Homeಮುಖಪುಟವಾಯು ಮಾಲಿನ್ಯ: ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ನಂತರ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ ದೆಹಲಿ ಸರ್ಕಾರ

ವಾಯು ಮಾಲಿನ್ಯ: ಸುಪ್ರೀಂಕೋರ್ಟ್ ಛೀಮಾರಿ ಹಾಕಿದ ನಂತರ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ ದೆಹಲಿ ಸರ್ಕಾರ

- Advertisement -
- Advertisement -

ವಾಯು ಮಾಲಿನ್ಯ ಇದ್ದರೂ ಶಾಲೆ ತೆರೆದಿರುವುದರ ಬಗ್ಗೆ ದೆಹಲಿ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಛೀಮಾರಿ ಹಾಕಿದೆ. ಇದರ ನಂತರ ಮುಂದಿನ ಆದೇಶದವರೆಗೆ ದೆಹಲಿಯ ಶಾಲೆಗಳನ್ನು ನಾಳೆಯಿಂದ ಮುಚ್ಚಲಾಗುವುದು ಎಂದು ರಾಜ್ಯ ಪರಿಸರ ಸಚಿವ ಗೋಪಾಲ್ ರೈ ಗುರುವಾರ ಘೋಷಿಸಿದ್ದಾರೆ.

“ವಾಯು ಗುಣಮಟ್ಟ ಸುಧಾರಿಸುವ ಮುನ್ಸೂಚನೆಯನ್ನು ಪರಿಗಣಿಸಿ ನಾವು ಶಾಲೆಗಳನ್ನು ಪುನರಾರಂಭಿಸಿದ್ದೇವೆ. ಆದಾಗ್ಯೂ, ವಾಯು ಮಾಲಿನ್ಯದ ಮಟ್ಟವು ಮತ್ತೆ ಹೆಚ್ಚಾಗಿದ್ದು, ಮುಂದಿನ ಆದೇಶದವರೆಗೆ ನಾವು ಶುಕ್ರವಾರದಿಂದ ಶಾಲೆಗಳನ್ನು ಮುಚ್ಚಲು ನಿರ್ಧರಿಸಿದ್ದೇವೆ” ಎಂದು ಗೋಪಾಲ್ ರೈ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ: ಸೋಮವಾರದಿಂದ ಶಾಲಾ- ಕಾಲೇಜು ಮತ್ತೆ ಆರಂಭ

ಹದಗೆಡುತ್ತಿರುವ ಗಾಳಿಯ ಗುಣಮಟ್ಟಕ್ಕೆ ಮುಖ್ಯ ಕಾರಣವೆಂದು ಪರಿಗಣಿಸಲಾದ ಕೈಗಾರಿಕೆ ಮತ್ತು ವಾಹನದ ಮಾಲಿನ್ಯದ ವಿರುದ್ದ ಕ್ರಮ ಕೈಗೊಳ್ಳಲು ಒಕ್ಕೂಟ ಸರ್ಕಾರ, ದೆಹಲಿ ಮತ್ತು ನೆರೆಯ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ 24 ಗಂಟೆಗಳ ಅಲ್ಟಿಮೇಟಮ್ ನೀಡಿದೆ.

ಶಾಲೆಗಳ ಪುನರಾರಂಭದ ಕುರಿತು ಅರವಿಂದ್ ಕೇಜ್ರಿವಾಲ್ ಸರ್ಕಾರವನ್ನು ಟೀಕಿಸಿದ ಸುಪ್ರೀಂ ಕೋರ್ಟ್, “ಮೂರು-ನಾಲ್ಕು ವರ್ಷದ ಮಕ್ಕಳು ಶಾಲೆಗೆ ಹೋಗುತ್ತಿದ್ದಾರೆ, ಆದರೆ ವಯಸ್ಕರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ. “ನಿಮ್ಮ ಸರ್ಕಾರದ ಆಡಳಿತವನ್ನು ನಡೆಸಲು ನಾವು ಯಾರನ್ನಾದರೂ ನೇಮಿಸುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ಎನ್‌. ವಿ. ರಮಣ ಹೇಳಿದ್ದಾರೆ.

ನವೆಂಬರ್ 13 ರಿಂದ ಮುಚ್ಚಲ್ಪಟ್ಟ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳ ತರಗತಿಗಳು ಸೋಮವಾರದಿಂದ ಪುನರಾರಂಭಗೊಂಡಿದ್ದವು.

ಕಳೆದ ತಿಂಗಳು ದೀಪಾವಳಿಯ ನಂತರ ದೆಹಲಿಯ ಗಾಳಿಯ ಗುಣಮಟ್ಟ ತೀವ್ರವಾಗಿ ಹದಗೆಟ್ಟಿದೆ. ಕೃಷಿ ಭೂಮಿಯಲ್ಲಿ ಹೊತ್ತಿಸಲಾಗುತ್ತಿರುವ ಬೆಂಕಿ ಕೂಡಾ ಈ ವಾಯು ಮಾಲಿನ್ಯಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ದೆಹಲಿಯು ಒಂದು ತಿಂಗಳಿನಿಂದ ವಾಯು ಮಾಲಿನ್ಯದಿಂದ ಬಳಲುತ್ತಿದೆ. ಮುಂದಿನ ಆದೇಶದವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧವಿದೆ.

ಇದನ್ನೂ ಓದಿ:ದೆಹಲಿ ವಾಯುಮಾಲಿನ್ಯ: 5 ಸ್ಟಾರ್‌ ಹೋಟೆಲ್‌ನಲ್ಲಿ ಕುಳಿತ‍ ಜನ ರೈತರನ್ನು ದೂಷಿಸುತ್ತಿದ್ದಾರೆ- ಸುಪ್ರೀಂ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...