Homeಮುಖಪುಟರಾಷ್ಟ್ರ ರಾಜಕಾರಣದ ಗುರಿ: ಟಿಆರ್‌ಎಸ್ ಅನ್ನು ‘ಭಾರತ ರಾಷ್ಟ್ರ ಸಮಿತಿ’ಯನ್ನಾಗಿ ಪರಿವರ್ತಿಸಿದ ತೆಲಂಗಾಣ ಸಿಎಂ ಕೆಸಿಆರ್‌

ರಾಷ್ಟ್ರ ರಾಜಕಾರಣದ ಗುರಿ: ಟಿಆರ್‌ಎಸ್ ಅನ್ನು ‘ಭಾರತ ರಾಷ್ಟ್ರ ಸಮಿತಿ’ಯನ್ನಾಗಿ ಪರಿವರ್ತಿಸಿದ ತೆಲಂಗಾಣ ಸಿಎಂ ಕೆಸಿಆರ್‌

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇ‌ಖರ್‌ ರಾವ್‌‌ ಅವರ ನಾಯಕತ್ವದ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್‌) ರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುವ ಮಹತ್ವಾಕಾಂಕ್ಷೆಯಿಂದ ‘ಭಾರತ್‌ ರಾಷ್ಟ್ರ ಸಮಿತಿ’ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದು, ಟಿಆರ್‌ಎಸ್‌ ಅನ್ನು ಅದರಲ್ಲಿ ವಿಲೀನಗೊಳಿಸಿದ್ದಾರೆ.

ಟಿಆರ್‌ಎಸ್‌‌ 2000 ರಲ್ಲಿ ಪ್ರಾರಂಭವಾಗಿತ್ತು. ಇದೀಗ ಪಕ್ಷವನ್ನು ರಾಷ್ಟ್ರೀಯ ಮಟ್ಟದಲ್ಲಿ ಕಟ್ಟಲು ಪಕ್ಷದ ಸಮಾವೇಶದಲ್ಲಿ ಪಕ್ಷವನ್ನು ಭಾರತ್‌ ರಾಷ್ಟ್ರ ಸಮಿತಿಯಲ್ಲಿ ವಿಲೀನಗೊಳಿಸಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಮಾವೇಶದಲ್ಲಿ 280 ಕ್ಕೂ ಹೆಚ್ಚು ಪಕ್ಷದ ಕಾರ್ಯಕಾರಿ ಸದಸ್ಯರು, ಶಾಸಕರು ಮತ್ತು ಸಂಸದರು ಟಿಆರ್‌ಎಸ್ ಅನ್ನು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನೊಂದಿಗೆ ವಿಲೀನಗೊಳಿಸುವ ನಿರ್ಣಯವನ್ನು ಅಂಗೀಕರಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ತೆಲಂಗಾಣ: ಉಚಿತ ಮದ್ಯ ಮತ್ತು ಕೋಳಿ ವಿತರಿಸಿದ ಟಿಆರ್‌ಎಸ್ ನಾಯಕ!

ಮುಖ್ಯಮಂತ್ರಿ ಕೆಸಿಆರ್ ಶೀಘ್ರದಲ್ಲೇ ತಮ್ಮ ಪಕ್ಷದ ಭವಿಷ್ಯದ ಬಗ್ಗೆ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಅದು ವಹಿಸುವ ಪಾತ್ರಗಳನ್ನು ವಿಸ್ತರಿಸಲಿದ್ದಾರೆ. ಪಕ್ಷಕ್ಕೆ ಮರು ನಾಮಕರಣ ಮಾಡುವ ಸಮಾರಂಭದಲ್ಲಿ ಜೆಡಿಎಸ್‌ನ ನಾಯಕ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.

‘ಭಾರತ್‌ ರಾಷ್ಟ್ರ ಸಮಿತಿ’ ಪಕ್ಷವನ್ನು ಪ್ರಾರಂಭಿಸಿದ ತೆಲಂಗಾಣ ಭವನದಲ್ಲಿ ನಡೆದ ಸಮಾರಂಭದಲ್ಲಿ ಜೆಡಿಎಸ್‌ನ 20 ಶಾಸಕರು ಸಹ ಭಾಗವಹಿಸಿದ್ದರು. ಇಷ್ಟೆ ಅಲ್ಲದೆ ತಮಿಳುನಾಡಿನ ದಲಿತ ನಾಯಕ ತಿರುಮಾವಲವನ್‌ ಅವರ ಪಕ್ಷದ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ)ಯ ಸೇರಿದ ಇಬ್ಬರು ಸಂಸದರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಹೊಸ ಸಂಘಟನೆಯು ‘ವಿವಿಧ ಪ್ರಾದೇಶಿಕ ಪಕ್ಷಗಳ ಒಕ್ಕೂಟ’ ಆಗಿರುತ್ತದೆ, ಅದು ಆಯಾ ರಾಜ್ಯಗಳಲ್ಲಿ ಬಿಜೆಪಿ ವಿರುದ್ಧ ಹೋರಾಡುತ್ತದೆ ಎಂದು JD(S) ಕಾರ್ಯಕಾರಿಯೊಬ್ಬರು ಹೇಳಿದ್ದಾರೆ ಎಂದು PTI ಗೆ ತಿಳಿಸಿದ್ದಾರೆ. ಬಿಜೆಪಿಯ ವಿರುದ್ಧ ಒಗ್ಗಟ್ಟಿನ ರಂಗವನ್ನು ಹುಟ್ಟು ಹಾಕುವ ಆಲೋಚನೆ ಇತ್ತು. ಈ ಮೂಲಕ ಎಲ್ಲಾ ವಿವಿಧ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಮೀರಿ ಬೆಳೆಯಲು ಬಯಸುತ್ತವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಡೆಮಾಕ್ರಟಿಕ್ ಆಜಾದ್ ಪಕ್ಷ’: ಜಮ್ಮು ಕಾಶ್ಮೀರದಲ್ಲಿ ಗುಲಾಂ ನಬಿ ಆಜಾದ್‌ ನೇತೃತ್ವದ ಹೊಸ ಪಕ್ಷ

ತಿರುಮಾವಳವನ್ ಟ್ವೀಟ್ ಮಾಡಿ ರಾಷ್ಟ್ರಮಟ್ಟದ ರಾಜಕಾರಣಕ್ಕೆ ಗಮನ ಹರಿಸಿದ ಕೆಸಿಆರ್‌ ಅವರ ಪ್ರಯತ್ನಗಳಿಗಾಗಿ ಅಭಿನಂದಿಸಿದ್ದಾರೆ. ತಿರುಮಾವಳವನ್‌ ಅವರ ವಿಸಿಕೆ ಪಕ್ಷವು ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವ ಡಿಎಂಕೆಯ ಮಿತ್ರಪಕ್ಷವಾಗಿದೆ ಎಂಬುದು ಗಮನಾರ್ಹ ಸಂಗತಿಯಾಗಿದೆ.

2024ರ ಲೋಕಸಭೆ ಚುನಾವಣೆಗೆ ಪಕ್ಷವು ಹಲವು ರಾಜ್ಯಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಎಂದು ಟಿಆರ್‌ಎಸ್ ಮೂಲಗಳು ತಿಳಿಸಿವೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...