Homeಅಂತರಾಷ್ಟ್ರೀಯವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ವಾಯುಮಾಲಿನ್ಯ: ಕಳೆದ ವರ್ಷ ಭಾರತದಲ್ಲಿ 1.16 ಲಕ್ಷ ನವಜಾತ ಶಿಶುಗಳು ಮರಣ!

ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ

- Advertisement -
- Advertisement -

ಅತಿ ಹೆಚ್ಚಿನ ವಾಯುಮಾಲಿನ್ಯ ಸಮಸ್ಯೆಯಿಂದ 2019 ರಲ್ಲಿ, ಭಾರತ ಮತ್ತು ಆಫ್ರಿಕಾದಲ್ಲಿ ಸುಮಾರು 476,000 ನವಜಾತ ಶಿಶುಗಳು ಸಾವನ್ನಪ್ಪಿದ್ದು, ಈ ದೇಶಗಳು ಜಗತ್ತಿನ ಅತಿದೊಡ್ಡ ಹಾಟ್‌ಸ್ಪಾಟ್‌ಗಳಾಗಿವೆ ಎಂದು ಅಮೇರಿಕಾ ಮೂಲದ ಅಧ್ಯಯನದ ವರದಿಯೊಂದು ಬಹಿರಂಗಪಡಿಸಿದೆ.

ಇದರಲ್ಲಿ ಸುಮಾರು 2/3 ರಷ್ಟು ಮಕ್ಕಳು ಅಡುಗೆ ಇಂಧನಗಳಿಂದ ಉಂಟಾಗುವ ಹಾನಿಕಾರಕ ಹೊಗೆಯಿಂದಾಗಿ ಮರಣಹೊಂದಿವೆ.

ಸ್ಟೇಟ್ ಆಫ್ ಗ್ಲೋಬಲ್ ಏರ್ 2020 ರ ಅಧ್ಯಯನ ಪ್ರಕಾರ, ಭಾರತದಲ್ಲಿ 116,000 ಕ್ಕೂ ಹೆಚ್ಚು ಶಿಶುಗಳು ವಾಯುಮಾಲಿನ್ಯದಿಂದ ಸಾವನ್ನಪ್ಪಿವೆ ಎಂದು ತಿಳಿದುಬಂದಿದೆ. ಇದು ಆಫ್ರಿಕಾದಲ್ಲಿ 236,000 ರಷ್ಟಿದೆ.

ಅಮೇರಿಕಾ ಮೂಲದ ಹೆಲ್ತ್ ಎಫೆಕ್ಟ್ಸ್ ಇನ್ಸ್ಟಿಟ್ಯೂಟ್ ಮತ್ತು ಇನ್ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಮತ್ತು ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ ಪ್ರಾಜೆಕ್ಟ್ ಈ ಅಂದಾಜುಗಳನ್ನು ಊಹಿಸಿದೆ.

ಗರ್ಭಾವಸ್ಥೆಯಲ್ಲಿದ್ದಾಗ ತಾಯಂದಿರು ಉಸಿರಾಡುವ ಗಾಳಿಯು ಮಾಲಿನ್ಯಪೂರಿತವಾಗಿದ್ದರೆ, ಅದು ಬೆಳೆಯುತ್ತಿರುವ ಭ್ರೂಣಗಳ ಮೇಲೆ ಪರಿಣಾಮ ಬೀರುತ್ತದೆ. ಹಾಗಾಗಿ ಕಡಿಮೆ ಜನನ ತೂಕ, ಅವಧಿಪೂರ್ವ ಜನನದಂತಹ ಅಪಾಯಗಳು ಸಂಭವಿಸಬಹುದು ನ್‌ಡಿಟಿವಿ ವರದಿ ಮಾಡಿದೆ.

ಈ ಪರಿಸ್ಥಿತಿಗಳು ಗಂಭೀರ ತೊಡಕುಗಳಿಗೆ ಸಂಬಂಧಿಸಿದ್ದು, ಈಗಾಗಲೇ ಎರಡೂ ಪ್ರದೇಶಗಳಲ್ಲಿನ ನವಜಾತ ಶಿಶುಗಳ ಸಾವುಗಳಿಗೆ ಕಾರಣವಾಗಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ‘ಐಟಂ’ ಹೇಳಿಕೆಗೆ ಕಮಲನಾಥ್ ವಿವರಣೆ ನೀಡಬೇಕು ಎಂದ ಚುನಾವಣಾ ಆಯೋಗ!

“ಶಿಶುವಿನ ಆರೋಗ್ಯವು ಪ್ರತಿ ಸಮಾಜದ ಭವಿಷ್ಯಕ್ಕೆ ನಿರ್ಣಾಯಕವಾಗಿದ್ದು, ಈ ಹೊಸ ಫಲಿತಾಂಶವು ದಕ್ಷಿಣ ಏಷ್ಯಾ ಮತ್ತು ಉಪ ಸಹರಾದ ಆಫ್ರಿಕಾದಲ್ಲಿ ಜನಿಸಿದ ಶಿಶುಗಳಿಗೆ ಹೆಚ್ಚಿನ ಅಪಾಯವನ್ನು ಸೂಚಿಸುತ್ತದೆ. ಕಳಪೆ-ಗುಣಮಟ್ಟದ ಅಡುಗೆ ಇಂಧನಗಳಿಂದ ಉಂಟಾಗುವ ವಾಯುಮಾಲಿನ್ಯವು ನವಜಾತ ಶಿಶುಗಳ ಸಾವಿಗೆ ಪ್ರಮುಖ ಕಾರಣವಾಗಿದೆ” ಎಂದು ಎಚ್‌ಇಐ ಅಧ್ಯಕ್ಷ ಡಾನ್ ಗ್ರೀನ್‌ಬಾಮ್ ಹೇಳಿದ್ದಾರೆ.

ಒಟ್ಟಾರೆಯಾಗಿ, 2019 ರಲ್ಲಿ ವಿಶ್ವದಾದ್ಯಂತ 6.7 ಮಿಲಿಯನ್ ನವಜಾತ ಶಿಶುಗಳ ಸಾವುಗಳಿಗೆ ವಾಯುಮಾಲಿನ್ಯ ಕಾರಣವಾಗಿದೆ ಎಂದು ವರದಿಯು ಹೇಳಿದೆ.

ಪ್ರತಿ ವರ್ಷವೂ ಜಾಗತಿಕ ತಾಪಮಾನ ಏರುತ್ತಲೇ ಇದ್ದು, ಜಗತ್ತಿನ ಪರಿಸರ ತಜ್ಞರಲ್ಲಿ ಆತಂಕ ಮೂಡಿಸುತ್ತಿತ್ತು. ಪರಿಸರ ನಾಶದಿಂದ ಹಿಡಿದು ವಾಯುಮಾಲಿನ್ಯದವರೆಗಿನ ಅಂಶಗಳು ಪ್ರತಿಯೊಂದಕ್ಕೂ ಸಂಬಂಧಿಸಿವೆ.

ಆದರೆ ಕೆಲವು ಅಧ್ಯಯನದ ವರದಿಗಳ ಪ್ರಕಾರ, ಕೊರೊನಾ ರೋಗವನ್ನು ನಿಯಂತ್ರಿಸುವ ಸಲುವಾಗಿ ಲಾಕ್‌ಡೌನ್ ಹೇರಿದ್ದರ ಪರಿಣಾಮವಾಗಿ ಮಹಾನಗರಗಳಲ್ಲಿ ವಾಹನಗಳ ದಟ್ಟಣೆ ಕಡಿಮೆಯಾಗಿದ್ದು, ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯವೂ ಕಡಿಮೆಯಾಗಿತ್ತು. ಹಾಗಾಗಿ ದೆಹಲಿಯಂತಹ ನಗರಗಳಲ್ಲಿಯೂ ತಿಳಿಯಾದ ಆಕಾಶ ಮತ್ತು ಚಂದ್ರ ತಾರೆಗಳನ್ನು ನೋಡಲು ಸಾಧ್ಯವಾಗಿತ್ತು. ಆದರೆ ಈ ಸಂತೋಷ ತುಂಬಾ ದಿನ ಉಳಿಯುವುದಿಲ್ಲ ಎಂಬುದನ್ನು ಪ್ರಸ್ತುತ ವಿದ್ಯಮಾನಗಳು ತೋರಿಸಿಕೊಟ್ಟಿವೆ.

ಆದರೆ ಈಗ ಈ ಅಧ್ಯಯನದ ವರದಿಯನ್ನು ಗಮನಿಸಿದರೆ, ಇಡೀ ಜಗತ್ತು ದೊಡ್ಡ ಅಪಾಯದ ಅಂಚಿನಲ್ಲಿದೆ ಎಂಬುದನ್ನು ಅಲ್ಲಗಳೆಯಲು ಸಾಧ್ಯವಿಲ್ಲ.


ಇದನ್ನೂ ಓದಿ: ಹತ್ರಾಸ್ ಪ್ರಕರಣ: ವಿಧಿವಿಜ್ಞಾನ ವರದಿ ಪ್ರಶ್ನಿಸಿದ್ದ ವೈದ್ಯರ ಅಮಾನತು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...