HomeUncategorizedಏರ್ ಇಂಡಿಯಾ ಪತನ: 90 ದಿನಗಳಲ್ಲಿ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿ ರಚನೆ

ಏರ್ ಇಂಡಿಯಾ ಪತನ: 90 ದಿನಗಳಲ್ಲಿ ವರದಿ ಸಲ್ಲಿಸಲು ಉನ್ನತ ಮಟ್ಟದ ಸಮಿತಿ ರಚನೆ

- Advertisement -
- Advertisement -

ಅಹಮದಾಬಾದ್:  ಏರ್ ಇಂಡಿಯಾ ಅಪಘಾತದ ಕುರಿತು ತನಿಖೆ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸಲಾಗಿದ್ದು, ಅದು 3 ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಕೇಂದ್ರ ಸಚಿವ ಮುರಳೀಧರ್ ಮೋಹನ್ ತಿಳಿಸಿದ್ದಾರೆ.

ಏರ್ ಇಂಡಿಯಾ ವಿಮಾನವು ಕಳೆದ ಗುರುವಾರ (ಜೂ.12) ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಪತನಗೊಂಡಿತ್ತು. ಈ ದುರಂತದಲ್ಲಿ 241 ಪ್ರಯಾಣಿಕರು ಮತ್ತು ದುರಂತ ಸ್ಥಳದಲ್ಲಿದ್ದ ಹಲವರು ಜನರು ಸಾವನ್ನಪ್ಪಿದ ಕಾರಣ ಈ ಸಮಿತಿಯನ್ನು ರಚಿಸಲಾಗಿದೆ ಎಂದು ಅವರು ಇಂದು (ಮಂಗಳವಾರ) ಮಾಹಿತಿ ನೀಡಿದ್ದಾರೆ.

ಈ ವಿಮಾನದ ಸುರಕ್ಷತೆ ಕುರಿತು ಪರಿಶೀಲನೆ ನಡೆಸಲಾಗಿದ್ದು, ಇಲ್ಲಿಯವರೆಗೆ ಯಾವುದೇ ಸಮಸ್ಯೆಯೂ ಕಂಡುಬಂದಿಲ್ಲ. ಏರ್ ಇಂಡಿಯಾವು ಒಟ್ಟು ಇಂತಹ 34 ವಿಮಾನಗಳ ಕಾರ್ಯಾಚರಣೆ ನಡೆಸುತ್ತದೆ.  ಈ ವಿಮಾನದ ಬ್ಲಾಕ್ ಬಾಕ್ಸ್ ದೊರೆತಿದ್ದು, ಅದರ ದತ್ತಾಂಶದ ವಿಶ್ಲೇಷಣೆಯು ಅಪಘಾತಕ್ಕೆ ಏನು ಕಾರಣವೆಂಬ ಸುಳಿವು ನೀಡಲಿದೆ ಎಂದು ಸಚಿವರು ಭರವಸೆ ವ್ಯಕ್ತಪಡಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಈ ವಿಮಾನವು ಗುಜರಾತಿನ ಸರದಾರ್  ವಲ್ಲಭ ಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಅದ ಸ್ವಲ್ಪ ಸಮಯದಲ್ಲಿಯೇ  ವೈದ್ಯಕೀಯ ಹಾಸ್ಟೆಲ್ ಕಟ್ಟಡಕ್ಕೆ ಅಪ್ಪಳಿಸಿತ್ತು. ಅಂದು 12 ಮಂದಿ ಸಿಬ್ಬಂದಿ ಸೇರಿದಂತೆ 230 ಪ್ರಯಾಣಿಕರನ್ನು ಈ ದುರಂತ ವಿಮಾನವು ಹೊತ್ತೊಯ್ಯುತ್ತಿತ್ತು.

ದುರ್ಘಟನೆಯಲ್ಲಿ ಒಬ್ಬ ಪ್ರಯಾಣಿಕ ಮಾತ್ರ ಬದುಕುಳಿದಿದ್ದು, ಅಪಘಾತ ಸ್ಥಳದಲ್ಲಿದ್ದ ಸುಮಾರು 29 ಮಂದಿ ಕೂಡ ಈ ದುರಂತದಲ್ಲಿ ಸಾವನ್ನಪ್ಪಿದ್ದರು. ಸುಟ್ಟು ಕರಕಲಾಗಿದ್ದ ಮೃತರ ಗುರುತು ಪತ್ತೆಗಾಗಿ ಕೆಲ ದಿನಗಳನ್ನು ತಗೆದುಕೊಂಡಿತ್ತು. ಸಂಬಂಧಿಕರ ಡಿಎನ್ಎ ಹೋಲಿಕೆ ಮಾಡಿ ಇಲ್ಲಿಯವರೆಗೆ ಸುಮಾರು 135  ಮೃತದೇಹಗಳನ್ನು ಗುರುತಿಸಲಾಗಿದೆ ಎಂದು ವರದಿಯಾಗಿದೆ.

‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅನುವು ಮಾಡಿಕೊಡಿ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...