ಅಹಮದಾಬಾದ್: ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಪತನದಲ್ಲಿ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಪ್ರಯಾಣಿಕರಲ್ಲಿ 241 ಜನರು ಮೃತಪಟ್ಟಿರುವ ಶಂಕೆಯಿದೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ ಪಾರಾಗಿರುವುದು ದೃಢವಾಗಿದೆ. ಆತನನ್ನು ಅಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ.
ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ದೃಢಪಟ್ಟಿರುವ ವ್ಯಕ್ತಿಯನ್ನು 40 ವರ್ಷದ ರಮೇಶ್ ವಿಶ್ವಾಸ್ ಕುಮಾರ್ ಎಂದು ಗುರುತಿಸಲಾಗಿದೆ. ಅವರಿಗೆ ಅಹಮದಾಬಾದ್‌ನ ಅಸರ್ವಾ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೆಲವರು ಚಿಕಿತ್ಸೆ ಪಡೆಯುತ್ತಿದ್ದು ಸಾವಿನ ಸಂಖ್ಯೆಯನ್ನು ನಿಖರವಾಗಿ ಈಗ ಹೇಳಲು ಸಾಧ್ಯವಿಲ್ಲವೆಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
2009ರ ಸೆಪ್ಟೆಂಬರ್ 2ರಂದು ಬೆಲ್ 430 ಹೆಲಿಕಾಪ್ಟರ್ ಪತನವಾಗಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ
ವೈ. ಎಸ್ ರಾಜಶೇಖರ್ ರೆಡ್ಡಿ ಮೃತಪಟ್ಟಿದ್ದರು. ಗುರುವಾರ (ಜೂ.12) ಅಹಮದಾಬಾದ್ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಐದೇ ನಿಮಿಷಕ್ಕೆ ಅಪಘತಕ್ಕೀಡಾಗಿದೆ.
ಮಾಜಿ ಸಿಎಂ ವಿಜಯ್ ರೂಪಾನಿಯವರು ತಮ್ಮ ಮಗಳನ್ನು ಭೇಟಿ ಮಾಡಲು ಇದೇ ವಿಮಾನದಲ್ಲಿ ಲಂಡನ್ಗೆ ತೆರಳುತ್ತಿದ್ದರು. ವಿಜಯ್ ರೂಪಾನಿಯವರು ಗುಜರಾತ್ನ 16ನೇ ಮುಖ್ಯಮಂತ್ರಿಯಾಗಿದ್ದರು. ಇವರ ಕುರಿತು ಇನ್ನೂ ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಮಾನದಲ್ಲಿ 169 ಭಾರತೀಯರು, 53 ಬ್ರಿಟಿಷ್ ಪ್ರಜೆಗಳು, ಏಳು ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಜೆ ವಿಮಾನದಲ್ಲಿದ್ದರು. ಸಂಜೆ ನಂತರ, ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ 241 ಪ್ರಯಾಣಿಕರು ಅಪಘಾತದಲ್ಲಿ ಸಾವನ್ನಪ್ಪಿರುವ ಶಂಕೆಯಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ಈ ಘಟನೆ “ಎಲ್ಲರನ್ನೂ ದಿಗ್ಭ್ರಮೆಗೊಳಿಸಿದೆ ಮತ್ತು ದುಃಖಿಸಿದೆ” ಎಂದು ಹೇಳಿದರು. ವಿಮಾನ ಟೇಕ್ ಆಫ್‌ಗೆ ಅನುಮತಿ ಪಡೆದ ಸುಮಾರು ಒಂಬತ್ತು ನಿಮಿಷಗಳ ನಂತರ ಅಪಘಾತ ಸಂಭವಿಸಿದೆ ಎಂದು ರಾಜ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಏರ್ ಇಂಡಿಯಾ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, “ನಾವು ವಿವರಗಳನ್ನು ಖಚಿತಪಡಿಸಿಕೊಳ್ಳುತ್ತಿದ್ದೇವೆ ಮತ್ತು ಸಾಧ್ಯವಾದಷ್ಟು ಬೇಗ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳುತ್ತೇವೆ. ಇದಕ್ಕಾಗಿ ಏರ್ ಇಂಡಿಯಾವು 1800 5691 444 ಎಂಬ ಮೀಸಲಾದ ಪ್ರಯಾಣಿಕರ ಹಾಟ್‌ಲೈನ್ ಸಂಖ್ಯೆಯನ್ನು ಸಹ ಸ್ಥಾಪಿಸಿದೆ.
ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಇದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ
ಗುಜರಾತ್ | 200 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ


