Homeಮುಖಪುಟಜನವರಿ 8 ರಂದು ’ಗ್ರಾಮೀಣ ಭಾರತ ಬಂದ್‌’ಗೆ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನಿರ್ಧಾರ..

ಜನವರಿ 8 ರಂದು ’ಗ್ರಾಮೀಣ ಭಾರತ ಬಂದ್‌’ಗೆ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನಿರ್ಧಾರ..

- Advertisement -
- Advertisement -

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯು (ಎಐಕೆಎಸ್‌ಸಿಸಿ) ಜನವರಿ 8 ರಂದು ಗ್ರಾಮೀಣ ಭಾರತ್ ಬಂದ್‌ ಆಚರಿಸಲು ಕರೆ ನೀಡಿದೆ. 25 ರಾಜ್ಯಗಳ ರೈತ ಸಂಘಟನೆಗಳು ಏಕೀಕೃತ ಆಂದೋಲನವು ರೈತ ಸಮುದಾಯದ ಹಕ್ಕುಗಳಿಗಾಗಿ ಈ ಬಂದ್‌ ಆಚರಿಸಲು ನಿರ್ಧರಿಸಿವೆ.

ದೆಹಲಿಯಲ್ಲಿ ನಡೆದ 25 ರಾಜ್ಯಗಳ 800 ಪ್ರತಿನಿಧಿಗಳು ಭಾಗವಹಿಸಿದ್ದ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿಯ (ಎಐಕೆಎಸ್‌ಸಿಸಿ) 3 ನೇ ರಾಷ್ಟ್ರೀಯ ಸಮಾವೇಶವು ಈ ನಿರ್ಧಾರವನ್ನು ಕೈಗೊಂಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ರೈತ ಮುಖಂಡರು ತಿಳಿಸಿದ್ದಾರೆ.

ಕೇಂದ್ರದ ರೈತ ವಿರೋಧಿ ನೀತಿಗಳು ಮತ್ತು ರೈತರ ಹಕ್ಕೊತ್ತಾಯಗಳನ್ನು ಕಡೆಗಣಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಷ್ಕ್ರಿಯತೆಯನ್ನು ವಿರೋಧಿಸಿ ಬಂದ್‌ ಆಚರಿಸಲಾಗುತ್ತಿದೆ ಎಂದು ಎಐಕೆಎಸ್‌ಸಿಸಿ ತಿಳಿಸಿದೆ.

ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಅಂದರೆ ಸ್ವಾಮಿನಾಥನ್‌ ಆಯೋಗದ ಶಿಫಾರಸ್ಸಿನಂತೆ ಸಿ2 + 50% ಖಾತರಿಪಡಿಸುವಲ್ಲಿನ ವಿಫಲತೆ, ಋಣಭಾರದಿಂದ ಸ್ವಾತಂತ್ರ್ಯವನ್ನು ಒದಗಿಸುವಲ್ಲಿ, ಬರ, ಪ್ರವಾಹದ ಸಂದರ್ಭದಲ್ಲಿ ಪರಿಣಾಮಕಾರಿ ಬೆಳೆ ವಿಮೆ ಮತ್ತು ವಿಪತ್ತು ಪರಿಹಾರವನ್ನು ಒದಗಿಸುವಲ್ಲಿ ಸರ್ಕಾರದ ವಿಫಲತೆಯನ್ನು ರೈತ ಮುಖಂಡರು ಎತ್ತಿ ತೋರಿಸಿದ್ದಾರೆ.

ಅರಣ್ಯ ಹಕ್ಕುಗಳ ಕಾಯ್ದೆ, ಎಲ್‌ಎಆರ್‌ಆರ್ ಕಾಯ್ದೆ 2013 ರ ಅನುಷ್ಠಾನ, ಮತ್ತು ಬುಡಕಟ್ಟು ಜನರು ಮತ್ತು ರೈತರನ್ನು ಬಲವಂತವಾಗಿ ಸ್ಥಳಾಂತರಿಸುವುದರ ವಿರುದ್ಧ, ಮುಕ್ತ ವ್ಯಾಪಾರ ಒಪ್ಪಂದಗಳ (ಆರ್‌ಸಿಇಪಿ) ಕಾಯ್ದೆ, ಕೃಷಿ ಉತ್ಪನ್ನಗಳು ಮತ್ತು ಕೃಷಿ ಕ್ಷೇತ್ರದ ಮೇಲೆ ನಿಯಂತ್ರಣ ಸಾಧಿಸಲು ಹೊರಟ ಬಹುರಾಷ್ಟ್ರೀಯ ಕಂಪನಿಗಳಿಗೆ ಅವಕಾಶ ಮಾಡಿಕೊಡುವುದನ್ನು ರೈತ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

ಕೃಷಿ ಕಾರ್ಮಿಕರ ಮತ್ತು ಷೇರುದಾರರ ಹಕ್ಕುಗಳಿಗಾಗಿ ಸಮಗ್ರ ಶಾಸನ, ಬೆಳೆ ವಿಮೆ ಮತ್ತು ವಿಪತ್ತು ಪರಿಹಾರವನ್ನು ಸಮರ್ಪಕವಾಗಿ ನೀಡಬೇಕು, ಜಮ್ಮು ಕಾಶ್ಮೀರದ ರೈತರು ಅನುಭವಿಸಿದ ನಷ್ಟಕ್ಕೆ ಪರಿಹಾರ ಒದಗಿಸಬೇಕು ಮತ್ತು ಗ್ರಾಮೀಣ ಕಾರ್ಯಪಡೆಗೆ 10,000 ರೂ ಮಾಶಾಸನ ನಿಗಧಿ ಮಾಡಬೇಕು ಎಂದು ಎಐಕೆಎಸ್‌ಸಿಸಿ ಒತ್ತಾಯಿಸಿದೆ.

ಅಲ್ಲದೇ ರೈತರಿಗೆ ಸಂಬಂಧಿಸಿದ 21 ವಿಷಯಗಳನ್ನು ಒಳಗೊಂಡ ರೈತರ ಚಾರ್ಟರ್ ಅನ್ನು ಸಮಾವೇಶದಲ್ಲಿ ಚರ್ಚಿಸಿ ಮಂಡಿಸಲಾಯಿತು ಎಂದು ಎಐಕೆಎಸ್‌ಸಿಸಿ ಸಂಚಾಲಕರಾದ ವಿ.ಎಂ.ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ರಾಜು ಶೆಟ್ಟಿ, ಹನ್ನನ್ ಮೊಲ್ಲಾ, ಮೇಧಾ ಪಟ್ಕರ್, ಅತುಲ್ ಅಂಜನ್, ಡಾ. ಆಶಿಶ್ ಮಿತ್ತಲ್, ಯೋಗೇಂದ್ರ ಯಾದವ್, ಡಾ.ಸುನಿಲಂ, ರಾಜಾರಾಮ್ ಸಿಂಗ್, ಡಾ. ದರ್ಶನ್ ಪಾಲ್, ಸತ್ಯವಾನ್, ಪ್ರತಿಭಾ ಶಿಂಧೆ, ಅವಿಕ್ ಸಹಾ ಮತ್ತು ಕಿರಣ್ ವಿಸ್ಸಾ ಮುಂತಾದವರು ಭಾಗವಹಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...