Homeಚಳವಳಿದಲಿತ-ದಮನಿತರನ್ನು ಶಿಕ್ಷಣದಿಂದ ಹೊರಗಿಡುವ ಹುನ್ನಾರ: ಸ್ಕಾಲರ್‌ಶಿಪ್ ನಿಲ್ಲಿಸಿದ ಕೇಂದ್ರದ ಕ್ರಮಕ್ಕೆ AIFRTE ಖಂಡನೆ

ದಲಿತ-ದಮನಿತರನ್ನು ಶಿಕ್ಷಣದಿಂದ ಹೊರಗಿಡುವ ಹುನ್ನಾರ: ಸ್ಕಾಲರ್‌ಶಿಪ್ ನಿಲ್ಲಿಸಿದ ಕೇಂದ್ರದ ಕ್ರಮಕ್ಕೆ AIFRTE ಖಂಡನೆ

- Advertisement -
- Advertisement -

ಕೇಂದ್ರ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ನಿಲ್ಲಿಸಿರುವುದು ದಲಿತ-ದಮನಿತರನ್ನು ಶಿಕ್ಷಣದಿಂದ ಹೊರಗಿಡುವ ಹುನ್ನಾರ ಎಂದು ಶಿಕ್ಷಣದ ಹಕ್ಕಿಗಾಗಿ ಅಖಿಲ ಭಾರತ ವೇದಿಕೆ (AIFRTE) ಅಭಿಪ್ರಾಯಪಟ್ಟಿದೆ.

ಎಂಟು ಲಕ್ಷ ಆದಾಯ ಹೊಂದಿರುವ ಮೇಲ್ಜಾತಿ ಕುಟುಂಬಗಳಿಗೆ ‘ಮೀಸಲಾತಿ’ ನೀಡಿದ ಕೇಂದ್ರ ಸರ್ಕಾರವು, ಎರಡೂವರೆ ಲಕ್ಷಕ್ಕಿಂತಲೂ ಕಡಿಮೆ ವಾರ್ಷಿಕ ಆದಾಯ ಹೊಂದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಸಂಪೂರ್ಣವಾಗಿ ನಿಲ್ಲಿಸಿರುವುದನ್ನು ಒಪ್ಪುವುದಿಲ್ಲ ಎಂದಿದೆ.

ಶಿಕ್ಷಣ ಹಕ್ಕು ಕಾಯ್ದೆ – 2009 ಅಡಿಯಲ್ಲಿ 8 ನೇ ತರಗತಿಯ ವರೆಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಉಚಿತವಾಗಿರುವ ಕಾರಣ ವಿದ್ಯಾರ್ಥಿ ವೇತನ ನಿಲ್ಲಿಸುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದು, ಐತಿಹಾಸಿಕವಾಗಿ ತುಳಿತಕ್ಕೊಳಗಾದ ಸಮುದಾಯಗಳ ಬಡ ಕುಟುಂಬಗಳಿಂದ ಬರುವ ಮಕ್ಕಳ ಶಿಕ್ಷಣದ ಹಕ್ಕಿನ ಮೇಲಿನ ದಾಳಿಯಾಗಿದೆ. ಶಾಲಾ ಸಮವಸ್ತ್ರ, ಪಠ್ಯಪುಸ್ತಕಗಳ ಇನ್ನಿತರೆ ಖರ್ಚುಗಳನ್ನು ತೋಗಿಸಲು ಈ ವಿದ್ಯಾರ್ಥಿವೇತನಗಳು ಮುಖ್ಯವಾಗಿದ್ದವು. ಈಗ ವಿದ್ಯಾರ್ಥಿ ವೇತನವನ್ನು ನಿಲ್ಲಿಸಿರುವ ಕಾರಣದಿಂದ ಅವರು ಶಿಕ್ಷಣದಿಂದ ವಂಚಿತರಾಗಿ ಬಾಲ ಕಾರ್ಮಿಕರಾಗಿ ದುಡಿಯುವ ನಿಟ್ಟಿನಲ್ಲಿ ಅವರನ್ನು ದೂಡಲಾತ್ತಿದೆ ಎಂದು AIFRTE ಅಧ್ಯಕ್ಷ ಜಗಮೋಹನ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ.

ಇಲ್ಲಿಯವರೆಗೂ, ಈ ವಿದ್ಯಾರ್ಥಿವೇತನದ ಒಟ್ಟು ಮೊತ್ತವನ್ನು 75-25ರ ಅನುಪಾತದಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಭರಿಸುತ್ತಿದ್ದವು. ರಾಜ್ಯಗಳೊಟ್ಟಿಗೆ ಚರ್ಚಿಸದೆಯೇ ತೆಗೆದುಕೊಳ್ಳಲಾಗಿರುವ ಈ ನಿರ್ಧಾರವನ್ನು ಈಗ ರಾಜ್ಯ ಸರ್ಕಾರಗಳು ಒಪ್ಪಲೇಬೇಕಾದ ಪರಿಸ್ಥಿತಿಯನ್ನು ನಿರ್ಮಿಸಲಾಗಿದೆ. ಇದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದಿದ್ದಾರೆ.

ಈಗಾಗಲೇ ಸರ್ಕಾರಿ ಶಾಲೆಗಳಿಗೆ ಮಕ್ಕಳೇ ಬರುತ್ತಿಲ್ಲ ಎಂದು ನಂಬಿಸಿ, ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ, ಮುಚ್ಚುವ ಕಾರ್ಯತಂತ್ರವು ದೇಶದೆಲ್ಲೆಡೆ ಜಾರಿಯಲ್ಲಿದೆ. ವಿದ್ಯಾರ್ಥಿವೇತನವನ್ನು ನಿಲ್ಲಿಸಲಾಗುತ್ತಿರುವ ಕಾರಣ ಮಕ್ಕಳು ಶಾಲೆಗಳಿಗೆ ಬರಲು ಅಸಾಧ್ಯವಾದಾಗ, ಕನಿಷ್ಠ ದಾಖಲಾತಿಯೂ ಆಗುತ್ತಿಲ್ಲವೆಂದು ನೆಪವೊಡ್ಡಿ ನೆರೆಹೊರೆಯ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಿ ಅಥವಾ ಸಂಪೂರ್ಣವಾಗಿ ಮುಚ್ಚಿ, ಸರ್ಕಾರಿ ಶಾಲೆಗಳ ಆಸ್ತಿಗಳನ್ನೂ, ಜಾಗವನ್ನು ಸೇರಿದಂತೆ ಒಟ್ಟಿನಲ್ಲಿ ಇಡೀ ಶಿಕ್ಷಣ ಕ್ಷೇತ್ರವನ್ನೇ ಖಾಸಗಿಯವರ ಮಡಿಲಿಗೆ ಹಾಕುವುದು ಇದರ ಹಿಂದಿನ ಹುನ್ನಾರ ಎಂದು AIFRTEಯ ವಕ್ತಾರರಾದ ಪ್ರೊ. ಮಧು ಪ್ರಸಾದ್ ಅಭಿಪ್ರಾಯ ಪಟ್ಟಿದ್ದಾರೆ.

ಭಾರತ ಸರ್ಕಾರವು ಈ ಕೂಡಲೇ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕೆಂದು ಆಗ್ರಹಿಸುತ್ತೇವೆ. ಅಲ್ಲದೇ, ಒಂದರಿಂದ ಎಂಟನೇ ತರಗತಿಯವರೆಗೆ ನೀಡಲಾಗುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು ಸಧ್ಯದ ಹಣದುಬ್ಬರವನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿಸಬೇಕು ಎಂದು ಈ ಮೂಲಕ ಆಗ್ರಹಿಸುತ್ತೇವೆ ಎಂದು ಅವರು ಹೇಳಿದ್ದರೆ.

ಇದನ್ನೂ ಓದಿ: NDTV ರಾಜೀನಾಮೆ ಬೆನ್ನಲ್ಲೆ ಯೂಟ್ಯೂಬ್ ಚಾನೆಲ್ ತೆರೆದ ರವೀಶ್ ಕುಮಾರ್: ಈಗಾಗಲೇ 10 ಲಕ್ಷದಷ್ಟು ಚಂದಾದಾರರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...