ದೇಶದಲ್ಲಿ ಕೊರೊನಾ ಜೊತೆ ಜೊತೆಗೆ ಭೀತಿ ಸೃಷ್ಟಿಸಿರುವ ಕಪ್ಪು ಶಿಲೀಂಧ್ರ (ಬ್ಲಾಕ್ ಫಂಗಸ್) ಸೋಂಕಿಗೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಚಿಕಿತ್ಸಾ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.
ಮಹಾರಾಷ್ಟ್ರ, ಗುಜರಾತ್, ಕರ್ನಾಟಕ, ಉತ್ತರಾಖಂಡ, ತೆಲಂಗಾಣ, ಒಡಿಶಾ, ಮಧ್ಯಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ವರದಿಯಾಗಿವೆ.
ಬ್ಲಾಕ್ ಫಂಗಸ್ ಅಥವಾ ಕಪ್ಪು ಶಿಲೀಂಧ್ರ ಎಂದರೇನು?
ಬ್ಲಾಕ್ ಫಂಗಸ್ ಅಥವಾ ಕಪ್ಪು ಶಿಲೀಂಧ್ರವು ಶಿಲೀಂಧ್ರಗಳ ಸೋಂಕಿನಿಂದ ಉಂಟಾಗುವ ಒಂದು ಸಮಸ್ಯೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ರಾಜ್ಯದ 97 ಜನರಲ್ಲಿ ಬ್ಲಾಕ್ ಫಂಗಸ್ ಪತ್ತೆ, ನಾಲ್ವರು ಬಲಿ- ಸಚಿವ ಸುಧಾಕರ್
ಕಪ್ಪು ಶಿಲೀಂಧ್ರಕ್ಕೆ ಕಾರಣವೇನು?
ಈ ಕಾಯಿಲೆಯು ಮ್ಯೂಕೋರ್ಮೈಸೆಟ್ಸ್ (mucormycetes) ಎಂದು ಕರೆಯಲ್ಪಡುವ ಸೂಕ್ಷ್ಮ ಜೀವಿಗಳ ಗುಂಪಿನಿಂದ ಉಂಟಾಗುತ್ತದೆ. ಈ ಸೂಕ್ಷ್ಮ ಜೀವಿಗಳು ಪರಿಸರದಲ್ಲಿ ನೈಸರ್ಗಿಕವಾಗಿ ಇರುತ್ತವೆ. ಹೆಚ್ಚಾಗಿ ಮಣ್ಣಿನಲ್ಲಿ ಮತ್ತು ಕೊಳೆಯುತ್ತಿರುವ ಎಲೆಗಳು, ಕಾಂಪೋಸ್ಟ್ ಮತ್ತು ರಾಶಿಗಳಂತಹ ವಸ್ತುಗಳಲ್ಲಿ ಕಂಡುಬರುತ್ತವೆ.
ಚರ್ಮದಲ್ಲಿ ಗಾಯ, ಸುಟ್ಟಗಾಯ ಇತರೆ ಚರ್ಮದ ಮೂಲಕ ಈ ಸೋಂಕು ದೇಹದ ಒಳಗೆ ಪ್ರವೇಶಿಸುತ್ತದೆ. ಅಲ್ಲದೆ ಗಾಳಿಯ ಮುಖಾಂತರವೂ ಇದು ಹರಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಬಳಿಕ ಇದ ಚರ್ಮದ ಮೇಲೆ ಬೆಳೆದು, ಸೋಂಕಿತರಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ ಎನ್ನಲಾಗಿದೆ.
ಇದನ್ನೂ ಓದಿ: ‘ಎಚ್ಚರಿಕೆ; ಬೇಕಾಬಿಟ್ಟಿ ಬಿಸಿ ನೀರಿನ ಆವಿ (ಸ್ಟೀಮ್) ಪಡೆಯದಿರಿ’-ತಮಿಳುನಾಡು ವೈದ್ಯಕೀಯ ಸಚಿವ
ಕಪ್ಪು ಶಿಲೀಂಧ್ರವನ್ನು ಹೇಗೆ ಹಿಡಿಯುತ್ತಾರೆ?
ಕೊರೊನಾದಿಂದ ಚೇತರಿಸಿಕೊಳ್ಳುತ್ತಿರುವ ಅಥವಾ ಚೇತರಿಸಿಕೊಂಡ ರೋಗಿಗಳಲ್ಲಿ ಈ ರೋಗವನ್ನು ಕಂಡುಹಿಡಿಯಲಾಗುತ್ತಿದೆ. ಇದಲ್ಲದೆ, ಮಧುಮೇಹ ಮತ್ತು ಅವರ ರೋಗ ನಿರೋಧಕ ಶಕ್ತಿ ಸರಿಯಾಗಿ ಕಾರ್ಯನಿರ್ವಹಿಸದ ಯಾರಾದರೂ ಈ ಸೋಂಕಿಗೆ ತುತ್ತಾಗಬಲ್ಲರು.
ಬ್ಲಾಕ್ ಫಂಗಸ್‌ಗೆ ಚಿಕಿತ್ಸೆಗೆ ಡೆಕ್ಸಮೆಥಾಸೊನ್‌ನಂತಹ (dexamethasone) ಔಷಧಿಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: ಈ ಊರಿನಲ್ಲಿ ಮರವೇ ಕೊರೊನಾ ಕೇಂದ್ರ, ಕೊಂಬೆಗಳಲ್ಲಿ ನೇತಾಡುತ್ತವೆ ಗ್ಲೂಕೋಸ್ ಬಾಟಲ್‌ಗಳು!


