Homeಮುಖಪುಟಏರ್‌ ಇಂಡಿಯಾ ಪತನ: ತಾನು ಬದುಕುಳಿದಿದ್ದು ಹೇಗೆಂದು ತಿಳಿಸಿದ ವಿಶ್ವಾಸ್

ಏರ್‌ ಇಂಡಿಯಾ ಪತನ: ತಾನು ಬದುಕುಳಿದಿದ್ದು ಹೇಗೆಂದು ತಿಳಿಸಿದ ವಿಶ್ವಾಸ್

- Advertisement -
- Advertisement -

ಅಹಮದಾಬಾದ್: ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಬದುಕುಳಿದಿದ್ದ ಏಕೈಕ ವ್ಯಕ್ತಿ ವಿಶ್ವಾಸ್ ಕುಮಾರ್ ರಮೇಶ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಅವರೊಂದಿಗೆ ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮೃತ ಸಹೋದರನ ಅಂತ್ಯಸಂಸ್ಕಾರದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

40 ವರ್ಷದ ಬ್ರಿಟಿಷ್ ಉದ್ಯಮಿಯಾಗಿರುವ ವಿಶ್ವಾಸ್, ಮಂಗಳವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದು, ತಾನು ಬದುಕುಳಿದಿದ್ದು ಹೇಗೆಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಶ್ವಾಸ್ ಅವರು ದೂರದರ್ಶನಕ್ಕೆ ನೀಡಿದ ಸಂದರ್ಶನದಲ್ಲಿ, ಅಹಮದಾಬಾದ್‌ನಿಂದ ಲಂಡನ್‌ನ ಗ್ಯಾಟ್‌ವಿಕ್‌ ವಿಮಾನ ನಿಲ್ದಾಣಕ್ಕೆ 9 ತಾಸುಗಳ ಪ್ರಯಾಣ ಮಾಡಬೇಕಾಗಿದ್ದ ವಿಮಾನವು ಟೇಕ್‌ಆಫ್‌ ಆದ ಕೆಲವೇ ಸೆಕೆಂಡ್‌ ಗಳಲ್ಲಿ ನಿಂತುಹೋಗಿತ್ತು (stalled) ಎಂದು ಹೇಳಿದ್ದರು.

ನನ್ನ ಆಸನ ಸಂಖ್ಯೆ 11ಎ, ವಿಮಾನದ ಎಡಭಾಗದಲ್ಲಿರುವ ತುರ್ತು ನಿರ್ಗಮನ ದ್ವಾರದ(ಎಮರ್ಜೆನ್ಸಿ ಡೋರ್) ಹತ್ತಿರವಿತ್ತು.  ಅದೃಷ್ಟವಶಾತ್, ನಾನು ಕುಳಿತಿದ್ದ ವಿಮಾನದ ಭಾಗವು ವಿಮಾನ ತುರ್ತು ಭೂಸ್ಪರ್ಶ ಮಾಡಿದ ನಂತರ ಹಾಸ್ಟೆಲ್ ಆವರಣದ ನೆಲಮಹಡಿಗೆ ಬಿದ್ದಿತು. ಅಲ್ಲಿ ವಿಮಾನದ ಬಾಗಿಲು ಮುರಿದಿರುವುದನ್ನು ನಾನು ನೋಡಿದೆ. ಆದರ ಮೂಲಕ ಹೊರಹೋಗಲು ಪ್ರಯತ್ನಿಸಬಹುದು ಎಂದು ನನಗೆ ನಾನೇ ಹೇಳಿಕೊಂಡೆ. ಕೊನೆಗೆ ನಾನು ವಿಮಾನದಿಂದ ಪಾರಾಗಿ ಹೊರಬಂದೆ ಎಂದು ವಿಶ್ವಾಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಮಾನ ಅಪಘಾತವಾದ ತಕ್ಷಣ ಸ್ಥಳೀಯರು ಚಿತ್ರೀಕರಿಸಿದ ವೈರಲ್ ವಿಡಿಯೋದಲ್ಲಿ ವಿಶ್ವಾಸ್ ಅವರು ಅಪಘಾತದಲ್ಲಿ ಗಾಯಗೊಂಡ ನಂತರ ಆಂಬ್ಯುಲೆನ್ಸ್ ಕಡೆಗೆ ನಡೆದುಕೊಂಡು ಹೋಗುತ್ತಿರುವುದು ಕಾಣುತ್ತದೆ.

ವಿಶ್ವಾಸ ಅವರ ಸಹೋದರ ಅಜಯ್ ಅವರ ಪಾರ್ಥಿವ ಶರೀರವನ್ನು ಡಿಎನ್‌ಎ ಪರೀಕ್ಷೆಯ ಮೂಲಕ ಗುರುತು ದೃಢಪಡಿಸಿದ ನಂತರ ಬುಧವಾರ ಮುಂಜಾನೆ ಕುಟುಂಬಕ್ಕೆ ಹಸ್ತಾಂತರಿಸಲಾಯಿತು ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಕೇಶ್ ಜೋಶಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ವಿಶ್ವಾಸ್ ಅವರ ಕುಟುಂಬವು ಈಗಾಗಲೇ ಇಂಗ್ಲೆಂಡಿನಿಂದ ಭಾರತಕ್ಕೆ ಬಂದಿಳಿದಿದೆ.  ವಿಶ್ವಾಸ್ ಅವರು ಚೇತರಿಸಿಕೊಂಡ ನಂತರ ಮಂಗಳವಾರ ಸಂಜೆ 7:30ಕ್ಕೆ ನಾವು ಅವರನ್ನುಬಿಡುಗಡೆಗೊಳಿಸಿದೆವು ಮತ್ತು ಅವರ ಸಹೋದರನ ಪಾರ್ಥಿವ ಶರೀರವನ್ನು ಡಿಎನ್‌ಎ ಹೊಂದಾಣಿಕೆಯಿಂದ ಗುರುತಿಸಿ, ನಂತರ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು ಎಂದು ಅವರು ಹೇಳಿದರು.

ದಿಯು ಕೇಂದ್ರಾಡಳಿತ ಪ್ರದೇಶದವರಾದ ವಿಶ್ವಾಸ್ ಮತ್ತು ಅಜಯ್ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಸ್ವಲ್ಪ ಸಮಯ ಕಳೆದ ನಂತರ ಲಂಡನ್‌ಗೆ ಹಿಂದಿರುಗುತ್ತಿದ್ದರು. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ ವಿಡಿಯೋದಲ್ಲಿ ದಿಯು ಜಿಲ್ಲೆಯ ಸ್ಮಶಾನಭೂಮಿಗೆ ತನ್ನ ಸಹೋದರನ ಪಾರ್ಥಿವ ಶರೀರವನ್ನು ವಿಶ್ವಾಸ್ ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗುತ್ತಿರುವುದು ಕಾಣುತ್ತದೆ.

ಅಜಯ್ ಅವರ ಅಂತ್ಯಸಂಸ್ಕಾರವನ್ನು ಬುಧವಾರ ಬೆಳಿಗ್ಗೆ ದಿಯುನಲ್ಲಿ ಅವರ ಕುಟುಂಬ ನಡೆಸಿತು ಮತ್ತು ವಿಶ್ವಾಸ್ ಕೂಡ ಅಲ್ಲಿ ಉಪಸ್ಥಿತರಿದ್ದರು ಎಂದು ಸ್ಥಳೀಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ಜೂನ್ 12ರಂದು ಮಧ್ಯಾಹ್ನ 1:39 ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 242 ಪ್ರಯಾಣಿಕರೊಂದಿಗೆ ಹೊರಟ ಕೆಲವೇ ಕ್ಷಣಗಳಲ್ಲಿ ಅಹಮದಾಬಾದ್‌ನ ವೈದ್ಯಕೀಯ ಕಾಲೇಜು ಸಂಕೀರ್ಣಕ್ಕೆ ಅಪ್ಪಳಿಸಿತು.

ಇಸ್ರೇಲ್-ಇರಾನ್ ಯುದ್ಧಕ್ಕೆ ಕಾರಣವೇನು? ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...