲೆ ಅವರು ಅಭಿಯಾನಕ್ಕೆ ಚಾಲನೆ ನೀಡಿ ಶುಭ ಹಾರೈಕೆಯ ಸಂದೇಶ ನೀಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಹಮ್ಮಿಕೊಂಡಿರುವ ಅಭಿಯಾನವನ್ನು ಇಂದು ಬೆಂಗಳೂರಿನ ಪ್ರೀಡಂ ಪಾರ್ಕ್‌‌ನಲ್ಲಿ ಎಐಡಿಎಸ್‌ಒ ರಾಜ್ಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಎಐಡಿಎಸ್‌ಒ ಅಧ್ಯಕ್ಷರಾದ ಕೆ.ಎಸ್.ಅಶ್ವಿನಿ, “ಎನ್.ಇ.ಪಿ.ಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಕರ್ನಾಟಕ ಸರ್ಕಾರ ನಾಲ್ಕು ವರ್ಷದ ಪದವಿ ಕೋರ್ಸ್ ಅನ್ನು ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಜಾರಿ ಮಾಡಿತು. ಆದರೆ, ಪರೀಕ್ಷೆಗಳಿಗೆ ಇನ್ನು ಒಂದು ತಿಂಗಳು ಮಾತ್ರ ಉಳಿದಿದೆ ಎಂದಾಗಲೂ ಸರ್ಕಾರ ಮತ್ತು ವಿವಿಗಳು ನೂತನ ಕೋರ್ಸ್‌ಗೆ ಪೂರಕವಾದ ಪಠ್ಯಕ್ರಮ, ಎಲ್ಲ ವಿಷಯಗಳಿಗೂ ಸಂಬಂಧಪಟ್ಟಂತೆ ಪಠ್ಯಪಸ್ತಕಗಳು ತಯಾರಿ ಮಾಡಿರಲಿಲ್ಲ” ಎಂದು ವಿವಾದಿಸಿದರು.

“ಬೋಧಕರ ಕೊರತೆ, ಪಾಠ ಮಾಡಲು ಸಾಮಗ್ರಿಗಳ ಕೊರತೆ, ತರಗತಿಗಳ ಕೊರತೆಯಿಂದಾಗಿ, ಯಾವುದೇ ಸಮಗ್ರ ರೀತಿಯ ಅಧ್ಯಾಯಗಳು ನಡೆದಿರಲಿಲ್ಲ. ಈ ಹಠಾತ್ ಹೇರಿಕೆಯು ರಾಜ್ಯದ ಪದವಿ ಶಿಕ್ಷಣದಲ್ಲಿ ಅತ್ಯಂತ ಗೊಂದಲ ಹಾಗೂ ಸಮಸ್ಯೆಗಳನ್ನು ಸೃಷ್ಟಿಸಿದೆ. ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳ ಭವಿಷ್ಯ ಈಗ ಅಂಧಕಾರದಲ್ಲಿ ಇದೆ” ಎಂದು ಹೇಳಿದರು.

ಇದನ್ನೂ ಓದಿರಿ: ವಿಶೇಷ ವರದಿ: ಬಿಜೆಪಿ ಅವಧಿಯಲ್ಲಿ ಪರೀಕ್ಷಾ ಅಕ್ರಮ, ಎಡವಟ್ಟುಗಳು & ಶೈಕ್ಷಣಿಕ ಅವ್ಯವಸ್ಥೆ

ನಂತರದಲ್ಲಿ ಪುಸ್ತಕ ಬಿಡುಗಡೆ ಮಾಡಿ ಮಾತಾಡಿದ ರಾಜ್ಯ ಕಾರ್ಯದರ್ಶಿ ಅಜಯ್ ಕಾಮತ್, “ಎನ್.ಇ.ಪಿ.ಯು ಶಿಕ್ಷಣದ ಖಾಸಗೀಕರಣಕ್ಕೆ ಹಾಗೂ ವ್ಯಾಪಾರೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತ, ಅದಕ್ಕೆ ಪೂರಕವಾದ ಪ್ರಸ್ತಾವನೆಗಳನ್ನು ನೀಡಿದೆ. ಉದಾ: ‘ಶಾಲೆಗಳ ವಿಲೀನ’ದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಸ್ತಾವನೆ ಎನ್.ಇ.ಪಿ ಯಲ್ಲಿದೆ” ಎಂದು ಎಚ್ಚರಿಸಿದರು.

“ಈ ನೀತಿಯು ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣ, ವಾಣಿಜ್ಯೀಕರಣ ಹಾಗೂ ಕೇಂದ್ರೀಕರಣದ ನೀಲಿನಕ್ಷೆಯಾಗಿದೆ. ಮಹಾನ್ ವ್ಯಕ್ತಿಗಳ, ಹೋರಾಟಗಾರರ ತ್ಯಾಗ ಬಲಿದಾನಗಳಿಂದ ದೊರಕಿರುವ ಶಿಕ್ಷಣವು ಕೆಲವೇ ಜನರ ಸ್ವತ್ತಾಗಲು ನಾವು ವಿದ್ಯಾರ್ಥಿಗಳು ಬಿಡಬಾರದು. ಇಂತಹ ಕರಾಳ ನೀತಿಗಳನ್ನು ವಿರೋಧಿಸಿ, ಸಾರ್ವಜನಿಕ ಶಿಕ್ಷಣ ಉಳಿಸಲು ಪ್ರಬಲ ಆಂದೋಲನ ಬೆಳೆಸಬೇಕು” ಎಂದು ಮನವಿ ಮಾಡಿದರು.

ಬೆಂಗಳೂರಿನ ಜಿಲ್ಲಾ ಅಧ್ಯಕ್ಷರಾದ ಅಭಯ ದಿವಾಕರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...