Homeಚಳವಳಿಬಾಗಲಕೋಟೆ ವಕೀಲೆ ಮೇಲಿನ ಅಮಾನುಷ ಹಲ್ಲೆಗೆ AILU ಖಂಡನೆ: ಅಡ್ವೋಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಜಾರಿಗೆ ಒತ್ತಾಯ

ಬಾಗಲಕೋಟೆ ವಕೀಲೆ ಮೇಲಿನ ಅಮಾನುಷ ಹಲ್ಲೆಗೆ AILU ಖಂಡನೆ: ಅಡ್ವೋಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಜಾರಿಗೆ ಒತ್ತಾಯ

- Advertisement -
- Advertisement -

ಬಾಗಲಕೋಟೆಯ ವಕೀಲೆ ಸಂಗೀತಾ ಶಿಕ್ಕೇರಿ ಮೆಲಿನ ಅಮಾನುಷ ಹಲ್ಲೆಯನ್ನು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ (AILU) ಖಂಡಿಸಿದ್ದು, ವಕೀಲರ ಮೇಲಿನ ಹಲ್ಲೆ ತಡೆಯಲು ರಾಜ್ಯ ಸರ್ಕಾರ ಅಡ್ವೋಕೇಟ್ಸ್ ಪ್ರೊಟೆಕ್ಷನ್ ಆಕ್ಟ್ ಜಾರಿಗೆ ತರಬೇಕೆಂದು ಒತ್ತಾಯಿಸಿದೆ.

AILU ರಾಜ್ಯ ಕಾರ್ಯದರ್ಶಿ ಶ್ರೀನಿವಾಸ್ ಕುಮಾರ್‌ ಮಾತನಾಡಿ, “ಬಾಗಲಕೋಟೆಯಲ್ಲಿ ವಕೀಲೆಯೊಬ್ಬರ ಮೇಲೆ ಬಿಜೆಪಿ ಬೆಂಬಲಿಗನೊಬ್ಬ ಸಾರ್ವಜನಿಕವಾಗಿ ಹಲ್ಲೆ ಮಾಡಿರುವುದನ್ನು ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ತೀವ್ರವಾಗಿ ಖಂಡಿಸುತ್ತದೆ. ಈ ಕೃತ್ಯವನ್ನು ಇಡೀ  ವಕೀಲ ಸಮೂಹ ಖಂಡಿಸಬೇಕು” ಎಂದು ಹೇಳಿದ್ದಾರೆ.

ಇತ್ತೀಚೆಗೆ ವಕೀಲರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿವೆ. ಕೆಲವೆಡೆ ಕೊಲೆಗಳು ಸಹ ನಡೆದಿವೆ. ಪ್ರತಿನಿತ್ಯ ಸಾರ್ವಜನಿಕ ಸೇವೆಗಾಗಿ ದುಡಿಯುವ ವಕೀಲರಿಗೆ ಭದ್ರತೆ ಇಲ್ಲವಾಗಿರುವುದು ದುರಂತ. ಹಾಗಾಗಿ ವೈದ್ಯರ ರಕ್ಷಣೆಗೆ ಕಾನೂನು ಇರುವ ಹಾಗೆ ವಕೀಲರ ರಕ್ಷಣೆಗೂ ಸರ್ಕಾರ ಕಾನೂನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಆಸ್ತಿ ವಿವಾದದ ಹಲವು ಪ್ರಕರಣಗಳಲ್ಲಿ ಬಡವರು, ಅಶಕ್ತರ ಪರವಾಗಿ ವಕಾಲತ್ತು ವಹಿಸಬಾರದೆಂಬ ಬೆದರಿಕೆಗಳು ಮಾಫಿಯಾಗಳಿಂದ ಬರುತ್ತಿರುತ್ತವೆ. ಆಗ ವಕೀಲುರ ಹಿಂದೆ ಸರಿಯಲು ಸಾಧ್ಯವಿಲ್ಲ. ವಕೀಲರು ಬಡಜನರ ಪರ ವಕಾಲತ್ತು ವಹಿಸಿ ನ್ಯಾಯ ಕೊಡಿಸಿದಾಗ ಹತಾಶೆಯಿಂದ ಮಾಫಿಯಾಗಳು ದಾಳಿ ಮಾಡುವುದುಂಟು. ಹಾಗಾಗಿ ವಕೀಲರ ಮೇಲಿನ ಹಲ್ಲೆಗೆ ಸೂಕ್ತ ಶಿಕ್ಷೆ ಇರುವಂತಹ, ಸಮರ್ಪಕ ಭದ್ರತೆ ಒದಗಿಸುವಂತಹ ಕಾನೂನು ಅಗತ್ಯವಾಗಿದೆ ಎಂದು ಶ್ರೀನಿವಾಸ್ ಕುಮಾರ್‌ ಅಭಿಪ್ರಾಯಪಟ್ಟರು.

ಬಾಗಲಕೋಟೆಯ ಮಹಿಳಾ ವಕೀಲೆ ಸಂಗೀತಾ ಶಿಕ್ಕೇರಿ ಮೇಲೆ ಮಹಾಂತೇಶ್ ಚೋಳದಗುಡ್ಡ ಎಂಬ ವ್ಯಕ್ತಿ ಸಾರ್ವಜನಿಕರ ಎದುರೆ ಕಾಲಿನಿಂದ ಒದ್ದು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ತೀವ್ರ ಖಂಡನೆಗಳು ವ್ಯಕ್ತವಾಗಿವೆ.

ಬಿಜೆಪಿ ಮುಖಂಡ ರಾಜು ನಾಯ್ಕರ್ ಎಂಬುವವರ ಕುಮ್ಮಕ್ಕಿನಿಂದ ಬಾಗಲಕೋಟೆಯ ವಿನಾಯಕ ನಗರದ ನಿವಾಸಿ ಮಹಾಂತೇಶ್ ಚೋಳದಗುಡ್ಡ ಎಂಬುವವರು ನನ್ನ ಮತ್ತು ನನ್ನ ಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಹಲ್ಲೆಯಲ್ಲಿ ನನ್ನ ತಲೆ, ಎದೆ ಮತ್ತು ಕಾಲಿಗೆ ಪೆಟ್ಟು ಬಿದ್ದಿದೆ ಎಂದು ಸಂತ್ರಸ್ತ ವಕೀಲೆ ಸಂಗೀತ ಶಿಕ್ಕೇರಿ ಹೇಳಿದ್ದಾರೆ.

ಬಾಗಲಕೋಟೆಯ ವಿನಾಯಕ ನಗರದ ಮೂರನೇ ಕ್ರಾಸ್‌ನಲ್ಲಿ ವಕೀಲೆ ಸಂಗೀತ ಶಿಕ್ಕೇರಿರವರ ಮನೆ ಇದ್ದು, ಅವರ ಕುಟುಂಬದವರಲ್ಲಿ ಮನೆಯ ಯಾರಿಗೆ ಸೇರಬೇಕು ಎಂಬ ವಿವಾದ ಉಂಟಾಗಿ ಪ್ರಕರಣ ಕೋರ್ಟ್‌ ಮೆಟ್ಟಿಲೇರಿತ್ತು. ಹೀಗಿರುವಾಗಿ ಇಂದು ಬೆಳಿಗ್ಗೆ ಕೆಲವರು ಜೆಸಿಬಿ ತಂದು ಮನೆ ಕೆಡವಲು ಯತ್ನಿಸಲಾಗಿದೆ. ಆ ಸಂದರ್ಭದಲ್ಲಿ ವಕೀಲೆ ಸಂಗೀತಾ ಶಿಕ್ಕೇರಿಯವರು ಪಕ್ಕದ ಮನೆಯವರ ಜೊತೆ ಏಕೆ ಪೊಲೀಸರಿಗೆ ನಮ್ಮ ಮನೆ ತೋರಿಸಿದಿರಿ ಎಂದು ಜಗಳ ಆಡಿದ್ದಾರೆ. ಆ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾಜು ನಾಯ್ಕರ್ ಎಂಬುವವರ ಕುಮ್ಮಕ್ಕಿನಿಂದ ಮಹಾಂತೇಶ್ ಚೋಳದಗುಡ್ಡ ತಮ್ಮ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ವಕೀಲೆ ದೂರಿದ್ದಾರೆ.

ಇದನ್ನೂ ಓದಿ: ಬಿಜೆಪಿ ಮುಖಂಡನ ಕುಮ್ಮಕ್ಕು ಆರೋಪ: ಬಾಗಲಕೋಟೆಯಲ್ಲಿ ವಕೀಲೆ ಮೇಲೆ ಅಮಾನುಷ ಹಲ್ಲೆ

ಪ್ರಕರಣ ಕೋರ್ಟ್‌‌ನಲ್ಲಿದ್ದು, ಜಿಲ್ಲಾ ನ್ಯಾಯಾಧೀಶರು ತಡೆಯಾಜ್ಞೆ ನೀಡಿದ್ದರೂ ಸಹ ಕೆಲವರು ಕಾಂಪೌಂಡ್ ಕೆಡವಿದ್ದಾರೆ. ನೀರು ಮತ್ತು ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ ಎಂದು ಸಂಗೀತಾ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...