Homeಮುಖಪುಟವಾಯು ಮಾಲಿನ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿರುವ ದೆಹಲಿಯ 69% ಕುಟುಂಬಗಳು: ಸಮೀಕ್ಷೆ

ವಾಯು ಮಾಲಿನ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿರುವ ದೆಹಲಿಯ 69% ಕುಟುಂಬಗಳು: ಸಮೀಕ್ಷೆ

- Advertisement -
- Advertisement -

ದೆಹಲಿಯ ಗಾಳಿಯ ಗುಣಮಟ್ಟ ಹದಗೆಡುತ್ತಿದ್ದು, ಈ ನಡುವೆ ರಾಜಧಾನಿಯ 69% ಕುಟುಂಬಗಳ ಒಂದು ಅಥವಾ ಒಂದಕ್ಕಿಂತ ಹೆಚ್ಚಿನ ಸದಸ್ಯರು ಗಂಟಲು ನೋವು, ಕೆಮ್ಮು ಸೇರಿದಂತೆ ಮಾಲಿನ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಇತ್ತೀಚಿನ ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ವಾಯು ಮಾಲಿನ್ಯ

ದೀಪಾವಳಿಯ ರಾತ್ರಿಯಲ್ಲಿ ದೆಹಲಿಯಲ್ಲಿ ಹೆಚ್ಚಿನ ಮಟ್ಟದ ವಾಯು ಮಾಲಿನ್ಯ ದಾಖಲಾಗಿದೆ. ರಾಜಧಾನಿಯ ಹಲವಾರು ಪ್ರದೇಶಗಳಲ್ಲಿ ವಾಯು ಗುಣಮಟ್ಟ ಸೂಚ್ಯಂಕ (AQI) ರೀಡಿಂಗ್‌ಗಳು ಗರಿಷ್ಠ ಮಟ್ಟ 999 ಕ್ಕೆ ಏರಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಜಿಟಲ್ ಪ್ಲಾಟ್‌ಫಾರ್ಮ್ ಆಗಿರುವ ಲೋಕಲ್ ಸರ್ಕಲ್ಸ್ ನಡೆಸಿದ ಸಮೀಕ್ಷೆಯು ರಾಜಧಾನಿ ದೆಹಲಿಯಾದ್ಯಂತ 21,000 ಕ್ಕೂ ಹೆಚ್ಚು ನಿವಾಸಿಗಳಿಂದ ಪ್ರತಿಕ್ರಿಯೆಗಳನ್ನು ಸಂಗ್ರಹಿಸಿದೆ. ಇದರ ಆಧಾರದಲ್ಲಿ ದೆಹಲಿಯ ಜನಸಂಖ್ಯೆಯ ಮೇಲೆ ವಾಯು ಮಾಲಿನ್ಯದ ವ್ಯಾಪಕ ಪರಿಣಾಮಗಳನ್ನು ವರದಿಯು ಬಹಿರಂಗಪಡಿಸಿದೆ.

ಹೆಚ್ಚುತ್ತಿರುವ ವಾಯುಮಾಲಿನ್ಯದಿಂದಾಗಿ 62% ಕುಟುಂಬಗಳ ಒಬ್ಬ ಅಥವಾ ಅದಕ್ಕಿಂತ ಹೆಚ್ಚಿನ ಸದಸ್ಯರು ಕಣ್ಣು ಉರಿಯನ್ನು ಅನುಭವಿಸುತ್ತಿದ್ದಾರೆ ಎಂದು ಅಧ್ಯಯನವು ಹೇಳಿದೆ. ಜೊತೆಗೆ 46% ಜನರು ಮೂಗು ಸೋರುವಿಕೆ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ಅದು ಬಹಿರಂಗಪಡಿಸಿದೆ.

ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ 31% ದಷ್ಟು ಜನರು ಉಸಿರಾಟದ ತೊಂದರೆ ಅಥವಾ ಆಸ್ತಮಾ ಕಾಯಿಲೆಯಿಂದ ಬಳಲುತ್ತಿರುವ ಬಗ್ಗೆ ವರದಿ ಮಾಡಿದ್ದಾರೆ. ಜೊತೆಗೆ 31% ದಷ್ಟು ಜನರು ತಲೆನೋವು ಅನುಭವಿಸುತ್ತಿದ್ದಾರೆಂದು ತಿಳಿಸಿದ್ದಾರೆ. ಸುಮಾರು 23% ಜನರು ಆತಂಕ ಅಥವಾ ಏಕಾಗ್ರತೆಯ ತೊಂದರೆಯನ್ನು ವ್ಯಕ್ತಪಡಿಸಿದ್ದು, 15% ದಷ್ಟು ಜನರು ನಿದ್ರಾಹೀನತೆ ಬಗ್ಗೆ ಉಲ್ಲೇಖಿಸಿದ್ದಾರೆ.

ಆದಾಗ್ಯೂ, 31% ರಷ್ಟು ಜನರು ತಾವು ಅಥವಾ ಅವರ ಕುಟುಂಬ ಸದಸ್ಯರು ಮಾಲಿನ್ಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳನ್ನು ಎದುರಿಸುತ್ತಿಲ್ಲ ಎಂದು ಸೂಚಿಸಿದ್ದಾರೆ.

“ಹಲವರಿಗೆ ಈಗಾಗಲೇ ಕೆಮ್ಮು ಮತ್ತು ಶೀತವಿದೆ. ಕೆಲವರು ಈಗಾಗಲೇ ಆಸ್ತಮಾ, ಬ್ರಾಂಕೈಟಿಸ್, ಮತ್ತು ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ (COPD) ನಂತಹ ಉಸಿರಾಟದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ದೀಪಾವಳಿಯ ನಂತರದ ವಾಯು ಮಾಲಿನ್ಯ ಅಪಾಯಕಾರಿ ಮಟ್ಟವನ್ನು ತಲುಪಿದ್ದ ಪರಿಸ್ಥಿತಿಯಿಂದ ರಾಜಧಾನಿಯ ಜನರು ಆರೋಗ್ಯ ಇನ್ನಷ್ಟು ಹದಗೆಡಿಸುವ ಸಾಧ್ಯತೆಯಿದೆ” ಎಂದು ಸಮೀಕ್ಷೆ ಹೇಳಿದೆ.

ಇದನ್ನೂ ಓದಿ: ಮುಂದುವರಿದ ಇಸ್ರೇಲ್ ಆಕ್ರಮಣ | ಗಾಝಾದಲ್ಲಿ 84 ಸಾವು, ಲೆಬನಾನ್‌ನಲ್ಲೂ ಹಲವರ ಹತ್ಯೆ

ಮುಂದುವರಿದ ಇಸ್ರೇಲ್ ಆಕ್ರಮಣ | ಗಾಝಾದಲ್ಲಿ 84 ಸಾವು, ಲೆಬನಾನ್‌ನಲ್ಲೂ ಹಲವರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...